ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಬೆಂಗಳೂರು ಬುಲ್ಸ್‌ಗೆ ಇಂದು ಬಲಿಷ್ಠ ಡೆಲ್ಲಿ ಸವಾಲು; ಇಬ್ಬರಲ್ಲಿ ಯಾರು ಬಲಿಷ್ಠರು?

PKL 8: Bengaluru Bulls vs Dabang Delhi preview, predicted 7, Head to head details and live streaming

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 11ರ ಮಂಗಳವಾರದವರೆಗೂ ಒಟ್ಟು 48 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಪಾಟ್ನಾ ಪೈರೇಟ್ಸ್ ಅಗ್ರಸ್ಥಾನದಲ್ಲಿದ್ದರೆ, ದಬಾಂಗ್ ಡೆಲ್ಲಿ ದ್ವಿತೀಯ ಸ್ಥಾನ ಮತ್ತು ಬೆಂಗಳೂರು ಬುಲ್ಸ್ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 48 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 12 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ಯುಪಿ ಯೋಧಾ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಐಪಿಎಲ್: ನೂತನ ಫ್ರಾಂಚೈಸಿಗಲ್ಲ, ಈ ತಂಡಕ್ಕೆ ನಾಯಕನಾಗಲಿದ್ದಾರೆ ಶ್ರೇಯಸ್ ಐಯ್ಯರ್ಐಪಿಎಲ್: ನೂತನ ಫ್ರಾಂಚೈಸಿಗಲ್ಲ, ಈ ತಂಡಕ್ಕೆ ನಾಯಕನಾಗಲಿದ್ದಾರೆ ಶ್ರೇಯಸ್ ಐಯ್ಯರ್

ಪಂದ್ಯ 1: ಹರಿಯಾಣ ಸ್ಟೀಲರ್ಸ್ vs ಯುಪಿ ಯೋಧಾ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ಯುಪಿ ಯೋಧಾ ತಂಡಗಳು ಹೇಳಿಕೊಳ್ಳುವಂತಹ ಉತ್ತಮ ಗೆಲುವುಗಳನ್ನು ಪಡೆದುಕೊಳ್ಳುವಲ್ಲಿ ವಿಫಲವಾಗಿವೆ. ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿರುವ ಯುಪಿ ಯೋಧ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 4 ಪಂದ್ಯಗಳಲ್ಲಿ ಸೋತು, 2 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 20 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನವನ್ನು ಪಡೆದುಕೊಂಡಿದೆ. ಅತ್ತ ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿರುವ ಹರಿಯಾಣ ಸ್ಟೀಲರ್ಸ್ 3 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿ, 4 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 20 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 49ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ಯುಪಿ ಯೋಧಾ ತಂಡಗಳ ನಡುವೆ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಎರಡೂ ತಂಡಗಳು ಕೂಡ ಸಮಬಲವನ್ನು ಸಾಧಿಸಿದ್ದು, 4 ಪಂದ್ಯಗಳ ಮುಖಾಮುಖಿಯಲ್ಲಿ ಯುಪಿ ಯೋಧಾ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಹರಿಯಾಣ ಸ್ಟೀಲರ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ.

ಹರಿಯಾಣ ಸ್ಟೀಲರ್ಸ್ ಸಂಭಾವ್ಯ ತಂಡ: ವಿಕಾಶ್ ಕಾಂಡೋಲಾ (ರೈಡರ್) ಮೀಟು ಶರ್ಮಾ (ರೈಡರ್) ರೋಹಿತ್ ಗುಲಿಯಾ (ಆಲ್-ರೌಂಡರ್) ಜೈದೀಪ್ ದಹಿಯಾ (ಎಡ ಕವರ್) ಮೋಹಿತ್ ನಂದಲ್ (ರೈಟ್ ಕವರ್) ಸುರೇಂದರ್ ನಾಡಾ (ಎಡ ಮೂಲೆ) ಅಂಕಿತ್ (ಬಲ ಮೂಲೆ)

ಯುಪಿ ಯೋಧಾ ಸಂಭಾವ್ಯ ತಂಡ: ಪರ್ದೀಪ್ ನರ್ವಾಲ್ (ರೈಡರ್) ಸುರೇಂದರ್ ಗಿಲ್ (ರೈಡರ್) ಶ್ರೀಕಾಂತ್ ಜಾಧವ್ (ರೈಡರ್) ಶುಭಂ ಕುಮಾರ್ ಬಲಿಯಾನ್ (ಎಡ ಕವರ್) ಅಶು ಸಿಂಗ್ (ಬಲ ಮುಖಪುಟ) ಸುಮಿತ್ ಸಾಂಗ್ವಾನ್ (ಎಡ ಮೂಲೆ) ನಿತೇಶ್ ಕುಮಾರ್ (ಬಲ ಮೂಲೆ)

