ಪ್ರೋ ಕಬಡ್ಡಿ ಲೀಗ್ 8: ಜನವರಿ 29ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 28ರ ಶುಕ್ರವಾರದವರೆಗೂ ಒಟ್ಟು 80 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಬೆಂಗಳೂರು ಬುಲ್ಸ್ ಅಗ್ರಸ್ಥಾನದಲ್ಲಿದ್ದರೆ, ಪಾಟ್ನಾ ಪೈರೇಟ್ಸ್ ದ್ವಿತೀಯ ಸ್ಥಾನ ಮತ್ತು ದಬಾಂಗ್ ಡೆಲ್ಲಿ ತೃತೀಯ ಸ್ಥಾನದಲ್ಲಿವೆ.
ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 80 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 29 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಗುಜರಾತ್ ಜಯಂಟ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..
ಪಂದ್ಯ 1: ಗುಜರಾತ್ ಜಯಂಟ್ಸ್ vs ದಬಾಂಗ್ ಡೆಲ್ಲಿ
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿರುವ ದಬಾಂಗ್ ಡೆಲ್ಲಿ 7 ಪಂದ್ಯಗಳಲ್ಲಿ ಜಯ ಸಾಧಿಸಿ 4 ಪಂದ್ಯಗಳಲ್ಲಿ ಸೋತಿದ್ದು ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 43 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದ್ದರೆ, ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಗುಜರಾತ್ ಜಯಂಟ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿ, 5 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 28 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಹನ್ನೊಂದನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಟೂರ್ನಿಯ 81ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ನಡೆದಿರುವ 9 ಮುಖಾಮುಖಿ ಪಂದ್ಯಗಳಲ್ಲಿ ಗುಜರಾತ್ ಜಯಂಟ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ದಬಾಂಗ್ ಡೆಲ್ಲಿ 2 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೆರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.
ಗುಜರಾತ್ ಜೇಂಟ್ಸ್ ಅಸಂಭಾವ್ಯ ಆಡುವ ಬಳಗ: ರಾಕೇಶ್ ನರ್ವಾಲ್, ರಾಕೇಶ್ ಎಚ್ಎಸ್, ಮಹೇಂದ್ರ ಗಣೇಶ್ ರಜಪೂತ್, ಸುನಿಲ್ ಮಲಿಕ್ (ನಾಯಕ), ಪರ್ವೇಶ್ ಭೈನ್ವಾಲ್, ಅಂಕಿತ್, ಗಿರೀಶ್ ಎರ್ನಾಕ್
ದಬಾಂಗ್ ಡೆಲ್ಲಿ ಸಂಭಾವ್ಯ ಆಡುವ ಬಳಗ: ನವೀನ್ ಗೋಯತ್, ವಿಜಯ್ ಮಲಿಕ್, ಅಶು, ಮಂಜೀತ್ ಚಿಲ್ಲರ್ (ನಾಯಕ) ,ವಿಕಾಶ್ ಡಿ, ಸಂದೀಪ್ ನರ್ವಾಲ್, ಕ್ರಿಶನ್ ಧುಲ್
ಪಂದ್ಯ 2: ತೆಲುಗು ಟೈಟಾನ್ಸ್ vs ಬೆಂಗಾಲ್ ವಾರಿಯರ್ಸ್
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿರುವ ಬೆಂಗಾಲ್ ವಾರಿಯರ್ಸ್ 7 ಪಂದ್ಯಗಳಲ್ಲಿ ಜಯ ಸಾಧಿಸಿ 6 ಪಂದ್ಯಗಳಲ್ಲಿ ಸೋತಿದ್ದು ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 41 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದರೆ, ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿರುವ ತೆಲುಗು ಟೈಟಾನ್ಸ್ 1 ಪಂದ್ಯದಲ್ಲಿ ಜಯ ಸಾಧಿಸಿ, 10 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 22 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಟೂರ್ನಿಯ 82ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ನಡೆದಿರುವ 17 ಮುಖಾಮುಖಿ ಪಂದ್ಯಗಳಲ್ಲಿ ಬೆಂಗಾಲ್ ವಾರಿಯರ್ಸ್ 10 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ತೆಲುಗು ಟೈಟಾನ್ಸ್ 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದ 3 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.
ತೆಲುಗು ಟೈಟಾನ್ಸ್ ಸಂಭಾವ್ಯ ಆಡುವ ಬಳಗ: ರೋಹಿತ್ ಕುಮಾರ್ (ನಾಯಕ), ಆದರ್ಶ್ ಟಿ, ಅಂಕಿತ್ ಬೇನಿವಾಲ್, ಸುರೀಂದರ್ ಸಿಂಗ್, ಆಕಾಶ್ ಚೌಧರಿ, ಸಿ ಅರುಣ್, ಸಂದೀಪ್ ಕಾಂಡೋಲಾ
ಬೆಂಗಾಲ್ ವಾರಿಯರ್ಸ್ ಸಂಭಾವ್ಯ ಆಡುವ ಬಳಗ: ಮಣಿಂದರ್ ಸಿಂಗ್ (ನಾಯಕ), ಸುಕೇಶ್ ಹೆಗ್ಡೆ, ಮೊಹಮ್ಮದ್ ನಬಿಬಕ್ಷ್, ವಿಜಿನ್ ತಂಗದುರೈ, ದರ್ಶನ್ ಜೆ ,ರಾನ್ ಸಿಂಗ್, ಅಬೋಜರ್ ಮಿಘಾನಿ
ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications