ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಜನವರಿ 10ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 2021, January 10: All matches preview, Predicted 7, Head to head details and live streaming

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 9ರ ಭಾನುವಾರದವರೆಗೂ ಒಟ್ಟು 44 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಟ್ನಾ ಪೈರೇಟ್ಸ್ ದ್ವಿತೀಯ ಸ್ಥಾನ ಮತ್ತು ಬೆಂಗಳೂರು ಬುಲ್ಸ್ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 44 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 10 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ತಮಿಳ್ ತಲೈವಾಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಇಷ್ಟು ಕೆಜಿ ತೂಕ ಇಳಿಸಿದರೆ ಮಾತ್ರ ತಂಡದಲ್ಲಿ ಮತ್ತೆ ಸ್ಥಾನ; ರೋಹಿತ್‌ಗೆ ಬಂತು ಖಡಕ್ ಎಚ್ಚರಿಕೆ!ಇಷ್ಟು ಕೆಜಿ ತೂಕ ಇಳಿಸಿದರೆ ಮಾತ್ರ ತಂಡದಲ್ಲಿ ಮತ್ತೆ ಸ್ಥಾನ; ರೋಹಿತ್‌ಗೆ ಬಂತು ಖಡಕ್ ಎಚ್ಚರಿಕೆ!

ಪಂದ್ಯ 1: ತಮಿಳ್ ತಲೈವಾಸ್ vs ಹರಿಯಾಣ ಸ್ಟೀಲರ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ತಮಿಳ್ ತಲೈವಾಸ್ ಹಾಗೂ ಹರಿಯಾಣ ಸ್ಟೀಲರ್ಸ್ ಎರಡೂ ತಂಡಗಳು ಸಹ ಇಲ್ಲಿಯವರೆಗೂ ನಡೆದಿರುವ ತಮ್ಮ ಪಂದ್ಯಗಳಲ್ಲಿ ಸಾಧಾರಣ ಪ್ರದರ್ಶನಗಳನ್ನು ನೀಡಿದ್ದು ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ವಿಫಲವಾಗಿವೆ ಎಂದು ಹೇಳಬಹುದು. ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿರುವ ತಮಿಳ್ ತಲೈವಾಸ್ 2 ಪಂದ್ಯಗಳಲ್ಲಿ ಜಯವನ್ನು ಸಾಧಿಸಿ, 1 ಪಂದ್ಯದಲ್ಲಿ ಸೋತು, 4 ಪಂದ್ಯಗಳಲ್ಲಿ ಡ್ರಾ ಮಾಡಿಕೊಳ್ಳುವುದರ ಮೂಲಕ 22 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಅತ್ತ ಹರಿಯಾಣ ಸ್ಟೀಲರ್ಸ್ ಕೂಡ ಈ ಬಾರಿಯ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿದ್ದು 3 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತಿದ್ದು, 1 ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 20 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 45ನೇ ಪಂದ್ಯವಾಗಿದ್ದು, ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ತಮಿಳ್ ತಲೈವಾಸ್ ಹಾಗೂ ಹರಿಯಾಣ ಸ್ಟೀಲರ್ಸ್ ನಡುವೆ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಇತ್ತಂಡಗಳು ಸಮಬಲ ಸಾಧಿಸಿದ್ದು, ತಂಡಗಳ ಗೆಲುವಿಗಿಂತ ಡ್ರಾ ಆದ ಪಂದ್ಯಗಳ ಸಂಖ್ಯೆಯೇ ಹೆಚ್ಚಿದೆ. ಇತ್ತಂಡಗಳ ನಡುವೆ ಇದುವರೆಗೂ ಒಟ್ಟು 5 ಪಂದ್ಯಗಳು ನಡೆದಿದ್ದು ತಮಿಳ್ ತಲೈವಾಸ್ ಹಾಗೂ ಹರಿಯಾಣ ಸ್ಟೀಲರ್ಸ್ ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸಿದ್ದರೆ, ಉಳಿದ 3 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ತಮಿಳ್ ತಲೈವಾಸ್ ಸಂಭಾವ್ಯ ಆಡುವ ಬಳಗ: ಮಂಜೀತ್ ದಹಿಯಾ (ರೈಡರ್) ಅತುಲ್ ಎಂಎಸ್ (ರೈಡರ್) ಅಜಿಂಕ್ಯ ಪವಾರ್ (ರೈಡರ್) ಮೋಹಿತ್ ಜಖರ್ (ಎಡ ಕವರ್) ಸುರ್ಜೀತ್ (ಬಲ ಮುಖಪುಟ) ಸಾಗರ್ ಕೃಷ್ಣ (ಎಡ ಮೂಲೆ) ಸಾಗರ್ ರಥಿ (ಬಲ ಮೂಲೆ)

