ಪ್ರೋ ಕಬಡ್ಡಿ ಲೀಗ್ 8: ಜನವರಿ 31ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 30ರ ಭಾನುವಾರದವರೆಗೂ ಒಟ್ಟು 84 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಬೆಂಗಳೂರು ಬುಲ್ಸ್ ದ್ವಿತೀಯ ಸ್ಥಾನ ಮತ್ತು ಪಾಟ್ನಾ ಪೈರೇಟ್ಸ್ ತೃತೀಯ ಸ್ಥಾನದಲ್ಲಿವೆ.
ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 83 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 31 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಗುಜರಾತ್ ಜಯಂಟ್ಸ್ ಮತ್ತು ಹರಿಯಾಣ ಸ್ಟೀಲರ್ಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ದಬಾಂಗ್ ಡೆಲ್ಲಿ vs ಯು ಮುಂಬಾ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..
ಪಂದ್ಯ 1: ಗುಜರಾತ್ ಜಯಂಟ್ಸ್ vs ಹರಿಯಾಣ ಸ್ಟೀಲರ್ಸ್
ಸದ್ಯ ನಡೆಯುತ್ತಿರುವ 8ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು ಉಳಿದ 3 ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿರುವ ಗುಜರಾತ್ ಜಯಂಟ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದು 6 ಪಂದ್ಯಗಳಲ್ಲಿ ಸೋತು ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 28 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಹನ್ನೊಂದನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 84ನೇ ಪಂದ್ಯವಾಗಿದ್ದು ಸಂಜೆ 7. 30ಕ್ಕೆ ಆರಂಭವಾಗಲಿದೆ. ಇನ್ನು ಹರಿಯಾಣ ಸ್ಟೀಲರ್ಸ್ ಮತ್ತು ಗುಜರಾತ್ ಜಯಂಟ್ಸ್ ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 8 ಮುಖಾಮುಖಿ ಪಂದ್ಯಗಳು ಜರುಗಿದ್ದು ಹರಿಯಾಣ ಸ್ಟೀಲರ್ಸ್ 5 ಪಂದ್ಯಗಳಲ್ಲಿ ಗೆದ್ದು ಮುನ್ನಡೆ ಸಾಧಿಸಿದ್ದರೆ, ಗುಜರಾತ್ ಜಯಂಟ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ ಹಾಗೂ ಉಳಿದೊಂದು ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿದೆ.
ಹರಿಯಾಣ ಸ್ಟೀಲರ್ಸ್ ಸಂಭಾವ್ಯ ಆಡುವ ಬಳಗ: ವಿಕಾಸ್ ಕಂಡೋಲಾ (ನಾಯಕ), ರೋಹಿತ್ ಗುಲಿಯಾ, ಮೀಟು ಶರ್ಮಾ, ಜೈದೀಪ್ ಕುಲದೀಪ್, ರವಿ ಕುಮಾರ್, ಸುರೇಂದ್ರ ನಾದ, ಮೋಹಿತ್ ನಂದಲ್
ಗುಜರಾತ್ ಜಯಂಟ್ಸ್ ಸಂಭಾವ್ಯ ಆಡುವ ಬಳಗ: ರಾಕೇಶ್ ಎಚ್, ಎಸ್ ಸುನಿಲ್ (ನಾಯಕ), ಪರ್ವೇಶ್ ಭೈನ್ವಾಲ್, ಪ್ರದೀಪ್ ಕುಮಾರ್, ರಾಕೇಶ್ ನರ್ವಾಲ್, ಅಂಕಿತ್, ಗಿರೀಶ್ ಎರ್ನಾಕ್
ಪಂದ್ಯ 2: ದಬಾಂಗ್ ಡೆಲ್ಲಿ vs ಯು ಮುಂಬಾ
ಸದ್ಯ ನಡೆಯುತ್ತಿರುವ 8ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು ಉಳಿದ 2 ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 48 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿರುವ ಯು ಮುಂಬಾ 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದು 3 ಪಂದ್ಯಗಳಲ್ಲಿ ಸೋತು ಉಳಿದ 5 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 41 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 85ನೇ ಪಂದ್ಯವಾಗಿದ್ದು ಸಂಜೆ 8. 30ಕ್ಕೆ ಆರಂಭವಾಗಲಿದೆ. ಇನ್ನು ಹರಿಯಾಣ ಸ್ಟೀಲರ್ಸ್ ಮತ್ತು ಗುಜರಾತ್ ಜಯಂಟ್ಸ್ ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 17 ಮುಖಾಮುಖಿ ಪಂದ್ಯಗಳು ಜರುಗಿದ್ದು ಯು ಮುಂಬಾ 12 ಪಂದ್ಯಗಳಲ್ಲಿ ಗೆದ್ದು ಮುನ್ನಡೆ ಸಾಧಿಸಿದ್ದರೆ, ದಬಾಂಗ್ ಡೆಲ್ಲಿ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ ಹಾಗೂ ಉಳಿದೊಂದು ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿದೆ.
ದಬಾಂಗ್ ಡೆಲ್ಲಿ ಸಂಭಾವ್ಯ ಆಡುವ ಬಳಗ: ವಿಜಯ್ ಮಲಿಕ್, ಅಶು, ಮಂಜೀತ್ ಚಿಲ್ಲರ್, ಜೀವ ಕುಮಾರ್, ಸಂದೀಪ್ ನರ್ವಾಲ್, ಕ್ರಿಶನ್ ಧುಲ್, ಜೋಗಿಂದರ್ ನರ್ವಾಲ್ (ನಾಯಕ)
ಯು ಮುಂಬಾ ಸಂಭಾವ್ಯ ಆಡುವ ಬಳಗ: ಅಭಿಷೇಕ್ ಸಿಂಗ್, ವಿ ಅಜಿತ್, ರಾಹುಲ್ ಸೇಠಪಾಲ್, ಹರೇಂದ್ರ, ಅಜಿಂಕ್ಯ ಕಪ್ರೆ, ರಿಂಕು, ಫಜೆಲ್ ಅತ್ರಾಚಲಿ (ನಾಯಕ)
ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications