For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಬೆಂಗಾಲ್ ವಾರಿಯರ್ಸ್ ವಿರುದ್ಧ ಗೆದ್ದು ಅಗ್ರಸ್ಥಾನಕ್ಕೆ ಏರುತ್ತಾ ಬೆಂಗಳೂರು ಬುಲ್ಸ್?

PKL 8: Bengaluru Bulls vs Bengal warriors probable playing 7, preview and live streaming

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 19ರ ಬುಧವಾರದವರೆಗೂ ಒಟ್ಟು 65 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಟ್ನಾ ಪೈರೇಟ್ಸ್ ದ್ವಿತೀಯ ಸ್ಥಾನ ಮತ್ತು ಬೆಂಗಳೂರು ಬುಲ್ಸ್ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 65 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 20 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಗುಜರಾತ್ ಜಿಯಂಟ್ಸ್ ಮತ್ತು ತಮಿಳ್ ತಲೈವಾಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ಮತ್ತು ಬೆಂಗಳೂರು ಬುಲ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ತಮಿಳ್ ತಲೈವಾಸ್ vs ಗುಜರಾತ್ ಜಯಂಟ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ತಮಿಳ್ ತಲೈವಾಸ್ 3 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಸೋತು, ಉಳಿದ 5 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 30 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿರುವ ಗುಜರಾತ್ ಜಯಂಟ್ಸ್ 2 ಪಂದ್ಯಗಳನ್ನು ಗೆದ್ದು, 5 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 23 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 66ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 4 ಮುಖಾಮುಖಿ ಪಂದ್ಯಗಳು ನಡೆದಿದ್ದು ತಮಿಳ್ ತಲೈವಾಸ್ 2 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಗುಜರಾತ್ ಜಯಂಟ್ಸ್ ಕೂಡ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಗುಜರಾತ್ ಜಯಂಟ್ಸ್ ಸಂಭಾವ್ಯ ಆಡುವ ಬಳಗ: ರಾಕೇಶ್ ನರ್ವಾಲ್ (ರೈಡರ್) ರಾಕೇಶ್ ಸುಂಗ್ರೋಯಾ (ರೈಡರ್) ಅಜಯ್ ಕುಮಾರ್ (ರೈಡರ್) ಪರ್ವೇಶ್ ಭೈನ್‌ವಾಲ್ (ಎಡ ಕವರ್) ಸುನಿಲ್ ಕುಮಾರ್ ಮಲಿಕ್ (ಬಲ ಮುಖಪುಟ) ಗಿರೀಶ್ ಮಾರುತಿ ಎರ್ನಾಕ್ (ಎಡ ಮೂಲೆ) ಅಂಕಿತ್ ಶರ್ಮಾ (ಬಲ ಮೂಲೆ)

ತಮಿಳ್ ತಲೈವಾಸ್ ಸಂಭಾವ್ಯ ಆಡುವ ಬಳಗ: ಮಂಜೀತ್ ದಹಿಯಾ (ರೈಡರ್) ಅಜಿಂಕ್ಯ ಪವಾರ್ (ರೈಡರ್) ಭವಾನಿ ರಜಪೂತ್ (ರೈಡರ್) ಮೋಹಿತ್ ಜಖರ್ (ಎಡ ಕವರ್) ಸುರ್ಜೀತ್ (ಬಲ ಕವರ್) ಸಾಹಿಲ್ ಗುಲಿಯಾ (ಎಡ ಮೂಲೆ) ಸಾಗರ್ ರಥಿ (ಬಲ ಮೂಲೆ)

ಪಂದ್ಯ 2: ಬೆಂಗಳೂರು ಬುಲ್ಸ್ vs ಪಾಟ್ನಾ ಪೈರೇಟ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಬೆಂಗಳೂರು ಬುಲ್ಸ್ 7 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 39 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಬೆಂಗಾಲ್ ವಾರಿಯರ್ಸ್ 5 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 30 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 67ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭವಾಗಲಿದೆ. ಹಾಗೂ ಈ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ತಂಡದ ವಿರುದ್ಧ ಬೆಂಗಳೂರು ಬುಲ್ಸ್ ಜಯ ಸಾಧಿಸಿದರೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಲಿದೆ.

ಬೆಂಗಳೂರು ಬುಲ್ಸ್ ಸಂಭಾವ್ಯ ಆಡುವ ಬಳಗ: ಪವನ್ ಕುಮಾರ್ ಸೆಹ್ರಾವತ್ (ರೈಡರ್) ಚಂದ್ರನ್ ರಂಜಿತ್ (ರೈಡರ್) ದೀಪಕ್ ನರ್ವಾಲ್ (ರೈಡರ್) ಮಹೇಂದರ್ ಸಿಂಗ್ (ಎಡ ಕವರ್) ಮಯೂರ್ ಕದಮ್ (ಬಲ ಕವರ್) ಅಮನ್ ಆಂಟಿಲ್ (ಎಡ ಮೂಲೆ) ಸೌರಭ್ ನಂದಲ್ (ಬಲ ಮೂಲೆ)

ಬೆಂಗಾಲ್ ವಾರಿಯರ್ಸ್ ಸಂಭಾವ್ಯ ಆಡುವ ಬಳಗ: ಮಣಿಂದರ್ ಸಿಂಗ್, ಸುಕೇಶ್ ಹೆಗ್ಡೆ, ಮೊಹಮ್ಮದ್ ನಬಿಬಕ್ಷ್, ರಾನ್ ಸಿಂಗ್, ಅಬೋಜರ್ ಮಿಧಾನಿ, ಅಮಿತ್ ನಿರ್ವೇಲ್, ಸಚಿನ್ ವಿಟ್ಟಲ್

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Thursday, January 20, 2022, 17:31 [IST]
Other articles published on Jan 20, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+