ಹರಿಯಾಣ ಸ್ಟೀಲರ್ಸ್ ಸಂಭಾವ್ಯ ಆಡುವ ಬಳಗ: ವಿಕಾಶ್ ಕಾಂಡೋಲಾ (ರೈಡರ್) ಮೀಟು ಶರ್ಮಾ (ರೈಡರ್) ರೋಹಿತ್ ಗುಲಿಯಾ (ಆಲ್ ರೌಂಡರ್) ಜೈದೀಪ್ ದಹಿಯಾ (ಎಡ ಕವರ್) ಮೋಹಿತ್ ನಂದಲ್ (ರೈಟ್ ಕವರ್) ಸುರೇಂದರ್ ನಾಡಾ (ಎಡ ಮೂಲೆ) ರವಿಕುಮಾರ್ (ಬಲ ಮೂಲೆ)

ಭಾರತ vs ದ. ಆಫ್ರಿಕಾ: ಮೂರನೇ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಶುಭ ಸುದ್ದಿ!ಭಾರತ vs ದ. ಆಫ್ರಿಕಾ: ಮೂರನೇ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಶುಭ ಸುದ್ದಿ!

ಪಂದ್ಯ 2: ಜೈಪುರ್ ಪಿಂಕ್ ಪ್ಯಾಂಥರ್ಸ್ vs ದಬಾಂಗ್ ಡೆಲ್ಲಿ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ನಡೆದಿರುವ ಪಂದ್ಯಗಳ ಪೈಕಿ ದಬಾಂಗ್ ಡೆಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದರೆ, ಸಾಧಾರಣ ಪ್ರದರ್ಶನವನ್ನು ನೀಡಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ಅಂಕ ಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲವಾಗಿದೆ. ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿರುವ ದಬಾಂಗ್ ಡೆಲ್ಲಿ 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 2 ಪಂದ್ಯಗಳನ್ನು ಡ್ರಾ ಮಾಡಿಕೊಂಡು ಯಾವುದೇ ಸೋಲನ್ನೇ ಕಾಣದೇ 31 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 7 ಪಂದ್ಯಗಳನ್ನಾಡಿರುವ ಜೈಪುರ ಪಿಂಕ್ ಪ್ಯಾಂಥರ್ಸ್ 3 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋಲನ್ನು ಕಂಡು 18 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನ ಪಡೆದುಕೊಂಡಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 46ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಶುರುವಾಗಲಿದೆ. ಇನ್ನು ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳ ನಡುವೆ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಇತ್ತಂಡಗಳು ಕೂಡ ಸಮಬಲವನ್ನು ಸಾಧಿಸಿವೆ. ಇತ್ತಂಡಗಳ ನಡುವೆ ಇದುವರೆಗೂ ಒಟ್ಟು 16 ಪಂದ್ಯಗಳು ನಡೆದಿದ್ದು ದಬಾಂಗ್ ಡೆಲ್ಲಿ 7 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಜೈಪುರ ಪಿಂಕ್ ಪ್ಯಾಂಥರ್ಸ್ ಕೂಡ 7 ಪಂದ್ಯಗಳಲ್ಲಿ ಗೆಲುವು ಕಂಡಿದೆ ಹಾಗೂ ಉಳಿದೆರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ಜೈಪುರ್ ಪಿಂಕ್ ಪ್ಯಾಂಥರ್ಸ್ ಸಂಭಾವ್ಯ ಆಡುವ ಬಳಗ: ಅರ್ಜುನ್ ದೇಶ್ವಾಲ್ (ರೈಡರ್) ದೀಪಕ್ ನಿವಾಸ್ ಹೂಡಾ (ರೈಡರ್) ನವೀನ್ ಬಜಾದ್ (ರೈಡರ್) ವಿಶಾಲ್ ಲಾಥರ್ (ಎಡ ಕವರ್) ಅಮಿತ್ ಖಾರ್ಬ್ (ಬಲ ಕವರ್) ಸಂದೀಪ್ ಧುಲ್ (ಎಡ ಮೂಲೆ) ಸಾಹುಲ್ ಕುಮಾರ್ (ಬಲ ಮೂಲೆ)

ದಬಾಂಗ್ ಡೆಲ್ಲಿ ಸಂಭಾವ್ಯ ಆಡುವ ಬಳಗ: ನವೀನ್ ಕುಮಾರ್ ಗೋಯತ್ (ರೈಡರ್) ವಿಜಯ್ ಮಲಿಕ್ (ರೈಡರ್) ಆಶು ಮಲಿಕ್ (ರೈಡರ್) ಮಂಜೀತ್ ಛಿಲ್ಲರ್ (ಎಡ ಕವರ್) ಜೀವ ಕುಮಾರ್ (ಬಲ ಕವರ್) ಜೋಗಿಂದರ್ ನರ್ವಾಲ್ (ಎಡ ಮೂಲೆ) ಸಂದೀಪ್ ನರ್ವಾಲ್ (ಬಲ ಮೂಲೆ)

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Monday, January 10, 2022, 15:29 [IST]
Other articles published on Jan 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X