For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಡಿಸೆಂಬರ್ 31ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 2021, December 31: All matches preview, Predicted 7, Head to head details and live streaming

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಡಿಸೆಂಬರ್ 30ರ ಗುರುವಾರದವರೆಗೂ ಒಟ್ಟು 22 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಬೆಂಗಳೂರು ಬುಲ್ಸ್ ದ್ವಿತೀಯ ಸ್ಥಾನ ಮತ್ತು ಯು ಮುಂಬಾ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 22 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಡಿಸೆಂಬರ್ 31 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ತಮಿಳ್ ತಲೈವಾಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ತಮಿಳ್ ತಲೈವಾಸ್ vs ಪುಣೇರಿ ಪಲ್ಟಾನ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇದುವರೆಗೂ ಒಟ್ಟು 3 ಪಂದ್ಯಗಳನ್ನಾಡಿರುವ ತಮಿಳ್ ತಲೈವಾಸ್ ಯಾವುದೇ ಪಂದ್ಯದಲ್ಲಿಯೂ ಕೂಡಾ ಜಯ ಸಾಧಿಸಲಾಗದೇ ಒಂದು ಪಂದ್ಯದಲ್ಲಿ ಸೋಲುಂಡು ಮತ್ತೆರಡು ಪಂದ್ಯಗಳಲ್ಲಿ ಡ್ರಾ ಮಾಡಿಕೊಂಡಿದ್ದು ಅಂಕಪಟ್ಟಿಯಲ್ಲಿ 10ನೇ ಸ್ಥಾನವನ್ನು ಪಡೆದುಕೊಂಡಿದೆ. ಅತ್ತ ಸದ್ಯ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನವನ್ನು ಪಡೆದುಕೊಂಡಿರುವ ಪುಣೇರಿ ಪಲ್ಟಾನ್ 3 ಪಂದ್ಯಗಳನ್ನಾಡಿದ್ದು 1 ಪಂದ್ಯದಲ್ಲಿ ಜಯ ಸಾಧಿಸಿ ಮತ್ತೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋಲುಂಡಿದೆ. ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಅಂಕಪಟ್ಟಿಯಲ್ಲಿ ಕಳಪೆ ಸ್ಥಾನಗಳನ್ನು ಪಡೆದುಕೊಂಡಿರುವ ಈ ಎರಡೂ ತಂಡಗಳು ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿವೆ. ಇತ್ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 23ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇತ್ತಂಡಗಳ ನಡುವೆ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಎರಡೂ ತಂಡಗಳು ಜಯ ಸಾಧಿಸಿರುವುದಕ್ಕಿಂತ ಡ್ರಾ ಆಗಿರುವ ಪಂದ್ಯಗಳೇ ಹೆಚ್ಚಿವೆ. ಹೌದು, ತಮಿಳ್ ತಲೈವಾಸ್ ಮತ್ತು ಪುಣೇರಿ ಪಲ್ಟನ್ ನಡುವೆ ಇದುವರೆಗೂ ಒಟ್ಟು 4 ಪಂದ್ಯಗಳು ನಡೆದಿದ್ದು ಇತ್ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸಿದ್ದರೆ, ಉಳಿದೆರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ತಮಿಳ್ ತಲೈವಾಸ್ ಸಂಭಾವ್ಯ ತಂಡ: ಮಂಜೀತ್ ದಹಿಯಾ (ರೈಡರ್) ಕೆ ಪ್ರಪಂಜನ್ (ರೈಡರ್) ಅತುಲ್ ಎಂಎಸ್ (ರೈಡರ್) ಮೋಹಿತ್ ಜಖರ್ (ಎಡ ಕವರ್) ಸುರ್ಜೀತ್ (ಬಲ ಕವರ್) ಸಾಹಿಲ್ ಮಲಿಕ್ (ಎಡ ಮೂಲೆ) ಸಾಗರ್ ರಥಿ (ಬಲ ಮೂಲೆ)

ಪುಣೇರಿ ಪಲ್ಟಾನ್ ಸಂಭಾವ್ಯ ತಂಡ: ಪಂಕಜ್ ಮೋಹಿತೆ (ರೈಡರ್) ಮೋಹಿತ್ ಗೋಯತ್ (ರೈಡರ್) ಅಸ್ಲಾಂ ಇನಾಮದಾರ್ (ಆಲ್ ರೌಂಡರ್) ಸಂಕೇತ್ ಸಾವಂತ್ (ಎಡ ಕವರ್) ಅಭಿನೇಶ್ ನಡರಾಜನ್ (ಬಲ ಕವರ್) ವಿಶಾಲ್ ಭಾರದ್ವಾಜ್ (ಎಡ ಮೂಲೆ) ಸೋಂಬಿರ್ (ಬಲ ಮೂಲೆ)

ಪಂದ್ಯ 2: ಪಾಟ್ನಾ ಪೈರೇಟ್ಸ್ vs ಬೆಂಗಾಲ್ ವಾರಿಯರ್ಸ್

ಪಾಟ್ನಾ ಪೈರೇಟ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಸಾಧಾರಣ ಪ್ರದರ್ಶನ ನೀಡುವುದರ ಮೂಲಕ ಅಂಕಪಟ್ಟಿಯಲ್ಲಿ ಸಾಮಾನ್ಯ ಸ್ಥಾನಗಳನ್ನು ಪಡೆದುಕೊಂಡಿವೆ. ಇದುವರೆಗೂ ಒಟ್ಟು 3 ಪಂದ್ಯಗಳನ್ನಾಡಿರುವ ಪಾಟ್ನಾ ಪೈರೇಟ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಮತ್ತೊಂದು ಪಂದ್ಯದಲ್ಲಿ ಸೋಲುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದರೆ, 4 ಪಂದ್ಯಗಳನ್ನಾಡಿರುವ ಬೆಂಗಾಲ್ ವಾರಿಯರ್ಸ್ 2 ಪಂದ್ಯಗಳಲ್ಲಿ ಸೋತು ಮತ್ತೆರಡು ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿದೆ. ಇನ್ನು ಇತ್ತಂಡಗಳು ಇಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು ಈ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯ 24ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ನಡೆಯಲಿದೆ. ಇನ್ನು ಪಾಟ್ನಾ ಪೈರೇಟ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳ ನಡುವೆ ಇದುವರೆಗೂ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಬೆಂಗಾಲ್ ವಾರಿಯರ್ಸ್ ವಿರುದ್ಧ ಪಾಟ್ನಾ ಪೈರೇಟ್ಸ್ ಸ್ಪಷ್ಟ ಮೇಲುಗೈಯನ್ನು ಸಾಧಿಸಿದೆ. ಹೌದು, ಪಾಟ್ನಾ ಪೈರೇಟ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳ ನಡುವೆ ಇದುವರೆಗೂ ಒಟ್ಟು 17 ಪಂದ್ಯಗಳು ನಡೆದಿದ್ದು ಪಾಟ್ನಾ ಪೈರೇಟ್ಸ್ 10 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಬೆಂಗಾಲ್ ವಾರಿಯರ್ಸ್ 4 ಪಂದ್ಯಗಳಲ್ಲಿ ಗೆದ್ದಿದೆ ಮತ್ತು ಉಳಿದ 3 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ಪಾಟ್ನಾ ಪೈರೇಟ್ಸ್ ಸಂಭಾವ್ಯ ತಂಡ: ಮೋನು ಗೋಯತ್ (ರೈಡರ್) ಸಚಿನ್ ತನ್ವರ್ (ರೈಡರ್) ಪ್ರಶಾಂತ್ ಕುಮಾರ್ ರೈ (ರೈಡರ್) ಸಜಿನ್ ಚಂದ್ರಶೇಖರ್ (ಎಡ ಮುಖಪುಟ) ನೀರಜ್ ಕುಮಾರ್ (ಬಲ ಮುಖಪುಟ) ಮೊಹಮ್ಮದ್ರೇಜಾ ಶಾದ್ಲೂಯಿ (ಎಡ ಮೂಲೆ) ಸುನಿಲ್ (ಬಲ ಮೂಲೆ)

ಬೆಂಗಾಲ್ ವಾರಿಯರ್ಸ್ ಸಂಭಾವ್ಯ ತಂಡ: ಮಣಿಂದರ್ ಸಿಂಗ್ (ರೈಡರ್) ಸುಕೇಶ್ ಹೆಗ್ಡೆ (ರೈಡರ್) ಮೊಹಮ್ಮದ್ ನಬಿಬಕ್ಷ್ (ರೈಡರ್) ವಿಜಿನ್ ತಂಗದುರೈ (ಎಡ ಕವರ್) ದರ್ಶನ್ ಜೆ (ಬಲ ಮುಖಪುಟ) ರಿಂಕು ನರ್ವಾಲ್ (ಎಡ ಮೂಲೆ) ಅಬೋಜರ್ ಮಿಘಾನಿ (ಬಲ ಮೂಲೆ)

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Friday, December 31, 2021, 17:13 [IST]
Other articles published on Dec 31, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+