For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಜನವರಿ 13ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 2021, January 13: All matches preview, Predicted 7, Head to head details and live streaming

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 12ರ ಬುಧವಾರದವರೆಗೂ ಒಟ್ಟು 50 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಪಾಟ್ನಾ ಪೈರೇಟ್ಸ್ ಅಗ್ರಸ್ಥಾನದಲ್ಲಿದ್ದರೆ, ಬೆಂಗಳೂರು ಬುಲ್ಸ್ ದ್ವಿತೀಯ ಸ್ಥಾನ ಮತ್ತು ದಬಾಂಗ್ ಡೆಲ್ಲಿ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 50 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 12 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ಮತ್ತು ತಮಿಳ್ ತಲೈವಾಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಯು ಮುಂಬಾ ಮತ್ತು ಪುನೇರಿ ಪಲ್ಟಾನ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಬೆಂಗಾಲ್ ವಾರಿಯರ್ಸ್ vs ತಮಿಳ್ ತಲೈವಾಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಸಾಮಾನ್ಯ ಪ್ರದರ್ಶನವನ್ನು ನೀಡಿರುವ ತಮಿಳ್ ತಲೈವಾಸ್ ಅಂಕಪಟ್ಟಿಯಲ್ಲಿ ಸಾಮಾನ್ಯ ಸ್ಥಾನದಲ್ಲಿದ್ದರೆ, ಅತ್ತ ಬೆಂಗಾಲ್ ವಾರಿಯರ್ಸ್ ಕಳಪೆ ಪ್ರದರ್ಶನವನ್ನು ನೀಡುವುದರ ಮೂಲಕ ಅಂಕಪಟ್ಟಿಯಲ್ಲಿ ಕೆಳಮಟ್ಟದಲ್ಲಿದೆ. ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಬೆಂಗಾಲ್ ವಾರಿಯರ್ಸ್ ಇದುವರೆಗೂ ಒಟ್ಟು 8 ಪಂದ್ಯಗಳನ್ನಾಡಿದ್ದು 3 ಪಂದ್ಯಗಳಲ್ಲಿ ಜಯಗಳಿಸಿ, 1 ಪಂದ್ಯದಲ್ಲಿ ಸೋಲುಂಡಿದ್ದು ಉಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 27 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿರುವ ಬೆಂಗಾಲ್ ವಾರಿಯರ್ಸ್ 3 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋಲುವುದರ ಮೂಲಕ 17 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಹತ್ತನೇ ಸ್ಥಾನ ಪಡೆದುಕೊಂಡಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 51ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಅಂಕಪಟ್ಟಿಯಲ್ಲಿ ಬೆಂಗಾಲ್ ವಾರಿಯರ್ಸ್ ತಂಡಕ್ಕಿಂತ ತಮಿಳ್ ತಲೈವಾಸ್ ತಂಡ ಉನ್ನತ ಸ್ಥಾನದಲ್ಲಿರಬಹುದು ಆದರೆ, ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ತಮಿಳ್ ತಲೈವಾಸ್ ತಂಡದ ಮೇಲೆ ಬೆಂಗಾಲ್ ವಾರಿಯರ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ. ಹೌದು, ಇತ್ತಂಡಗಳ ನಡುವೆ ಇದುವರೆಗೂ ನಡೆದಿರುವ 8 ಮುಖಾಮುಖಿ ಪಂದ್ಯಗಳಲ್ಲಿ ಬೆಂಗಾಲ್ ವಾರಿಯರ್ಸ್ 7 ಪಂದ್ಯಗಳನ್ನು ಗೆದ್ದಿದ್ದರೆ, ತಮಿಳ್ ತಲೈವಾಸ್ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದೆ.

ಬೆಂಗಾಲ್ ವಾರಿಯರ್ಸ್ ಸಂಭಾವ್ಯ ಆಡುವ ಬಳಗ: ಮಣಿಂದರ್ ಸಿಂಗ್ (ನಾಯಕ) (ರೈಡರ್) ಸುಕೇಶ್ ಹೆಗ್ಡೆ (ರೈಡರ್) ಮೊಹಮ್ಮದ್ ನಬಿಬಕ್ಷ್ (ಆಲ್ ರೌಂಡರ್) ವಿಜಿನ್ ತಂಗದುರೈ (ಎಡ ಕವರ್) ದರ್ಶನ್ ಜೆ (ಬಲ ಕವರ್) ರಿಂಕು ನರ್ವಾಲ್ (ಎಡ ಮೂಲೆ) ಅಬೋಜರ್ ಮಿಘಾನಿ (ಬಲ ಮೂಲೆ)

ತಮಿಳ್ ತಲೈವಾಸ್ ಸಂಭಾವ್ಯ ಆಡುವ ಬಳಗ: ಮಂಜೀತ್ (ರೈಡರ್) ಕೆ ಪ್ರಪಂಜನ್ (ರೈಡರ್) ಅತುಲ್ ಎಂಎಸ್ (ರೈಡರ್) ಮೋಹಿತ್ ಜಖರ್ (ಎಡ ಕವರ್) ಸುರ್ಜೀತ್ (ಕ್ಯಾಪ್ಟನ್) (ರೈಟ್ ಕವರ್) ಸಾಗರ್ ಕೃಷ್ಣ (ಎಡ ಮೂಲೆ) ಸಾಗರ್ ರಥಿ (ಬಲ ಮೂಲೆ)

ಪಂದ್ಯ 2: ಯು ಮುಂಬಾ vs ಪುನೇರಿ ಪಲ್ಟಾನ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಯು ಮುಂಬಾ ತಂಡ ತುಸು ಉತ್ತಮ ಪ್ರದರ್ಶನವನ್ನು ನೀಡಿದ್ದು ಉತ್ತಮ ಹಂತದಲ್ಲಿದ್ದರೆ, ಅತ್ತ ಕಳಪೆ ಪ್ರದರ್ಶನವನ್ನು ನೀಡಿರುವ ಪುನೇರಿ ಪಲ್ಟಾನ್ಸ್ ತಂಡ ಅಂಕಪಟ್ಟಿಯಲ್ಲಿ ಹೀನಾಯ ಹಂತದಲ್ಲಿದೆ. ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿರುವ ಯು ಮುಂಬಾ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 2 ಪಂದ್ಯಗಳಲ್ಲಿ ಸೋಲುಂಡು, ಉಳಿದ 3 ಪಂದ್ಯಗಳಲ್ಲಿ ಡ್ರಾ ಮಾಡಿಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ 25 ಅಂಕಗಳನ್ನು ಪಡೆದುಕೊಂಡು ಐದನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿರುವ ಬೆಂಗಾಲ್ ವಾರಿಯರ್ಸ್ 3 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋಲುವುದರ ಮೂಲಕ 16 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ. ಇನ್ನು ಇತ್ತಂಡಗಳ ನಡುವಿನ ಇಂದಿನ ಮುಖಾಮುಖಿ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 52ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭವಾಗಲಿದೆ. ಯು ಮುಂಬಾ ಮತ್ತು ಪುನೇರಿ ಪಲ್ಟಾನ್ ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಪುನೇರಿ ಪಲ್ಟಾನ್ ತಂಡಕ್ಕಿಂತ ಯು ಮುಂಬಾ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದು ಮೇಲುಗೈ ಸಾಧಿಸಿದೆ. ಇತ್ತಂಡಗಳ ನಡುವೆ ಇದುವರೆಗೂ ಒಟ್ಟು 16 ಪಂದ್ಯಗಳು ನಡೆದಿದ್ದು ಯು ಮುಂಬಾ 9 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪುನೇರಿ ಪಲ್ಟಾನ್ 5 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಇತ್ತಂಡಗಳ ನಡುವಿನ ಉಳಿದೆರಡು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿವೆ.

ಯು ಮುಂಬಾ ಸಂಭಾವ್ಯ ‌ಆಡುವ ಬಳಗ: ಅಭಿಷೇಕ್ ಸಿಂಗ್ (ರೈಡರ್) ವಿ ಅಜಿತ್ ಕುಮಾರ್ (ರೈಡರ್) ಮೊಹ್ಸೆನ್ ಮಗ್ಸೌದ್ಲೌ (ರೈಡರ್) ಹರೇಂದ್ರ ಕುಮಾರ್ (ಎಡ ಮುಖಪುಟ) ಆಶಿಶ್ ಸಾಂಗ್ವಾನ್ (ಬಲ ಕವರ್) ಫಾಜೆಲ್ ಅತ್ರಾಚಲಿ (ಎಡ ಮೂಲೆ) ರಿಂಕು ಶರ್ಮಾ (ಬಲ ಮೂಲೆ)

ಪುನೇರಿ ಪಲ್ಟಾನ್ ಸಂಭಾವ್ಯ ಆಡುವ ಬಳಗ: ನಿತಿನ್ ತೋಮರ್ (ರೈಡರ್) ಮೋಹಿತ್ ಗೋಯತ್ (ರೈಡರ್) ಅಸ್ಲಂ ಇನಾಮದಾರ್ (ರೈಡರ್) ಸಂಕೇತ್ ಸಾವಂತ್ (ಎಡ ಕವರ್) ಅಭಿನೇಶ್ ನಾಡರಾಜನ್ (ಬಲ ಮುಖಪುಟ) ವಿಶಾಲ್ ಭಾರದ್ವಾಜ್ (ಎಡ ಮೂಲೆ) ಬಲದೇವ್ ಸಿಂಗ್ (ಬಲ ಮೂಲೆ)

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Thursday, January 13, 2022, 16:12 [IST]
Other articles published on Jan 13, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+