For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಜನವರಿ 17ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 2021, January 17: All matches preview, Predicted 7, Head to head details and live streaming

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 16ರ ಭಾನುವಾರದವರೆಗೂ ಒಟ್ಟು 59 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಬೆಂಗಳೂರು ಬುಲ್ಸ್ ಅಗ್ರಸ್ಥಾನದಲ್ಲಿದ್ದರೆ, ಪಾಟ್ನಾ ಪೈರೇಟ್ಸ್ ದ್ವಿತೀಯ ಸ್ಥಾನ ಮತ್ತು ದಬಾಂಗ್ ಡೆಲ್ಲಿ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 59 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 17 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಪುಣೇರಿ ಪಲ್ಟಾನ್ ಮತ್ತು ಯುಪಿ ಯೋಧಾ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ಮತ್ತು ತೆಲುಗು ಟೈಟಾನ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಯುಪಿ ಯೋಧಾ vs ಪುನೇರಿ ಪಲ್ಟಾನ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿರುವ ಯುಪಿ ಯೋಧಾ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 4 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 28 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಆರನೇ ಸ್ಥಾನವನ್ನು ಪಡೆದುಕೊಂಡಿದ್ದರೆ, ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 9 ಪಂದ್ಯಗಳನ್ನಾಡಿರುವ ಪುಣೇರಿ ಪಲ್ಟಾನ್ 4 ಪಂದ್ಯಗಳಲ್ಲಿ ಗೆದ್ದು, ಉಳಿದ 5 ಪಂದ್ಯಗಳಲ್ಲಿ ಸೋಲನ್ನು ಅನುಭವಿಸುವುದರ ಮೂಲಕ 21 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಇನ್ನು ಈ ಎರಡೂ ತಂಡಗಳು ಇಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಪಂದ್ಯ ಈ ಬಾರಿಯ ಆವೃತ್ತಿಯ 60ನೇ ಪಂದ್ಯವಾಗಿದೆ ಹಾಗೂ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಇದುವರೆಗೂ ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ಒಟ್ಟು 5 ಮುಖಾಮುಖಿ ಪಂದ್ಯಗಳು ನಡೆದಿದ್ದು, ಯು ಪಿ ಯೋಧಾ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪುಣೇರಿ ಪಲ್ಟಾನ್ 2 ಪಂದ್ಯಗಳಲ್ಲಿ ಗೆದ್ದಿದೆ.

ಪುಣೇರಿ ಪಲ್ಟಾನ್ ಸಂಭಾವ್ಯ ಆಡುವ ಬಳಗ: ಮೋಹಿತ್ ಗೋಯತ್ (ರೈಡರ್) ನಿತಿನ್ ತೋಮರ್ (ಆಲ್ ರೌಂಡರ್) ಅಸ್ಲಾಂ ಇನಾಮದಾರ್ (ಆಲ್ ರೌಂಡರ್) ಸಂಕೇತ್ ಸಾವಂತ್ (ಎಡ ಕವರ್) ಅಭಿನೇಶ್ ನಡರಾಜನ್ (ರೈಟ್ ಕವರ್) ವಿಶಾಲ್ ಭಾರದ್ವಾಜ್ (ಎಡ ಮೂಲೆ) ಬಲದೇವ್ ಸಿಂಗ್ (ಬಲ ಮೂಲೆ)

ಯುಪಿ ಯೋಧಾ ಸಂಭಾವ್ಯ ಆಡುವ ಬಳಗ: ಪರ್ದೀಪ್ ನರ್ವಾಲ್ (ರೈಡರ್) ಶ್ರೀಕಾಂತ್ ಜಾಧವ್ (ರೈಡರ್) ಸುರೇಂದರ್ ಗಿಲ್ (ರೈಡರ್) ಶುಭಂ ಕುಮಾರ್ ಬಲಿಯಾನ್ (ಎಡ ಕವರ್) ಅಶು ಸಿಂಗ್ (ಬಲ ಮುಖಪುಟ) ಸುಮಿತ್ ಸಾಂಗ್ವಾನ್ (ಎಡ ಮೂಲೆ) ನಿತೇಶ್ ಕುಮಾರ್ (ಬಲ ಮೂಲೆ)

