ವಿಶ್ವಕಪ್ ಕಬಡ್ಡಿ ವೇಳಾಪಟ್ಟಿ : ಕೊರಿಯಾ ವಿರುದ್ಧ ಭಾರತದ ಮೊದಲ ಪಂದ್ಯ
ಬೆಂಗಳೂರು, ಸೆ.15: ಎಂಟನೇ ಆವೃತ್ತಿಯ ಕಬಡ್ಡಿ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಚಾಂಪಿಯನ್ ಭಾರತ ತಂಡವನ್ನು ದಕ್ಷಿಣ ಕೊರಿಯಾ ಎದುರಿಸಿದೆ. ಅಕ್ಟೋಬರ್ 7ರಿಂದ 22ವರೆಗೆ ಟೂರ್ನಿ ನಡೆಯಲಿದೆ.
ಭಾರತದಲ್ಲಿ ಪ್ರೊ ಕಬಡ್ಡಿ ಲೀಗ್ ಯಶಸ್ಚಿಯಾಗಿರುವುದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶ್ವಕಪ್ ಕೂಡಾ ಯಶಸ್ವಿಯಾಗುವ ನಿರೀಕ್ಷೆಗಳಿವೆ.

ಅಹಮದಾಬಾದ್‌ನ ಟ್ರಾನ್ಸ್‌ಸ್ಟೇಡಿಯಾ ಕ್ರೀಡಾಂಗಣದಲ್ಲಿ ಅಕ್ಟೋಬರ್ 7 ರಿಂದ 22ವರೆಗೆ ಟೂರ್ನಿ ನಡೆಯಲಿದ್ದು, ಒಟ್ಟು 12 ತಂಡಗಳು ಕಣದಲ್ಲಿವೆ.
2 ಗುಂಪುಗಳಲ್ಲಿ ತಲಾ 6 ತಂಡಗಳನ್ನು ವಿಂಗಡಿಸಲಾಗಿದ್ದು, ರೌಂಡ್ ರಾಬಿನ್ ಮತ್ತು ನಾಕೌಟ್ ಮಾದರಿಯಲ್ಲಿ ಟೂರ್ನಿ ನಡೆಯಲಿದೆ. ಅ. 21 ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಅದರ ಮರುದಿನವೇ ಫೈನಲ್ ನಿಗದಿಯಾಗಿದೆ.ವಿಶ್ವಕಪ್‌ಗೆ ವಿಶೇಷ ಲಾಂಛನವನ್ನು ತಯಾರಿಸಲಾಗಿದ್ದು, ಸಿಂಹ ಗರ್ಜನೆಯ ಮುಖ ಹೊಂದಿದೆ.
ಗುಂಪು ಎ : ಭಾರತ, ಬಾಂಗ್ಲಾದೇಶ, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಹಾಗೂ ಅರ್ಜೆಂಟೀನಾ
ಗುಂಪು ಬಿ: ಇರಾನ್, ಥಾಯ್ಲೆಂಡ್, ಜಪಾನ್, ಯುಎಸ್ಎ, ಪೋಲೆಂಡ್ ಹಾಗೂ ಕೀನ್ಯಾ
(ಒನ್ಇಂಡಿಯಾ ಸುದ್ದಿ)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications