For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಫೆಬ್ರವರಿ 9ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 8: Gujarat Giants vs Telugu Titans preview, head to head and probable playing 7

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಫೆಬ್ರವರಿ 8ರ ಮಂಗಳವಾರದವರೆಗೂ ಒಟ್ಟು 103 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಪಾಟ್ನಾ ಪೈರೇಟ್ಸ್ ಅಗ್ರಸ್ಥಾನದಲ್ಲಿದ್ದರೆ, ಹರಿಯಾಣ ಸ್ಟೀಲರ್ಸ್ ದ್ವಿತೀಯ ಸ್ಥಾನ ಮತ್ತು ದಬಾಂಗ್ ಡೆಲ್ಲಿ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 103 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಫೆಬ್ರವರಿ 9) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ತಮಿಳ್ ತಲೈವಾಸ್ ಮತ್ತು ಯುಪಿ ಯೋಧಾ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ತಮಿಳ್ ತಲೈವಾಸ್ vs ಯುಪಿ ಯೋಧಾ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 104ನೇ ಪಂದ್ಯದಲ್ಲಿ ಇಂದು ತಮಿಳ್ ತಲೈವಾಸ್ ಮತ್ತು ಯುಪಿ ಯೋಧಾ ತಂಡಗಳು ಸೆಣಸಾಟ ನಡೆಸಲಿದ್ದು, ಸಂಜೆ 7.30ಕ್ಕೆ ಈ ಪಂದ್ಯ ಆರಂಭವಾಗಲಿದೆ. ಇನ್ನು ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 17 ಪಂದ್ಯಗಳನ್ನಾಡಿರುವ ಯುಪಿ ಯೋಧಾ 6 ಪಂದ್ಯಗಳಲ್ಲಿ ಗೆದ್ದು, 8 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಂಡು 47 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಅತ್ತ 17 ಪಂದ್ಯಗಳನ್ನಾಡಿರುವ ತಮಿಳ್ ತಲೈವಾಸ್ 5 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳನ್ನು ಸೋತು, ಉಳಿದ 6 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 45 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಹೀಗೆ ಅಂಕಪಟ್ಟಿಯಲ್ಲಿ ಮಧ್ಯಮ ಸ್ಥಾನದಲ್ಲಿರುವ ಈ ಎರಡೂ ತಂಡಗಳು ಕೂಡ ಪ್ಲೇ ಆಫ್ ಪ್ರವೇಶಿಸಲು ಉಳಿದ ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿವೆ. ತಮಿಳ್ ತಲೈವಾಸ್ ತನ್ನ ಕೊನೆಯ 3 ಪಂದ್ಯಗಳ ಪೈಕಿ 1 ಪಂದ್ಯದಲ್ಲಿ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿದ್ದರೆ, ಮತ್ತೆರಡು ಪಂದ್ಯಗಳಲ್ಲಿ ಸೋತಿದೆ. ಅತ್ತ ಸತತ 4 ಪಂದ್ಯಗಳಲ್ಲಿ ಸೋತು ಮುಖಭಂಗಕ್ಕೊಳಗಾಗಿದ್ದ ಯುಪಿ ಯೋಧಾ ತನ್ನ ಕೊನೆಯ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ವಿರುದ್ಧ ಗೆಲುವು ಕಂಡಿದೆ. ಇತ್ತಂಡಗಳು ಕೂಡ ಇಂದು ನಡೆಯಲಿರುವ ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಇರಲೇಬೇಕಾದ ಅನಿವಾರ್ಯತೆಯಲ್ಲಿದ್ದು ಪಂದ್ಯ ರೋಚಕತೆಯಿಂದ ಕೂಡಿರಲಿದೆ.

ಯುಪಿ ಯೋಧಾ ಸಂಭಾವ್ಯ ಆಡುವ ಬಳಗ: ಪ್ರದೀಪ್ ನರ್ವಾಲ್, ಗುರುದೀಪ್, ಶುಭಂ ಕುಮಾರ್, ಶ್ರೀಕಾಂತ್ ಜಾಧವ್, ಸುರೇಂದರ್ ಗಿಲ್, ನಿತೇಶ್ ಕುಮಾರ್, ಸುಮಿತ್.