ಪಂದ್ಯ 2: ತೆಲುಗು ಟೈಟಾನ್ಸ್ vs ಬೆಂಗಾಲ್ ವಾರಿಯರ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ತೆಲುಗು ಟೈಟಾನ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ಅತ್ಯುತ್ತಮ ಆರಂಭವನ್ನು ಪಡೆದುಕೊಳ್ಳುವಲ್ಲಿ ವಿಫಲವಾಗಿವೆ. ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿರುವ ಬೆಂಗಾಲ್ ವಾರಿಯರ್ಸ್ 4 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋಲನುಭವಿಸಿ, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 25 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದ್ದರೆ, ಅತ್ತ ಈ ಬಾರಿಯ ಆವೃತ್ತಿಯಲ್ಲಿ ಇಲ್ಲಿಯವರೆಗೂ ಗೆಲುವನ್ನೇ ಸಾಧಿಸದ ತೆಲುಗು ಟೈಟಾನ್ಸ್ ತಂಡ 9 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 11 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನು ಈ ಎರಡೂ ತಂಡಗಳ ನಡುವೆ ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ಒಟ್ಟು 16 ಪಂದ್ಯಗಳು ನಡೆದಿದ್ದು ಬೆಂಗಾಲ್ ವಾರಿಯರ್ಸ್ 9 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ತೆಲುಗು ಟೈಟಾನ್ಸ್ 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಇತ್ತಂಡಗಳ ನಡುವಿನ ಉಳಿದ 4 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. ಹೀಗೆ ಇತ್ತಂಡಗಳ ಮುಖಾಮುಖಿಯಲ್ಲಿ ತೆಲುಗು ಟೈಟಾನ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ. ಇನ್ನು ಈ ಎರಡೂ ತಂಡಗಳು ಇಂದು ನಡೆಯಲಿರುವ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಪಂದ್ಯ ಈ ಬಾರಿಯ ಆವೃತ್ತಿಯ 61ನೇ ಪಂದ್ಯವಾಗಿದೆ ಹಾಗೂ ಸಂಜೆ 8.30ಕ್ಕೆ ಆರಂಭಗೊಳ್ಳಲಿದೆ.

ತೆಲುಗು ಟೈಟಾನ್ಸ್ ಸಂಭಾವ್ಯ ಆಡುವ ಬಳಗ: ರೋಹಿತ್ ಕುಮಾರ್ (ರೈಡರ್) ರಜನೀಶ್ ದಲಾಲ್ (ರೈಡರ್) ಅಂಕಿತ್ ಬೇನಿವಾಲ್ (ರೈಡರ್) ಪ್ರಿನ್ಸ್ ಡಿ (ಎಡ ಕವರ್) ಸುರೀಂದರ್ ಸಿಂಗ್ (ಬಲ ಕವರ್) ಸಂದೀಪ್ ಕಾಂಡೋಲಾ (ಎಡ ಮೂಲೆ)

ಬೆಂಗಾಲ್ ವಾರಿಯರ್ಸ್ ಸಂಭಾವ್ಯ ಆಡುವ ಬಳಗ: ಮಣಿಂದರ್ ಸಿಂಗ್ (ರೈಡರ್) ಆಕಾಶ್ ಪಿಕಲ್ಮುಂಡೆ (ರೈಡರ್) ಮೊಹಮ್ಮದ್ ನಬಿಬಕ್ಷ್ (ಆಲ್ ರೌಂಡರ್) ಅಮಿತ್ ನರ್ವಾಲ್ (ಎಡ ಕವರ್) ದರ್ಶನ್ ಜೆ (ರೈಟ್ ಕವರ್) ರಾನ್ ಸಿಂಗ್ ರಾಣಿಯಾ (ಎಡ ಮೂಲೆ) ಅಬೋಜರ್ ಮಿಘಾನಿ (ಬಲ ಮೂಲೆ)

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Monday, January 17, 2022, 16:45 [IST]
Other articles published on Jan 17, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+