ಪ್ರೋ ಕಬಡ್ಡಿ ಲೀಗ್ 8: ಬೆಂಗಳೂರು ಬುಲ್ಸ್‌ಗೆ ಗುಜರಾತ್ ಸವಾಲು; ಅಗ್ರಸ್ಥಾನಕ್ಕೇರುತ್ತಾ ಬುಲ್ಸ್?

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 13ರ ಗುರುವಾರದವರೆಗೂ ಒಟ್ಟು 52 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಪಾಟ್ನಾ ಪೈರೇಟ್ಸ್ ಅಗ್ರಸ್ಥಾನದಲ್ಲಿದ್ದರೆ, ಬೆಂಗಳೂರು ಬುಲ್ಸ್ ದ್ವಿತೀಯ ಸ್ಥಾನ ಮತ್ತು ದಬಾಂಗ್ ಡೆಲ್ಲಿ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 52 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 12 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪಾಟ್ನಾ ಪೈರೇಟ್ಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಮತ್ತು ಗುಜರಾತ್ ಜಿಯಂಟ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಜೈಪುರ್ ಪಿಂಕ್ ಪ್ಯಾಂಥರ್ಸ್ vs ಪಾಟ್ನಾ ಪೈರೇಟ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಸದ್ಯ ಪಾಟ್ನಾ ಪೈರೇಟ್ಸ್ ಅತ್ಯುತ್ತಮ ಪ್ರದರ್ಶನವನ್ನು ನೀಡಿರುವ ತಂಡ ಎನಿಸಿಕೊಂಡಿದ್ದರೆ, ಜೈಪುರ ಪಿಂಕ್ ಪ್ಯಾಂಥರ್ಸ್ ಸಾಮಾನ್ಯ ಪ್ರದರ್ಶನವನ್ನು ನೀಡುವುದರ ಮೂಲಕ ಅಂಕಪಟ್ಟಿಯಲ್ಲಿ ಸಾಧಾರಣ ಸ್ಥಾನವನ್ನು ಪಡೆದುಕೊಂಡಿದೆ. ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿರುವ ಪಾಟ್ನಾ ಪೈರೇಟ್ಸ್ 6 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 1 ಪಂದ್ಯದಲ್ಲಿ ಸೋತಿದೆ ಮತ್ತು ಉಳಿದ 1 ಪಂದ್ಯದಲ್ಲಿ ಡ್ರಾ ಮಾಡಿಕೊಂಡು 34 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಅತ್ತ ಈ ಬಾರಿಯ ಟೂರ್ನಿಯಲ್ಲಿ ಇದುವರೆಗೂ ಒಟ್ಟು 8 ಪಂದ್ಯಗಳನ್ನಾಡಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ 4 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು 23 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನವನ್ನು ಪಡೆದುಕೊಂಡಿದೆ.

ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 53ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ನಡೆಯಲಿದೆ. ಈ ಬಾರಿಯ ಟೂರ್ನಿಯ ಅಂಕಪಟ್ಟಿಯಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ತಂಡಕ್ಕಿಂತ ಅತ್ಯುನ್ನತ ಸ್ಥಾನವನ್ನು ಹೊಂದಿರುವ ಪಾಟ್ನಾ ಪೈರೇಟ್ಸ್ ಪ್ರೊ ಕಬಡ್ಡಿ ಲೀಗ್ ಇತಿಹಾಸದ ಮುಖಾಮುಖಿಯಲ್ಲಿಯೂ ಕೂಡ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸ್ಪಷ್ಟ ಮೇಲುಗೈ ಸಾಧಿಸಿದೆ. ಹೌದು, ಇತ್ತಂಡಗಳ ನಡುವೆ ಇದುವರೆಗೂ ಒಟ್ಟು 14 ಪಂದ್ಯಗಳು ನಡೆದಿದ್ದು ಪಾಟ್ನಾ ಪೈರೇಟ್ಸ್ 9 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಜೈಪುರ ಪಿಂಕ್ ಪ್ಯಾಂಥರ್ಸ್ ಕೇವಲ 5 ಪಂದ್ಯಗಳಲ್ಲಿ ಗೆದ್ದಿದೆ.