ಭಾರತ vs ದ.ಆಫ್ರಿಕಾ: ಕೊಹ್ಲಿ ಪೆವಿಲಿಯನ್‌ನಲ್ಲಿ ಬ್ಯಾಟ್ ಬೀಸಿದ ಕೂಡಲೇ ವಿಕೆಟ್ ಒಪ್ಪಿಸಿದ ಅಗರ್ವಾಲ್, ವಿಡಿಯೋ ವೈರಲ್ಭಾರತ vs ದ.ಆಫ್ರಿಕಾ: ಕೊಹ್ಲಿ ಪೆವಿಲಿಯನ್‌ನಲ್ಲಿ ಬ್ಯಾಟ್ ಬೀಸಿದ ಕೂಡಲೇ ವಿಕೆಟ್ ಒಪ್ಪಿಸಿದ ಅಗರ್ವಾಲ್, ವಿಡಿಯೋ ವೈರಲ್

ಪಂದ್ಯ 2: ಬೆಂಗಳೂರು ಬುಲ್ಸ್ vs ದಬಾಂಗ್ ಡೆಲ್ಲಿ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ಉತ್ತಮ ಆರಂಭವನ್ನು ಪಡೆದುಕೊಂಡಿದ್ದು, ಅಂಕಪಟ್ಟಿಯಲ್ಲಿ ಉತ್ತಮ ಹಂತದಲ್ಲಿವೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿರುವ ದಬಾಂಗ್ ಡೆಲ್ಲಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿ, ಕೇವಲ ಒಂದೇ ಒಂದು ಪಂದ್ಯದಲ್ಲಿ ಸೋತು, 2 ಪಂದ್ಯಗಳಲ್ಲಿ ಡ್ರಾ ಮಾಡಿಕೊಂಡು 32 ಅಂಕಗಳನ್ನು ಹೊಂದುವುದರ ಮೂಲಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಅತ್ತ ಬೆಂಗಳೂರು ಬುಲ್ಸ್ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿವರೆಗೂ ಒಟ್ಟು 8 ಪಂದ್ಯಗಳನ್ನಾಡಿದ್ದು 5 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 28 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 50ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭವಾಗಲಿದೆ. ಇನ್ನು ಬೆಂಗಳೂರು ಬುಲ್ಸ್ ಮತ್ತು ದಬಂಗ್ ಡೆಲ್ಲಿ ತಂಡಗಳ ನಡುವೆ ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇದುವರೆಗೂ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ತಂಡಕ್ಕಿಂತ ದಬಂಗ್ ಡೆಲ್ಲಿ ತಂಡ ಹೆಚ್ಚು ಗೆಲುವನ್ನು ದಾಖಲಿಸುವುದರ ಮೂಲಕ ಮೇಲುಗೈ ಸಾಧಿಸಿದೆ. ಇತ್ತಂಡಗಳ ನಡುವೆ ಇದುವರೆಗೂ ಒಟ್ಟು 14 ಪಂದ್ಯಗಳು ನಡೆದಿದ್ದು ದಬಾಂಗ್ ಡೆಲ್ಲಿ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಬೆಂಗಳೂರು ಬುಲ್ಸ್ 5 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಬೆಂಗಳೂರು ಬುಲ್ಸ್ ಸಂಭಾವ್ಯ ತಂಡ: ಪವನ್ ಕುಮಾರ್ ಸೆಹ್ರಾವತ್ (ರೈಡರ್) ಚಂದ್ರನ್ ರಂಜಿತ್ (ರೈಡರ್) ಭರತ್ ಹೂಡಾ (ರೈಡರ್) ಮಹೇಂದರ್ ಸಿಂಗ್ (ಎಡ ಕವರ್) ಮೋಹಿತ್ ಸೆಹ್ರಾವತ್ (ಬಲ ಕವರ್) ಅಮನ್ ಆಂಟಿಲ್ (ಎಡ ಮೂಲೆ) ಸೌರಭ್ ನಂದಲ್ (ಬಲ ಮೂಲೆ)

ದಬಾಂಗ್ ಡೆಲ್ಲಿ ಸಂಭಾವ್ಯ ತಂಡ: ನವೀನ್ ಕುಮಾರ್ ಗೋಯತ್ (ರೈಡರ್) ವಿಜಯ್ ಮಲಿಕ್ (ರೈಡರ್) ಆಶು ಮಲಿಕ್ (ರೈಡರ್) ಮಂಜೀತ್ ಛಿಲ್ಲರ್ (ಎಡ ಕವರ್) ಜೀವ ಕುಮಾರ್ (ಬಲ ಕವರ್) ಜೋಗಿಂದರ್ ನರ್ವಾಲ್ (ಎಡ ಮೂಲೆ) ಸಂದೀಪ್ ನರ್ವಾಲ್ (ಬಲ ಮೂಲೆ)

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Wednesday, January 12, 2022, 15:57 [IST]
Other articles published on Jan 12, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X