ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಫೆಬ್ರವರಿ 6ರ ಬುಧವಾರದವರೆಗೂ ಒಟ್ಟು 99 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಪಾಟ್ನಾ ಪೈರೇಟ್ಸ್ ಅಗ್ರಸ್ಥಾನದಲ್ಲಿದ್ದರೆ, ದಬಾಂಗ್ ಡೆಲ್ಲಿ ದ್ವಿತೀಯ ಸ್ಥಾನ ಮತ್ತು ಬೆಂಗಳೂರು ಬುಲ್ಸ್ ತೃತೀಯ ಸ್ಥಾನದಲ್ಲಿವೆ.
ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 99 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಫೆಬ್ರವರಿ 7) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..
ಆರ್ಸಿಬಿಯ ಆ ಒಂದು ಸೋಲಿನ ಬಗ್ಗೆ ರಾಹುಲ್ ಇಂದಿಗೂ ನನ್ನ ಜೊತೆ ಮಾತಾಡ್ತಾರೆ: ನೋವು ಬಿಚ್ಚಿಟ್ಟ ಕೊಹ್ಲಿ
ಪಂದ್ಯ 1: ಜೈಪುರ ಪಿಂಕ್ ಪ್ಯಾಂಥರ್ಸ್ vs ಗುಜರಾತ್ ಜೈಂಟ್ಸ್
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 16 ಪಂದ್ಯಗಳನ್ನಾಡಿರುವ ಜೈಪುರ್ ಪಿಂಕ್ ಫ್ಯಾಂಥರ್ಸ್ 7 ಪಂದ್ಯಗಳಲ್ಲಿ ಗೆದ್ದು, 7 ಪಂದ್ಯಗಳಲ್ಲಿ ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 46 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 16 ಪಂದ್ಯಗಳನ್ನಾಡಿರುವ ಗುಜರಾತ್ ಜೈಂಟ್ಸ್ ತಂಡ 6 ಪಂದ್ಯಗಳಲ್ಲಿ ಗೆದ್ದು, 7 ಪಂದ್ಯಗಳಲ್ಲಿ ಸೋತಿದ್ದು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 43 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 100ನೇ ಪಂದ್ಯವಾಗಿದ್ದು ಸಂಜೆ 7. 30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 7 ಮುಖಾಮುಖಿ ಪಂದ್ಯಗಳು ನಡೆದಿದ್ದು ಜೈಪುರ್ ಪಿಂಕ್ ಪ್ಯಾಂಥರ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಗುಜರಾತ್ ಜೈಂಟ್ಸ್ 4 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.
ಗುಜರಾತ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ: ಪರ್ದೀಪ್, ಮಹೇಂದ್ರ ಗಣೇಶ್ ರಜಪೂತ್, ಅಜಯ್ ಕುಮಾರ್, ಪರ್ವೇಶ್ ಭೈನ್ವಾಲ್, ಸುನಿಲ್ ಮಲಿಕ್ (ನಾಯಕ), ಗಿರೀಶ್ ಎರ್ನಾಕ್, ಅಂಕಿತ್
ಜೈಪುರ್ ಪಿಂಕ್ ಪ್ಯಾಂಥರ್ಸ್ ಸಂಭಾವ್ಯ ಆಡುವ ಬಳಗ: ಅರ್ಜುನ್ ದೇಶ್ವಾಲ್, ದೀಪಕ್ ನಿವಾಸ ಹೂಡಾ, ಸಚಿನ್ ನರ್ವಾಲ್, ದೀಪಕ್ ಸಿಂಗ್, ವಿಶಾಲ್, ಸಾಹುಲ್ ಕುಮಾರ್, ಸಂದೀಪ್ ಧುಲ್ (ನಾಯಕ)
ಕೊಹ್ಲಿ ಚಾಹಲ್ಗೆ ನೀಡಿದ ಆ ಉಪಾಯದಿಂದ ಬಿತ್ತು ಪೊಲಾರ್ಡ್ ವಿಕೆಟ್!; ವಿಡಿಯೋ ವೈರಲ್
ಪಂದ್ಯ 2: ಬೆಂಗಾಲ್ ವಾರಿಯರ್ಸ್ vs ತೆಲುಗು ಟೈಟಾನ್ಸ್
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 17 ಪಂದ್ಯಗಳನ್ನಾಡಿರುವ ಬೆಂಗಾಲ್ ವಾರಿಯರ್ಸ್ 7 ಪಂದ್ಯಗಳಲ್ಲಿ ಗೆದ್ದು, 9 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 41 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 11ನೇ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 16 ಪಂದ್ಯಗಳನ್ನಾಡಿರುವ ತೆಲುಗು ಟೈಟಾನ್ಸ್ ತಂಡ 1 ಪಂದ್ಯದಲ್ಲಿ ಗೆದ್ದು, 12 ಪಂದ್ಯಗಳಲ್ಲಿ ಸೋತಿದ್ದು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 23 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 101ನೇ ಪಂದ್ಯವಾಗಿದ್ದು ರಾತ್ರಿ 8. 30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 17 ಮುಖಾಮುಖಿ ಪಂದ್ಯಗಳು ನಡೆದಿದ್ದು ಬೆಂಗಾಲ್ ವಾರಿಯರ್ಸ್ 10 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ತೆಲುಗು ಟೈಟಾನ್ಸ್ 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದ 4 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.
ತೆಲುಗು ಟೈಟಾನ್ಸ್ ಸಂಭಾವ್ಯ ಆಡುವ ಬಳಗ: ರಜನೀಶ್ ದಲಾಲ್, ಆದರ್ಶ್ ಟಿ, ಅಂಕಿತ್ ಬೇನಿವಾಲ್, ಸುರಿಂದರ್ ಸಿಂಗ್, ಆಕಾಶ್ ಚೌಧರಿ, ಸಿ ಅರುಣ್, ಸಂದೀಪ್ ಕಂಡೋಲಾ (ನಾಯಕ)
ಬೆಂಗಾಲ್ ವಾರಿಯರ್ಸ್ ಸಂಭಾವ್ಯ ಆಡುವ ಬಳಗ: ಮಣಿಂದರ್ ಸಿಂಗ್ (ನಾಯಕ), ಪರ್ವೀನ್ ಸೇಠಪಾಲ್, ರವೀಂದ್ರ ಕುಮಾವತ್, ಮೊಹಮ್ಮದ್ ನಬಿಬಕ್ಷ್, ರಾನ್ ಸಿಂಗ್, ಅಬೋಜರ್ ಮಿಘಾನಿ
ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್ಸ್ಟಾರ್ ಅಪ್ಲಿಕೇಶನ್ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.