ಐಪಿಎಲ್ 2022: ಶುರುವಿಗೂ ಮುನ್ನ ವಿಘ್ನ; ಭಾರತ, ಯುಎಇಯಲ್ಲೂ ಟೂರ್ನಿ ಅನುಮಾನ, ಮತ್ತೆಲ್ಲಿ?ಐಪಿಎಲ್ 2022: ಶುರುವಿಗೂ ಮುನ್ನ ವಿಘ್ನ; ಭಾರತ, ಯುಎಇಯಲ್ಲೂ ಟೂರ್ನಿ ಅನುಮಾನ, ಮತ್ತೆಲ್ಲಿ?

ಪಾಟ್ನಾ ಪೈರೇಟ್ಸ್ ಸಂಭಾವ್ಯ ಆಡುವ ಬಳಗ: ಮೋನು ಗೋಯತ್ (ರೈಡರ್) ಸಚಿನ್ ತನ್ವರ್ (ರೈಡರ್) ಪ್ರಶಾಂತ್ ಕುಮಾರ್ ರೈ (ರೈಡರ್) ಸಜಿನ್ ಚಂದ್ರಶೇಖರ್ (ಎಡ ಮುಖಪುಟ) ನೀರಜ್ ಕುಮಾರ್ (ಬಲ ಮುಖಪುಟ) ಮೊಹಮ್ಮದ್ರೇಜಾ ಶಾದ್ಲೂಯಿ (ಎಡ ಮೂಲೆ) ಸುನಿಲ್ ನರ್ವಾಲ್ (ಬಲ ಮೂಲೆ)

ಜೈಪುರ್ ಪಿಂಕ್ ಪ್ಯಾಂಥರ್ಸ್ ಸಂಭಾವ್ಯ ಆಡುವ ಬಳಗ: ಅರ್ಜುನ್ ದೇಶ್ವಾಲ್ (ರೈಡರ್) ದೀಪಕ್ ನಿವಾಸ್ ಹೂಡಾ (ರೈಡರ್) ನವೀನ್ ಬಜಾದ್ (ಆಲ್-ರೌಂಡರ್) ವಿಶಾಲ್ ಲಾಥರ್ (ಎಡ ಕವರ್) ಅಮಿತ್ ಖಾರ್ಬ್ (ರೈಟ್ ಕವರ್) ಸಂದೀಪ್ ಧುಲ್ (ಎಡ ಮೂಲೆ) ಸಾಹುಲ್ ಕುಮಾರ್ (ಬಲ ಮೂಲೆ)

ಪಂದ್ಯ 2: ಬೆಂಗಳೂರು ಬುಲ್ಸ್ vs ಗುಜರಾತ್ ಜಿಯಂಟ್ಸ್

ಕಳೆದ ಪಂದ್ಯದಲ್ಲಿ ದಬಾಂಗ್ ಡೆಲ್ಲಿಯಂತಹ ಬಲಿಷ್ಠ ತಂಡಕ್ಕೆ ದೊಡ್ಡ ಅಂತರದಲ್ಲಿ ಸೋಲುಣಿಸಿರುವ ಬೆಂಗಳೂರು ಬುಲ್ಸ್ ಇದೀಗ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಕಳಪೆ ತಂಡ ಎನಿಸಿಕೊಂಡಿರುವ ಗುಜರಾತ್ ವಿರುದ್ಧ ಬೆಂಗಳೂರು ಬುಲ್ಸ್ ದೊಡ್ಡ ಅಂತರದಲ್ಲಿ ಗೆದ್ದಿದ್ದೇ ಆದರೆ ಅಗ್ರಸ್ಥಾನಕ್ಕೇರುವ ಅವಕಾಶಗಳಿವೆ. ಆದರೆ ಇದಕ್ಕೂ ಮುನ್ನ ನಡೆಯುವ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ವಿರುದ್ಧ ಪಾಟ್ನಾ ಪೈರೇಟ್ಸ್ ಜಯಗಳಿಸಿದರೆ ಬೆಂಗಳೂರು ಬುಲ್ಸ್ ತಂಡದ ಅಗ್ರಸ್ಥಾನಕ್ಕೇರುವ ಕನಸಿಗೆ ತಣ್ಣೀರು ಬೀಳಲಿದೆ. ಸದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 9 ಪಂದ್ಯಗಳನ್ನಾಡಿರುವ ಬೆಂಗಳೂರು ಬುಲ್ಸ್ 6 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಸೋತು, ಮತ್ತೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 33 ಅಂಕಗಳನ್ನು ಹೊಂದಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.

