For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಡಿಸೆಂಬರ್ 30ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 2021, December 30: All matches preview, Predicted 7, Head to head details and live streaming

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಡಿಸೆಂಬರ್ 29ರ ಮಂಗಳವಾರದವರೆಗೂ ಒಟ್ಟು 20 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಗುಜರಾತ್ ಜೆಯಂಟ್ಸ್ ದ್ವಿತೀಯ ಸ್ಥಾನದಲ್ಲಿದೆ ಮತ್ತು ತಲಾ ಎರಡೆರೆಡು ಅಂಕಗಳನ್ನು ಪಡೆದಿರುವ ಪಾಟ್ನಾ ಪೈರೇಟ್ಸ್, ಜೈಪುರ ಪಿಂಕ್ ಪ್ಯಾಂಥರ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ಕ್ರಮವಾಗಿ ತೃತೀಯ, ನಾಲ್ಕನೇ ಮತ್ತು ಐದನೇ ಸ್ಥಾನಗಳನ್ನು ಪಡೆದುಕೊಂಡಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 20 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಡಿಸೆಂಬರ್ 30 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ಮತ್ತು ಯು ಮುಂಬಾ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ಬೆಂಗಳೂರು ಬುಲ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಜೈಪುರ್ ಪಿಂಕ್ ಪ್ಯಾಂಥರ್ಸ್ vs ಯು ಮುಂಬಾ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳಲ್ಲಿ ಸೆಣಸಾಟವನ್ನು ನಡೆಸಿದ್ದು ಎರಡು ಪಂದ್ಯಗಳಲ್ಲಿ ಜಯ ಗಳಿಸಿದ್ದು ಮತ್ತೊಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದರೆ, ಈ ಬಾರಿಯ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿರುವ ಯು ಮುಂಬಾ 1 ಪಂದ್ಯದಲ್ಲಿ ಗೆದ್ದು ಮತ್ತೊಂದು ಪಂದ್ಯದಲ್ಲಿ ಸೋತು ಹಾಗೂ ಇನ್ನುಳಿದ ಪಂದ್ಯವೊಂದರಲ್ಲಿ ಡ್ರಾ ಮಾಡಿಕೊಂಡು ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನ ಪಡೆದುಕೊಂಡಿದೆ. ಇನ್ನು ಇಂದು ಈ ಎರಡೂ ತಂಡಗಳು ಮುಖಾಮುಖಿಯಾಗಲಿದ್ದು ಇತ್ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯ 21ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಪ್ರಾರಂಭವಾಗಲಿದೆ. ಸದ್ಯ ಈಗಿರುವ ಅಂಕಪಟ್ಟಿಯ ಪ್ರಕಾರ ಯು ಮುಂಬಾ ತಂಡಕ್ಕಿಂತ ಜೈಪುರ್ ಪಿಂಕ್ ಪ್ಯಾಂಥರ್ಸ್ ಉತ್ತಮ ಹಂತದಲ್ಲಿಯೇ ಇರಬಹುದು ಆದರೆ ಇತ್ತಂಡಗಳ ನಡುವೆ ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯು ಮುಂಬಾ ತಂಡವೇ ಮುಂದಿದೆ. ಹೌದು, ಜೈಪುರ್ ಪಿಂಕ್ ಪ್ಯಾಂಥರ್ಸ್ ಹಾಗೂ ಯು ಮುಂಬಾ ತಂಡಗಳ ನಡುವೆ ಇದುವರೆಗೂ ಒಟ್ಟು 17 ಪಂದ್ಯಗಳು ನಡೆದಿದ್ದು ಯು ಮುಂಬಾ 9 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಜೈಪುರ್ ಪಿಂಕ್ ಪ್ಯಾಂಥರ್ 6 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ ಹಾಗೂ ಉಳಿದೆರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ಜೈಪುರ ಪಿಂಕ್ ಪ್ಯಾಂಥರ್ಸ್ ಸಂಭಾವ್ಯ ತಂಡ: ಅರ್ಜುನ್ ದೇಶ್ವಾಲ್ (ರೈಡರ್) ದೀಪಕ್ ನಿವಾಸ್ ಹೂಡಾ (ರೈಡರ್) ನಿತಿನ್ ರಾವಲ್ (ರೈಡರ್) ವಿಶಾಲ್ ಲಾಥರ್ (ಎಡ ಕವರ್) ಅಮಿತ್ ಖಾರ್ಬ್ (ಬಲ ಕವರ್) ಸಂದೀಪ್ ಧುಲ್ (ಎಡ ಮೂಲೆ) ಶಾಲ್ ಕುಮಾರ್ (ಬಲ ಮೂಲೆ)

