ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

'ಹಾಕಿ ಭಾರತದ ರಾಷ್ಟ್ರೀಯ ಕ್ರೀಡೆ ಅಲ್ಲ!'; ಕೇಂದ್ರ ಸರ್ಕಾರಕ್ಕೆ ಹೆಚ್ಚಾಯ್ತು ಒತ್ತಡ!

Tokyo Olympics 2020: Plea In Supreme Court Seeks Hockey Be Recognised As National Game Of India

ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದು, ಮಹಿಳಾ ಹಾಕಿ ತಂಡ ಕೂಡ ಉತ್ತಮ ಪ್ರದರ್ಶನವನ್ನು ನೀಡಿ ಕೊನೆಯ ಕ್ಷಣದಲ್ಲಿ ಪದಕ ಗೆಲ್ಲುವ ಅವಕಾಶವನ್ನು ತಪ್ಪಿಸಿಕೊಂಡಿತು. ಸದ್ಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಹಾಕಿ ತಂಡಗಳು ಉತ್ತಮ ಪ್ರದರ್ಶನ ನೀಡಿದ ಬೆನ್ನಲ್ಲೇ ಹಾಕಿ ಆಟವನ್ನು ರಾಷ್ಟ್ರೀಯ ಕ್ರೀಡೆಯನ್ನಾಗಿ ಘೋಷಿಸಬೇಕೆಂಬ ಒತ್ತಡಗಳು ಹೆಚ್ಚಾಗಿವೆ.

ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತ ಕ್ರೀಡಾಪಟುಗಳಿಗೆ ವಿವಿಧ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತ ಕ್ರೀಡಾಪಟುಗಳಿಗೆ ವಿವಿಧ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ

ಟೋಕಿಯೋ ಒಲಿಂಪಿಕ್ಸ್‌ 2020ಕ್ಕೆ ತೆರೆ ಬಿದ್ದಿದ್ದು ಕೊರೊನಾ ನಂತರ ಒಂದು ವರ್ಷ ತಡವಾಗಿ ನಡೆದ ಈ ಕ್ರೀಡಾಕೂಟದಲ್ಲಿ ಯಾವುದೇ ಅಡಚಣೆಯಿಲ್ಲದೆ ಕ್ರೀಡಾಪಟುಗಳು ಯಶಸ್ವಿಯಾಗಿ ಭಾಗವಹಿಸಿದ್ದಾರೆ. ಭಾನುವಾರ (ಆಗಸ್ಟ್ 8) ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ಗೆ ಅಧಿಕೃತವಾಗಿ ತೆರೆ ಬಿದ್ದಿದ್ದು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕ 39 ಚಿನ್ನದ ಪದಕಗಳು ಸೇರಿದಂತೆ ಒಟ್ಟು 113 ಪದಕಗಳನ್ನು ತನ್ನದಾಗಿಸಿಕೊಂಡು ಪದಕ ಗೆದ್ದ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

ಟೋಕಿಯೋ ಒಲಿಂಪಿಕ್ಸ್‌: ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಸಿಕ್ಕ ಹಣ ಮತ್ತು ಬಹುಮಾನಗಳೆಷ್ಟು ಗೊತ್ತಾ?ಟೋಕಿಯೋ ಒಲಿಂಪಿಕ್ಸ್‌: ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಸಿಕ್ಕ ಹಣ ಮತ್ತು ಬಹುಮಾನಗಳೆಷ್ಟು ಗೊತ್ತಾ?

ಇತ್ತ ಒಲಿಂಪಿಕ್ಸ್ ಇತಿಹಾಸದಲ್ಲಿಯೇ ಹಿಂದೆಂದೂ ತಲುಪದ ಹಂತವನ್ನು ಭಾರತ ಈ ಬಾರಿಯ ಟೋಕಿಯೋ ಒಲಿಂಪಿಕ್ಸ್ ಮೂಲಕ ತಲುಪಿದ್ದು ಇದೇ ಮೊದಲ ಬಾರಿಗೆ 7 ಪದಕಗಳನ್ನು ತನ್ನದಾಗಿಸಿಕೊಂಡು ಹೊಸ ಮೈಲಿಗಲ್ಲನ್ನು ನೆಟ್ಟಿದೆ. ಭಾರತದ ಪರ ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ನೀರಜ್ ಚೋಪ್ರಾ ಚಿನ್ನ , ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ, ಪುರುಷರ ಫ್ರೀಸ್ಟೈಲ್ ಕುಸ್ತಿಯಲ್ಲಿ ರವಿ ದಾಹಿಯಾ ಬೆಳ್ಳಿ, ಭಾರತದ ಪುರುಷರ ಹಾಕಿ ತಂಡ ಕಂಚು, ಮಹಿಳಾ ವೆಲ್ಟರ್ ವೇಟ್ ಬಾಕ್ಸಿಂಗ್ ವಿಭಾಗದಲ್ಲಿ ಲವ್ಲಿನಾ ಬೋರ್ಗೊಹೈನ್ ಕಂಚು, ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಪಿವಿ ಸಿಂಧೂ ಕಂಚು ಮತ್ತು ಪುರುಷರ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಜರಂಗ್ ಪೂನಿಯಾ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹೀಗೆ ಭಾರತದ ಪರ ಈ ಮೇಲ್ಕಂಡ ಕ್ರೀಡಾಪಟುಗಳು ಪದಕವನ್ನು ಜಯಿಸಿದರು. ಅದರಲ್ಲಿಯೂ 41 ವರ್ಷಗಳ ಬಳಿಕ ಭಾರತದ ಪುರುಷರ ಹಾಕಿ ತಂಡ ಪದಕವನ್ನು ಗೆದ್ದು ಬೀಗಿತು ಮತ್ತು ಮಹಿಳಾ ಹಾಕಿ ತಂಡ ಕೂಡ ಉತ್ತಮ ಪ್ರದರ್ಶನವನ್ನು ನೀಡಿ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ ಎಡವಿತು. ಹೀಗೆ ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಹಾಕಿ ತಂಡಗಳು ಉತ್ತಮ ಪ್ರದರ್ಶನ ನೀಡಿದ ಬೆನ್ನಲ್ಲೇ ಹಾಕಿ ಆಟವನ್ನು ರಾಷ್ಟ್ರೀಯ ಕ್ರೀಡೆಯನ್ನಾಗಿ ಘೋಷಿಸಬೇಕೆಂಬ ಒತ್ತಡಗಳು ಹೆಚ್ಚಾಗಿವೆ.

ಹಾಕಿಯನ್ನು ಭಾರತದ ರಾಷ್ಟ್ರೀಯ ಕ್ರೀಡೆಯನ್ನಾಗಿ ಘೋಷಿಸುವಂತೆ ಅರ್ಜಿ ಸಲ್ಲಿಕೆ

ಹಾಕಿಯನ್ನು ಭಾರತದ ರಾಷ್ಟ್ರೀಯ ಕ್ರೀಡೆಯನ್ನಾಗಿ ಘೋಷಿಸುವಂತೆ ಅರ್ಜಿ ಸಲ್ಲಿಕೆ

ಟೋಕಿಯೊ ಒಲಿಂಪಿಕ್ಸ್ ಮುಗಿಯುತ್ತಿದ್ದಂತೆ ವಿಶಾಲ್ ತಿವಾರಿ ಎಂಬ ವಕೀಲರೊಬ್ಬರು ಹಾಕಿಯನ್ನು ಭಾರತದ ರಾಷ್ಟ್ರೀಯ ಕ್ರೀಡೆಯನ್ನಾಗಿ ಅಧಿಕೃತವಾಗಿ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಾಕಿ ನಮ್ಮ ರಾಷ್ಟ್ರದ ರಾಷ್ಟ್ರೀಯ ಕ್ರೀಡೆಯಾಗಿದೆ, ಆದರೆ ಇತ್ತೀಚಿನ ದಿನಗಳಲ್ಲಿ ಹಾಕಿ ಆಟಕ್ಕೆ ಸಿಗಬೇಕಾದ ಬೆಂಬಲ ಸರ್ಕಾರದಿಂದ ಸಿಕ್ಕಿಲ್ಲ ಮತ್ತು ಹಾಕಿ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ ಹೀಗಾಗಿ ಹಾಕಿ ಆಟವನ್ನು ಅಧಿಕೃತವಾಗಿ ರಾಷ್ಟ್ರೀಯ ಕ್ರೀಡೆಯನ್ನಾಗಿ ಕೇಂದ್ರ ಸರ್ಕಾರ ಘೋಷಿಸಬೇಕೆಂದು ವಕೀಲ ವಿಶಾಲ್ ತಿವಾರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾರತಕ್ಕೆ ಯಾವುದೇ ರಾಷ್ಟ್ರೀಯ ಕ್ರೀಡೆ ಇಲ್ಲ ಎಂದಿದ್ದ ಕೇಂದ್ರ ಸರ್ಕಾರ!