ಅತ್ತ ಈ ಬಾರಿಯ ಆವೃತ್ತಿಯಲ್ಲಿ ನೀರಸ ಪ್ರದರ್ಶನವನ್ನು ನೀಡಿರುವ ಗುಜರಾತ್ ಜಯಂಟ್ಸ್ 8 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳನ್ನು ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 20 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಹನ್ನೊಂದನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ನಡೆಯಲಿರುವ ಇಂದಿನ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 54ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭವಾಗಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇದುವರೆಗೂ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಬೆಂಗಳೂರು ಬುಲ್ಸ್ ತಂಡಕ್ಕಿಂತ ಗುಜರಾತ್ ಕೊಂಚ ಮುನ್ನಡೆಯನ್ನು ಸಾಧಿಸಿದೆ. ಇತ್ತಂಡಗಳ ನಡುವೆ ನಡೆದಿರುವ ಒಟ್ಟು 6 ಪಂದ್ಯಗಳ ಪೈಕಿ ಗುಜರಾತ್ ಜಯಂಟ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಬೆಂಗಳೂರು ಬುಲ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

ಭಾರತ vs ದ.ಆಫ್ರಿಕಾ: ಮಕ್ಕಳ ರೀತಿ ಆಡುವುದನ್ನು ಬಿಡಬೇಕು ಎಂದು ಕೊಹ್ಲಿಗೆ ಚಾಟಿ ಬೀಸಿದ ಮಾಜಿ ಕ್ರಿಕೆಟಿಗಭಾರತ vs ದ.ಆಫ್ರಿಕಾ: ಮಕ್ಕಳ ರೀತಿ ಆಡುವುದನ್ನು ಬಿಡಬೇಕು ಎಂದು ಕೊಹ್ಲಿಗೆ ಚಾಟಿ ಬೀಸಿದ ಮಾಜಿ ಕ್ರಿಕೆಟಿಗ

ಬೆಂಗಳೂರು ಬುಲ್ಸ್ ಸಂಭಾವ್ಯ ಆಡುವ ಬಳಗ: ಪವನ್ ಸೆಹ್ರಾವತ್ (ನಾಯಕ) (ರೈಡರ್) ಚಂದ್ರನ್ ರಂಜಿತ್ (ರೈಡರ್) ಭರತ್ (ರೈಡರ್) ಮಹೇಂದರ್ ಸಿಂಗ್ (ಎಡ ಕವರ್) ಮೋಹಿತ್ ಸೆಹ್ರಾವತ್ (ಬಲ ಕವರ್) ಅಮನ್ (ಎಡ ಮೂಲೆ) ಸೌರಭ್ ನಂದಲ್ (ಬಲ ಮೂಲೆ)

ಗುಜರಾತ್ ಜೆಯಂಟ್ಸ್ ಸಂಭಾವ್ಯ ಆಡುವ ಬಳಗ: ರಾಕೇಶ್ ನರ್ವಾಲ್ (ರೈಡರ್) ರಾಕೇಶ್ (ರೈಡರ್) ಅಜಯ್ ಕುಮಾರ್ (ರೈಡರ್) ಪರ್ವೇಶ್ ಭೈನ್‌ವಾಲ್ (ಎಡ ಕವರ್) ಸುನಿಲ್ ಮಲಿಕ್ (ರೈಟ್ ಕವರ್) ಗಿರೀಶ್ ಎರ್ನಾಕ್ (ಎಡ ಮೂಲೆ) ರವೀಂದರ್ ಪಹಲ್ (ನಾಯಕ) (ಬಲ ಮೂಲೆ)

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

For Quick Alerts
ALLOW NOTIFICATIONS
For Daily Alerts
Story first published: Friday, January 14, 2022, 16:43 [IST]
Other articles published on Jan 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X