ಯು ಮುಂಬಾ ಸಂಭಾವ್ಯ ತಂಡ: ಅಭಿಷೇಕ್ ಸಿಂಗ್ (ರೈಡರ್) ವಿ ಅಜಿತ್ ಕುಮಾರ್ (ರೈಡರ್) ಶಿವಂ (ಆಲ್ ರೌಂಡರ್) ಹರೇಂದ್ರ ಕುಮಾರ್ (ಎಡ ಕವರ್) ರಿಂಕು (ಬಲ ಕವರ್) ಫಝೆಲ್ ಅತ್ರಾಚಲಿ (ಎಡ ಮೂಲೆ) ರಾಹುಲ್ ಸೇಠಪಾಲ್ (ಬಲ ಮೂಲೆ)

ಪಂದ್ಯ 2: ಬೆಂಗಳೂರು ಬುಲ್ಸ್ vs ಹರಿಯಾಣ ಸ್ಟೀಲರ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇದುವರೆಗೂ 3 ಪಂದ್ಯಗಳನ್ನಾಡಿರುವ ಬೆಂಗಳೂರು ಬುಲ್ಸ್ 2 ಪಂದ್ಯಗಳಲ್ಲಿ ಗೆದ್ದು ಮತ್ತೊಂದು ಪಂದ್ಯದಲ್ಲಿ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿದ್ದರೆ, ಈ ಆವೃತ್ತಿಯಲ್ಲಿ ಇಲ್ಲಿಯವರೆಗೂ 3 ಪಂದ್ಯಗಳನ್ನಾಡಿರುವ ಹರಿಯಾಣ ಸ್ಟೀಲರ್ಸ್ 1 ಪಂದ್ಯದಲ್ಲಿ ಗೆದ್ದು ಮತ್ತೆರಡು ಪಂದ್ಯಗಳಲ್ಲಿ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದುಕೊಂಡಿದೆ. ಇನ್ನು ಈ ಎರಡೂ ತಂಡಗಳು ಇಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಇತ್ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 22ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭವಾಗಲಿದೆ. ಇನ್ನು ಬೆಂಗಳೂರು ಬುಲ್ಸ್ ಮತ್ತು ಹರಿಯಾಣ ಸ್ಟೀಲರ್ಸ್ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 4 ಬಾರಿ ಮುಖಾಮುಖಿಯಾಗಿದ್ದು ಬೆಂಗಳೂರು ಬುಲ್ಸ್ 2 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ ಹರಿಯಾಣ ಸ್ಟೀಲರ್ಸ್ ಉಳಿದೆರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹೀಗೆ ಇತ್ತಂಡಗಳ ನಡುವಿನ ಮುಖಾಮುಖಿ ಫಲಿತಾಂಶದಲ್ಲಿ ಎರಡೂ ತಂಡಗಳು ಸಹ ಸಮಬಲವನ್ನು ಸಾಧಿಸಿದ್ದು ಇಂದಿನ ಪಂದ್ಯ ರೋಚಕತೆಯಿಂದ ಕೂಡಿರಲಿದೆ.

ಬೆಂಗಳೂರು ಬುಲ್ಸ್ ಸಂಭಾವ್ಯ ತಂಡ: ಪವನ್ ಕುಮಾರ್ ಸೆಹ್ರಾವತ್ (ರೈಡರ್) ಚಂದ್ರನ್ ರಂಜಿತ್ (ರೈಡರ್) ಭರತ್ (ರೈಡರ್) ಮಹೇಂದರ್ ಸಿಂಗ್ (ಎಡ ಕವರ್) ಮಯೂರ್ ಕದಮ್ (ಬಲ ಕವರ್) ಅಮನ್ (ಎಡ ಮೂಲೆ) ಸೌರಭ್ ನಂದಲ್ (ಬಲ ಮೂಲೆ)

ಹರಿಯಾಣ ಸ್ಟೀಲರ್ಸ್ ಸಂಭಾವ್ಯ ತಂಡ: ವಿಕಾಶ್ ಕಾಂಡೋಲಾ (ರೈಡರ್) ಮೀಟು ಶರ್ಮಾ (ರೈಡರ್) ರೋಹಿತ್ ಗುಲಿಯಾ (ಆಲ್-ರೌಂಡರ್) ಜೈದೀಪ್ ದಹಿಯಾ (ಎಡ ಕವರ್) ಮೋಹಿತ್ ನಂದಲ್ (ರೈಟ್ ಕವರ್) ಸುರೇಂದರ್ ನಾಡಾ (ಎಡ ಮೂಲೆ) ರವಿಕುಮಾರ್ (ಬಲ ಮೂಲೆ)

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Thursday, December 30, 2021, 15:50 [IST]
Other articles published on Dec 30, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+