ಪ್ರೋ ಕಬಡ್ಡಿ ಲೀಗ್ 8: ಫೆಬ್ರವರಿ 17ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಫೆಬ್ರವರಿ 16ರ ಬುಧವಾರದವರೆಗೂ ಒಟ್ಟು 123 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಪಾಟ್ನಾ ಪೈರೇಟ್ಸ್ ಅಗ್ರಸ್ಥಾನದಲ್ಲಿದ್ದರೆ, ದಬಾಂಗ್ ಡೆಲ್ಲಿ ದ್ವಿತೀಯ ಸ್ಥಾನ ಮತ್ತು ಯುಪಿ ಯೋಧಾ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 123 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಫೆಬ್ರವರಿ 17) ಒಟ್ಟು 3 ಪಂದ್ಯಗಳು ನಡೆಯಲಿವೆ. ಈ 3 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಯುಪಿ ಯೋಧಾ ಮತ್ತು ಯು ಮುಂಬಾ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ಬೆಂಗಳೂರು ಬುಲ್ಸ್ ತಂಡಗಳು ಸೆಣಸಾಟ ನಡೆಸಲಿವೆ ಮತ್ತು ತೃತೀಯ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ಮತ್ತು ಪಾಟ್ನಾ ಪೈರೇಟ್ಸ್ ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 3 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಯುಪಿ ಯೋಧಾ vs ಯು ಮುಂಬಾ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ಯುಪಿ ಯೋದಾ 9 ಪಂದ್ಯಗಳಲ್ಲಿ ಗೆದ್ದು, 9 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 63 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 20 ಪಂದ್ಯಗಳನ್ನಾಡಿರುವ ಯು ಮುಂಬಾ ತಂಡ 7 ಪಂದ್ಯಗಳಲ್ಲಿ ಗೆದ್ದು, 8 ಪಂದ್ಯಗಳಲ್ಲಿ ಸೋತಿದ್ದು, ಉಳಿದ 5 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 53 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 124ನೇ ಪಂದ್ಯವಾಗಿದ್ದು ಸಂಜೆ 7. 30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 7 ಮುಖಾಮುಖಿ ಪಂದ್ಯಗಳು ನಡೆದಿದ್ದು ಯು ಮುಂಬಾ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಯುಪಿ ಯೋಧಾ 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

'ನಾನು ಹೇಳುತ್ತಿದ್ದೇನೆ ರಿವ್ಯೂ ತಗೋ' ಎಂದ ಕೊಹ್ಲಿಗೆ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯೆ ಹೀಗಿತ್ತು'ನಾನು ಹೇಳುತ್ತಿದ್ದೇನೆ ರಿವ್ಯೂ ತಗೋ' ಎಂದ ಕೊಹ್ಲಿಗೆ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯೆ ಹೀಗಿತ್ತು

ಯುಪಿ ಯೋಧಾ ಸಂಭಾವ್ಯ ಆಡುವ ಬಳಗ: ಸುರೇಂದರ್ ಗಿಲ್, ಪರ್ದೀಪ್ ನರ್ವಾಲ್, ಅಶು ಸಿಂಗ್, ಶುಭಂ, ಶ್ರೀಕಾಂತ್ ಜಾಧವ್, ಸುಮಿತ್ ಮತ್ತು ನಿತೇಶ್ ಕುಮಾರ್ (ನಾಯಕ)

ಯು ಮುಂಬಾ ಸಂಭಾವ್ಯ ಆಡುವ ಬಳಗ: ಅಭಿಷೇಕ್ ಸಿಂಗ್, ಹರೇಂದ್ರ, ರಾಹುಲ್ ಸೇಠಪಾಲ್, ಶಿವಂ, ವಿ ಅಜಿತ್, ರಿಂಕು ಮತ್ತು ಫಜೆಲ್ ಅತ್ರಾಚಲಿ (ನಾಯಕ)

ಪಂದ್ಯ 2: ಹರಿಯಾಣ ಸ್ಟೀಲರ್ಸ್ vs ಬೆಂಗಳೂರು ಬುಲ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 20 ಪಂದ್ಯಗಳನ್ನಾಡಿರುವ ಹರಿಯಾಣ ಸ್ಟೀಲರ್ಸ್ 10 ಪಂದ್ಯಗಳಲ್ಲಿ ಗೆದ್ದು, 7 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 63 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ಬೆಂಗಳೂರು ಬುಲ್ಸ್ ತಂಡ 10 ಪಂದ್ಯಗಳಲ್ಲಿ ಗೆದ್ದು, 9 ಪಂದ್ಯಗಳಲ್ಲಿ ಸೋತಿದ್ದು, ಉಳಿದ 2 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 61 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 125ನೇ ಪಂದ್ಯವಾಗಿದ್ದು ರಾತ್ರಿ 8. 30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 5 ಮುಖಾಮುಖಿ ಪಂದ್ಯಗಳು ನಡೆದಿದ್ದು ಬೆಂಗಳೂರು ಬುಲ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಹರಿಯಾಣ ಸ್ಟೀಲರ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ.

ಬೆಂಗಳೂರು ಬುಲ್ಸ್ ಸಂಭಾವ್ಯ ಆಡುವ ಬಳಗ: ಪವನ್ ಸೆಹ್ರಾವತ್ (ನಾಯಕ), ಮಯೂರ್ ಕದಮ್, ಮಹೇಂದರ್ ಸಿಂಗ್, ಭರತ್, ಜಿಬಿ ಮೋರೆ ಸೌರಭ್ ನಂದಲ್ ಮತ್ತು ಅಮನ್

ಹರಿಯಾಣ ಸ್ಟೀಲರ್ಸ್: ವಿಕಾಸ್ ಕಂಡೋಲ (ನಾಯಕ), ಮೋಹಿತ್, ಜೈದೀಪ್, ಆಶಿಶ್, ಮೀಟು, ವಿಜಯ್ ಕುಮಾರ್ ಮತ್ತು ಸುರೇಂದರ್ ನಾಡಾ

ಐಪಿಎಲ್ 2022: ಕೊಹ್ಲಿ ನಂತರ ಆರ್‌ಸಿಬಿ ನಾಯಕನಾಗಲು ರೇಸ್‌ನಲ್ಲಿದ್ದಾರೆ ಈ ಮೂವರು ಆಟಗಾರರುಐಪಿಎಲ್ 2022: ಕೊಹ್ಲಿ ನಂತರ ಆರ್‌ಸಿಬಿ ನಾಯಕನಾಗಲು ರೇಸ್‌ನಲ್ಲಿದ್ದಾರೆ ಈ ಮೂವರು ಆಟಗಾರರು

ಪಂದ್ಯ 3: ದಬಾಂಗ್ ಡೆಲ್ಲಿ vs ಪಾಟ್ನಾ ಪೈರೇಟ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 20 ಪಂದ್ಯಗಳನ್ನಾಡಿರುವ ಪಾಟ್ನಾ ಪೈರೇಟ್ಸ್ 15 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು, ಉಳಿದ 1 ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 80 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 20 ಪಂದ್ಯಗಳನ್ನಾಡಿರುವ ದಬಾಂಗ್ ಡೆಲ್ಲಿ ತಂಡ 10 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತಿದ್ದು, ಉಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 65 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 126ನೇ ಪಂದ್ಯವಾಗಿದ್ದು ರಾತ್ರಿ 9. 30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 13 ಮುಖಾಮುಖಿ ಪಂದ್ಯಗಳು ನಡೆದಿದ್ದು ಪಾಟ್ನಾ ಪೈರೇಟ್ಸ್ 7 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ದಬಾಂಗ್ ಡೆಲ್ಲಿ 5 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ದಬಾಂಗ್ ಡೆಲ್ಲಿ ಸಂಭಾವ್ಯ ಆಡುವ ಬಳಗ: ನವೀನ್ ಗೋಯತ್, ಕ್ರಿಶನ್ ಧುಲ್, ಮಂಜೀತ್ ಚಿಲ್ಲರ್, ವಿಜಯ್ ಮಲಿಕ್, ನೀರಜ್ ನರ್ವಾಲ್, ಸಂದೀಪ್ ನರ್ವಾಲ್ ಮತ್ತು ಜೋಗಿಂದರ್ ನರ್ವಾಲ್ (ನಾಯಕ)

ಪಾಟ್ನಾ ಪೈರೇಟ್ಸ್ ಸಂಭಾವ್ಯ ಆಡುವ ಬಳಗ: ಪ್ರಶಾಂತ್ ಕುಮಾರ್ ರೈ (ನಾಯಕ), ಸಚಿನ್ ತನ್ವರ್, ಮೋನು ಗೋಯತ್, ನೀರಜ್, ಸಜಿನ್ ಸಿ, ಮೊಹಮ್ಮದ್ರೇಜಾ ಶಾದ್ಲೂಯಿ ಮತ್ತು ಸುನಿಲ್

ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

For Quick Alerts
ALLOW NOTIFICATIONS
For Daily Alerts
Story first published: Thursday, February 17, 2022, 15:21 [IST]
Other articles published on Feb 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X