For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಫೆಬ್ರವರಿ 4ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 8: Dabang Delhi vs Bengaluru Bulls preview, head to head and probable playing 7

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಫೆಬ್ರವರಿ 3ರ ಗುರುವಾರದವರೆಗೂ ಒಟ್ಟು 91 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಬೆಂಗಳೂರು ಬುಲ್ಸ್ ದ್ವಿತೀಯ ಸ್ಥಾನ ಮತ್ತು ಪಾಟ್ನಾ ಪೈರೇಟ್ಸ್ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 91 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಫೆಬ್ರವರಿ 4) ಒಟ್ಟು 3 ಪಂದ್ಯಗಳು ನಡೆಯಲಿವೆ. ಈ 3 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ಮತ್ತು ಬೆಂಗಳೂರು ಬುಲ್ಸ್ ತಂಡಗಳು ಸೆಣಸಾಟ ನಡೆಸಲಿವೆ ಮತ್ತು ತೃತೀಯ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಪಾಟ್ನಾ ಪೈರೇಟ್ಸ್ ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 3 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಹರಿಯಾಣ ಸ್ಟೀಲರ್ಸ್ vs ಬೆಂಗಾಲ್ ವಾರಿಯರ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 15 ಪಂದ್ಯಗಳನ್ನಾಡಿರುವ ಹರಿಯಾಣ ಸ್ಟೀಲರ್ಸ್ 6 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 43 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 7ನೇ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 15 ಪಂದ್ಯಗಳನ್ನಾಡಿರುವ ಬೆಂಗಾಲ್ ವಾರಿಯರ್ಸ್ ತಂಡ 7 ಪಂದ್ಯಗಳಲ್ಲಿ ಗೆದ್ದು, 7 ಪಂದ್ಯಗಳಲ್ಲಿ ಸೋತಿದ್ದು, ಉಳಿದ 1 ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 41 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 92ನೇ ಪಂದ್ಯವಾಗಿದ್ದು ಸಂಜೆ 7. 30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 5 ಮುಖಾಮುಖಿ ಪಂದ್ಯಗಳು ನಡೆದಿದ್ದು ಹರಿಯಾಣ ಸ್ಟೀಲರ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಬೆಂಗಾಲ್ ವಾರಿಯರ್ಸ್ 1 ಪಂದ್ಯದಲ್ಲಿ ಗೆದ್ದಿದೆ.

ಹರಿಯಾಣ ಸ್ಟೀಲರ್ಸ್ ಸಂಭಾವ್ಯ ಆಡುವ ಬಳಗ: ವಿಕಾಸ್ ಕಂಡೋಲಾ (ನಾಯಕ), ರೋಹಿತ್ ಗುಲಿಯಾ, ಮೀಟೂ ಶರ್ಮಾ, ಜೈದೀಪ್ ಕುಲದೀಪ್, ರವಿ ಕುಮಾರ್, ಸುರೇಂದರ್ ನಾಡಾ, ಮೋಹಿತ್ ನಂದಲ್

ಬೆಂಗಾಲ್ ವಾರಿಯರ್ಸ್ ಸಂಭಾವ್ಯ ಆಡುವ ಬಳಗ: ಮಣಿಂದರ್ ಸಿಂಗ್ (ನಾಯಕ), ಸುಕೇಶ್ ಹೆಗ್ಡೆ, ಮೊಹಮ್ಮದ್ ನಬಿಬಕ್ಷ್, ಅಮಿತ್ ನಿರ್ವಾಲ್, ದರ್ಶನ್, ಅಬೋಜರ್ ಮಿಘಾನಿ, ರಾನ್ ಸಿಂಗ್

ಪಂದ್ಯ 2: ದಬಾಂಗ್ ಡೆಲ್ಲಿ vs ಬೆಂಗಳೂರು ಬುಲ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 16 ಪಂದ್ಯಗಳನ್ನಾಡಿರುವ ದಬಾಂಗ್ ಡೆಲ್ಲಿ 9 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು, ಉಳಿದ 2 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 54 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 17 ಪಂದ್ಯಗಳನ್ನಾಡಿರುವ ಬೆಂಗಳೂರು ಬುಲ್ಸ್ ತಂಡ 9 ಪಂದ್ಯಗಳಲ್ಲಿ ಗೆದ್ದು, 7 ಪಂದ್ಯಗಳಲ್ಲಿ ಸೋತಿದ್ದು, ಉಳಿದ 1 ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 51 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 93ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 15 ಮುಖಾಮುಖಿ ಪಂದ್ಯಗಳು ನಡೆದಿದ್ದು ದಬಾಂಗ್ ಡೆಲ್ಲಿ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಬೆಂಗಳೂರು ಬುಲ್ಸ್ 6 ಪಂದ್ಯದಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ದಬಾಂಗ್ ಡೆಲ್ಲಿ ಸಂಭಾವ್ಯ ಆಡುವ ಬಳಗ: ನವೀನ್ ಗೋಯತ್, ವಿಜಯ್ ಮಲಿಕ್, ಅಶು, ಮಂಜೀತ್ ಚಿಲ್ಲರ್, ಜೀವ ಕುಮಾರ್, ಸಂದೀಪ್ ನರ್ವಾಲ್, ಜೋಗಿಂದರ್ ನರ್ವಾಲ್ (ನಾಯಕ)

ಬೆಂಗಳೂರು ಬುಲ್ಸ್ ಸಂಭಾವ್ಯ ಆಡುವ ಬಳಗ: ಪವನ್ ಸೆಹ್ರಾವತ್ (ನಾಯಕ), ಮೋಹಿತ್ ಸೆಹ್ರಾವತ್, ಅಂಕಿತ್, ಜಿಬಿ ಮೋರೆ, ಭರತ್, ಸೌರಭ್ ನಂದಲ್, ಅಮನ್

ಪಂದ್ಯ 3: ಗುಜರಾತ್ ಜೈಂಟ್ಸ್ vs ಪಾಟ್ನಾ ಪೈರೇಟ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿರುವ ಪಾಟ್ನಾ ಪೈರೇಟ್ಸ್ 9 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು, ಉಳಿದ 1 ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 50 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿರುವ ಪಾಟ್ನಾ ಪೈರೇಟ್ಸ್ ತಂಡ 5 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತಿದ್ದು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 38 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 94ನೇ ಪಂದ್ಯವಾಗಿದ್ದು ರಾತ್ರಿ 9.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 8 ಮುಖಾಮುಖಿ ಪಂದ್ಯಗಳು ನಡೆದಿದ್ದು ಗುಜರಾತ್ ಜೈಂಟ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಪಾಟ್ನಾ ಪೈರೇಟ್ಸ್ 3 ಪಂದ್ಯದಲ್ಲಿ ಗೆದ್ದಿದೆ.

ಗುಜರಾತ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ: ಪರ್ದೀಪ್ (ರೈಡರ್) ರಾಕೇಶ್ (ರೈಡರ್) ಅಜಯ್ ಕುಮಾರ್ (ರೈಡರ್) ಪರ್ವೇಶ್ ಭೈನ್ಸ್ವಾಲ್ (ಎಡ ಕವರ್) ಸುನೀಲ್ ಮಲಿಕ್ (ಬಲ ಕವರ್) ಗಿರೀಶ್ ಎರ್ನಾಕ್ (ಎಡ ಮೂಲೆ) ರವೀಂದರ್ ಪಹಲ್ (ನಾಯಕ) (ಬಲ ಮೂಲೆ)

ಪಾಟ್ನಾ ಪೈರೇಟ್ಸ್ ಸಂಭಾವ್ಯ ಆಡುವ ಬಳಗ: ಪರ್ದೀಪ್ (ರೈಡರ್) ರಾಕೇಶ್ (ರೈಡರ್) ಅಜಯ್ ಕುಮಾರ್ (ರೈಡರ್) ಪರ್ವೇಶ್ ಭೈನ್ಸ್ವಾಲ್ (ಎಡ ಕವರ್) ಸುನೀಲ್ ಮಲಿಕ್ (ಬಲ ಕವರ್) ಗಿರೀಶ್ ಎರ್ನಾಕ್ (ಎಡ ಮೂಲೆ) ರವೀಂದರ್ ಪಹಲ್ (ನಾಯಕ) (ಬಲ ಮೂಲೆ)

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Friday, February 4, 2022, 17:21 [IST]
Other articles published on Feb 4, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+