ತಮಿಳ್ ತಲೈವಾಸ್ ಸಂಭಾವ್ಯ ಆಡುವ ಬಳಗ: ಮಂಜೀತ್, ಸುರ್ಜಿತ್ ಸಿಂಗ್, ಮೋಹಿತ್, ಭವಾನಿ ರಜಪೂತ್, ಅಜಿಂಕ್ಯ ಪವಾರ್, ಸಾಗರ್, ಸಾಹಿಲ್ ಸಿಂಗ್.

ಪಂದ್ಯ 2: ತೆಲುಗು ಟೈಟಾನ್ಸ್ vs ಗುಜರಾತ್ ಜೈಂಟ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 105ನೇ ಪಂದ್ಯದಲ್ಲಿ ಇಂದು ತೆಲುಗು ಟೈಟಾನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಸೆಣಸಾಟ ನಡೆಸಲಿದ್ದು, ಸಂಜೆ 7.30ಕ್ಕೆ ಈ ಪಂದ್ಯ ಆರಂಭವಾಗಲಿದೆ. ಇನ್ನು ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 17 ಪಂದ್ಯಗಳನ್ನಾಡಿರುವ ಗುಜರಾತ್ ಜೈಂಟ್ಸ್ 6 ಪಂದ್ಯಗಳಲ್ಲಿ ಗೆದ್ದು, 8 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಂಡು 44 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಅತ್ತ 17 ಪಂದ್ಯಗಳನ್ನಾಡಿರುವ ತೆಲುಗು ಟೈಟಾನ್ಸ್ 1 ಪಂದ್ಯದಲ್ಲಿ ಗೆದ್ದು, 12 ಪಂದ್ಯಗಳನ್ನು ಸೋತು, ಉಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 26 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಅಂಕಪಟ್ಟಿಯಲ್ಲಿ ತೀರಾ ಕಳಪೆ ಸ್ಥಾನಗಳನ್ನು ಹೊಂದಿರುವ ಈ ಎರಡೂ ತಂಡಗಳು ಕೂಡ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಪ್ಲೇ ಆಫ್ ಪ್ರವೇಶಿಸುವುದು ಬಹುತೇಕ ಅಸಾಧ್ಯವೆನ್ನಬಹುದು. ಇನ್ನು ತನ್ನ ಕಳೆದ ಪಂದ್ಯವನ್ನು ತೆಲುಗು ಟೈಟಾನ್ಸ್ ಬೆಂಗಾಲ್ ವಾರಿಯರ್ಸ್ ವಿರುದ್ಧ ಡ್ರಾ ಮಾಡಿಕೊಂಡಿದ್ದರೆ ಗುಜರಾತ್ ಜೈಂಟ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೋಲನ್ನು ಅನುಭವಿಸಿತ್ತು.

ತೆಲುಗು ಟೈಟಾನ್ಸ್ ಸಂಭಾವ್ಯ ಆಡುವ ಬಳಗ: ರಜನೀಶ್, ಅಂಕಿತ್ ಬೇನಿವಾಲ್, ಆದರ್ಶ್ ಟಿ, ಸುರಿಂದರ್ ಸಿಂಗ್, ಆಕಾಶ್ ಚೌಧರಿ, ಸಂದೀಪ್ ಕಂಡೋಲಾ, ಎಸ್ ಅರುಣ್.

ಗುಜರಾತ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ: ಪ್ರದೀಪ್ ಕುಮಾರ್, ರಾಕೇಶ್ ನರ್ವಾಲ್, ಅಜಯ್ ಕುಮಾರ್, ಪ್ರವೇಶ್ ಭೈನ್ಸ್ವಾಲ್, ಸುನಿಲ್ ಕುಮಾರ್, ಹಾಡಿ ಶೋಷ್ಟೋರಕ್, ಗಿರೀಶ್ ಮಾರುತಿ ಎರ್ನಾಕ್.

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Wednesday, February 9, 2022, 17:07 [IST]
Other articles published on Feb 9, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+