For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಜನವರಿ 18ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 8, January 18: All Matches preview, predicted 7, head to head details and live streaming

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 17ರ ಸೋಮವಾರದವರೆಗೂ ಒಟ್ಟು 61 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಬೆಂಗಳೂರು ಬುಲ್ಸ್ ಅಗ್ರಸ್ಥಾನದಲ್ಲಿದ್ದರೆ, ಪಾಟ್ನಾ ಪೈರೇಟ್ಸ್ ದ್ವಿತೀಯ ಸ್ಥಾನ ಮತ್ತು ದಬಾಂಗ್ ಡೆಲ್ಲಿ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 61 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 18 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ಮತ್ತು ಪಾಟ್ನಾ ಪೈರೇಟ್ಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಗುಜರಾತ್ ಜಯಂಟ್ಸ್ ಮತ್ತು ಯು ಮುಂಬಾ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಪಾಟ್ನಾ ಪೈರೇಟ್ಸ್ vs ದಬಾಂಗ್ ಡೆಲ್ಲಿ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಪಾಟ್ನಾ ಪೈರೇಟ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ಉತ್ತಮ ಸ್ಥಾನಗಳನ್ನು ಹೊಂದುವುದರಲ್ಲಿ ಯಶಸ್ವಿಯಾಗಿವೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿರುವ ಪಾಟ್ನಾ ಪೈರೇಟ್ಸ್ 7 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 39 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ 10 ಪಂದ್ಯಗಳನ್ನಾಡಿರುವ ದಬಾಂಗ್ ಡೆಲ್ಲಿ 6 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 37 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ. ಇತ್ತಂಡಗಳ ನಡುವಿನ ಈ ಸೆಣಸಾಟದಲ್ಲಿ ಗೆಲ್ಲಲಿರುವ ತಂಡ ಅಗ್ರಸ್ಥಾನಕ್ಕೇರಲಿದೆ. ಇತ್ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 62ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 12 ಪಂದ್ಯಗಳು ನಡೆದಿದ್ದು ಪಾಟ್ನಾ ಪೈರೇಟ್ 7 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ದಬಾಂಗ್ ಡೆಲ್ಲಿ 4 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ದಬಾಂಗ್ ಡೆಲ್ಲಿ ಸಂಭಾವ್ಯ ಆಡುವ ಬಳಗ: ವಿಜಯ್ ಮಲಿಕ್ (ರೈಡರ್) ಅಶು ಮಲಿಕ್ (ರೈಡರ್) ಸುಶಾಂತ್ ಸೈಲ್ (ರೈಡರ್) ಮಂಜೀತ್ ಛಿಲ್ಲರ್ (ಎಡ ಕವರ್) ಜೀವ ಕುಮಾರ್ (ರೈಟ್ ಕವರ್) ವಿಕಾಶ್ ಡಿ (ಎಡ ಮೂಲೆ) ಸಂದೀಪ್ ನರ್ವಾಲ್ (ಬಲ ಮೂಲೆ)

ಪಟ್ನಾ ಪೈರೇಟ್ಸ್ ಸಂಭಾವ್ಯ ಆಡುವ ಬಳಗ: ಮೋನು ಗೋಯತ್ (ರೈಡರ್) ಪ್ರಶಾಂತ್ ಕುಮಾರ್ ರೈ (ರೈಡರ್) ಸಚಿನ್ ತನ್ವರ್ (ರೈಡರ್) ಸಜಿನ್ ಚಂದ್ರಶೇಖರ್ (ಎಡ ಮುಖಪುಟ) ನೀರಜ್ ಕುಮಾರ್ (ಬಲ ಮುಖಪುಟ) ಮೊಹಮ್ಮದ್ರೇಜಾ ಶಾದ್ಲೂಯಿ (ಎಡ ಮೂಲೆ) ಸುನಿಲ್ ನರ್ವಾಲ್ (ಬಲ ಮೂಲೆ)

ಪಂದ್ಯ 2: ಗುಜರಾತ್ ಜಯಂಟ್ಸ್ vs ಯು ಮುಂಬಾ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಯು ಮುಂಬಾ ಮತ್ತು ಗುಜರಾತ್ ಜಿಯಂಟ್ಸ್ ಅತ್ಯುನ್ನತ ಆರಂಭವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿಲ್ಲ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿರುವ ಯು ಮುಂಬಾ 3 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತು ಉಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 28 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 9 ಪಂದ್ಯಗಳನ್ನಾಡಿರುವ ಗುಜರಾತ್ ಜಯಂಟ್ಸ್ 2 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 20 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಹನ್ನೊಂದನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 63ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭವಾಗಲಿದೆ. ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 8 ಮುಖಾಮುಖಿ ಪಂದ್ಯಗಳು ನಡೆದಿದ್ದು ಗುಜರಾತ್ ಜಯಂಟ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿ ಮೇಲುಗೈ ಹೊಂದಿದ್ದರೆ, ಯು ಮುಂಬಾ 3 ಪಂದ್ಯಗಳಲ್ಲಿ ಗೆದ್ದಿದೆ.

ಗುಜರಾತ್ ಜಯಂಟ್ಸ್ ಸಂಭಾವ್ಯ ಆಡುವ ಬಳಗ: ರಾಕೇಶ್ ಸುಂಗ್ರೋಯಾ (ರೈಡರ್) ಮಹೇಂದ್ರ ಗಣೇಶ್ ರಜಪೂತ್ (ರೈಡರ್) ಪ್ರದೀಪ್ ಕುಮಾರ್ (ರೈಡರ್) ಪರ್ವೇಶ್ ಭೈನ್‌ವಾಲ್ (ಎಡ ಕವರ್) ಸುನಿಲ್ ಕುಮಾರ್ ಮಲಿಕ್ (ಬಲ ಕವರ್) ಹಾದಿ ಓಷ್ಟೋರಾಕ್ (ಎಡ ಮೂಲೆ) ಅಂಕಿತ್ ಶರ್ಮಾ (ಬಲ ಮೂಲೆ)

ಯು ಮುಂಬಾ ಸಂಭಾವ್ಯ ಆಡುವ ಬಳಗ: ಅಭಿಷೇಕ್ ಸಿಂಗ್ (ರೈಡರ್) ವಿ ಅಜಿತ್ ಕುಮಾರ್ (ರೈಡರ್) ರಾಹುಲ್ ಸೇಠಪಾಲ್ (ಆಲ್ ರೌಂಡರ್) ಹರೇಂದ್ರ ಕುಮಾರ್ (ಎಡ ಕವರ್) ಆಶಿಶ್ ಸಂಗ್ವಾನ್ (ರೈಟ್ ಕವರ್) ಫಜೆಲ್ ಅತ್ರಾಚಲಿ (ಎಡ ಮೂಲೆ) ರಿಂಕು ಶರ್ಮಾ (ಬಲ ಮೂಲೆ)

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Tuesday, January 18, 2022, 17:00 [IST]
Other articles published on Jan 18, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+