ಭಾರತಕ್ಕೆ ಯಾವುದೇ ರಾಷ್ಟ್ರೀಯ ಕ್ರೀಡೆ ಇಲ್ಲ ಎಂದಿದ್ದ ಕೇಂದ್ರ ಸರ್ಕಾರ!

ಈ ಹಿಂದೆ ಉತ್ತರ ಪ್ರದೇಶದ ಕಾನೂನು ವಿದ್ಯಾರ್ಥಿ ಶಿವಮ್ ಕುಮಾರ್ ಗುಪ್ತಾ ಎಂಬಾತ ಮಾಹಿತಿ ಹಕ್ಕಿನ ಅಡಿಯಲ್ಲಿ ಭಾರತದ ರಾಷ್ಟ್ರೀಯ ಕ್ರೀಡೆ ಯಾವುದು ಎಂದು ಕ್ರೀಡಾ ಸಚಿವಾಲಯಕ್ಕೆಪ್ರಶ್ನೆಯನ್ನು ಹಾಕಿದ್ದರು. ಈ ಪ್ರಶ್ನೆಗೆ ಉತ್ತರಿಸಿದ ಕ್ರೀಡಾ ಸಚಿವಾಲಯ ಭಾರತಕ್ಕೆ ಅಧಿಕೃತವಾಗಿ ಯಾವುದೇ ರಾಷ್ಟ್ರೀಯ ಕ್ರೀಡೆ ಇಲ್ಲ, ಆದರೆ ಎಲ್ಲಾ ಕ್ರೀಡೆಗಳನ್ನು ಸಹ ಸಮವಾಗಿ ಪ್ರೋತ್ಸಾಹಿಸುವುದು ನಮ್ಮ ದೇಶದ ಗುರಿ ಎಂದು ಹೇಳಿಕೆ ನೀಡಿತ್ತು.

ಸಾಮಾಜಿಕ ಜಾಲತಾಣದಲ್ಲಿಯೂ ಹೆಚ್ಚಾಯ್ತು ಕೂಗು

ಸಾಮಾಜಿಕ ಜಾಲತಾಣದಲ್ಲಿಯೂ ಹೆಚ್ಚಾಯ್ತು ಕೂಗು

ಹಾಕಿಯನ್ನು ಭಾರತದ ರಾಷ್ಟ್ರೀಯ ಕ್ರೀಡೆ ಎಂದೇ ನಂಬಲಾಗಿದೆ, ಆದರೆ ಕ್ರೀಡಾ ಸಚಿವಾಲಯ ಈ ಹಿಂದೆ ನೀಡಿದ್ದ ಉತ್ತರ ಸದ್ಯಕ್ಕೆ ವೈರಲ್ ಆಗಿದ್ದು ಇದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ಕ್ರೀಡೆಗಳನ್ನು ಕ್ರೀಡಾ ಸಚಿವಾಲಯ ಸಮವಾಗಿ ಕಾಣಲಿ, ಆದರೆ ಹಾಕಿ ಆಟವನ್ನು ಅಧಿಕೃತವಾಗಿ ರಾಷ್ಟ್ರೀಯ ಕ್ರೀಡೆ ಎಂದು ಘೋಷಣೆ ಮಾಡಲಿ ಎಂದು ನೆಟ್ಟಿಗರು ಮನವಿ ಮಾಡಿದ್ದಾರೆ.

Story first published: Monday, August 9, 2021, 18:04 [IST]
Other articles published on Aug 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X