For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಜನವರಿ 19ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 8, January 19: All Matches preview, predicted 7, head to head details and live streaming

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 18ರ ಮಂಗಳವಾರದವರೆಗೂ ಒಟ್ಟು 63 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಟ್ನಾ ಪೈರೇಟ್ಸ್ ದ್ವಿತೀಯ ಸ್ಥಾನ ಮತ್ತು ಬೆಂಗಳೂರು ಬುಲ್ಸ್ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 63 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 19 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ಮತ್ತು ತೆಲುಗು ಟೈಟಾನ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಹರಿಯಾಣ ಸ್ಟೀಲರ್ಸ್ vs ಪುಣೇರಿ ಪಲ್ಟಾನ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಹರಿಯಾಣ ಸ್ಟೀಲರ್ಸ್ ಹಾಗೂ ಪುಣೇರಿ ಪಲ್ಟಾನ್ ತಂಡಗಳೆರಡೂ ಸಹ ಹೇಳಿಕೊಳ್ಳುವಂತಹ ಉತ್ತಮ ಆರಂಭವನ್ನು ಪಡೆದುಕೊಂಡಿಲ್ಲ. ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿರುವ ಹರಿಯಾಣ ಸ್ಟೀಲರ್ಸ್ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 5 ಪಂದ್ಯಗಳಲ್ಲಿ ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 24 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದರೆ, ಅತ್ತ ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋತಿರುವ ಪುಣೇರಿ ಪಲ್ಟಾನ್ 21 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಹನ್ನೊಂದನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ನಡೆಯಲಿರುವ ಇಂದಿನ ಪಂದ್ಯ ಈ ಬಾರಿಯ ಟೂರ್ನಿಯ 64ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇತ್ತಂಡಗಳ ನಡುವೆ ಒಟ್ಟು 8 ಮುಖಾಮುಖಿ ಪಂದ್ಯಗಳು ನಡೆದಿದ್ದು, ಪುಣೇರಿ ಪಲ್ಟಾನ್ 5 ಪಂದ್ಯಗಳಲ್ಲಿ ಗೆದ್ದು ಮೇಲುಗೈ ಸಾಧಿಸಿದ್ದರೆ, ಹರಿಯಾಣ ಸ್ಟೀಲರ್ಸ್ ಉಳಿದ 3 ಪಂದ್ಯಗಳಲ್ಲಿ ಗೆದ್ದಿದೆ.

ಪುಣೇರಿ ಪಲ್ಟಾನ್ ಸಂಭಾವ್ಯ ಆಡುವ ಬಳಗ: ಮೋಹಿತ್ ಗೋಯತ್ (ರೈಡರ್) ನಿತಿನ್ ತೋಮರ್ (ಆಲ್ ರೌಂಡರ್) ಅಸ್ಲಾಂ ಇನಾಮದಾರ್ (ಆಲ್ ರೌಂಡರ್) ಸಂಕೇತ್ ಸಾವಂತ್ (ಎಡ ಕವರ್) ಅಭಿನೇಶ್ ನಡರಾಜನ್ (ರೈಟ್ ಕವರ್) ವಿಶಾಲ್ ಭಾರದ್ವಾಜ್ (ಎಡ ಮೂಲೆ) ಬಲದೇವ್ ಸಿಂಗ್ (ಬಲ ಮೂಲೆ)

ಹರಿಯಾಣ ಸ್ಟೀಲರ್ಸ್ ಸಂಭಾವ್ಯ ಆಡುವ ಬಳಗ: ವಿಕಾಶ್ ಕಾಂಡೋಲಾ (ರೈಡರ್) ಮೀಟು ಶರ್ಮಾ (ರೈಡರ್) ಆಶಿಶ್ ನರ್ವಾಲ್ (ರೈಡರ್) ಜೈದೀಪ್ ದಹಿಯಾ (ಎಡ ಕವರ್)
ಮೋಹಿತ್ ನಂದಲ್ (ಬಲ ಕವರ್) ಸುರೇಂದರ್ ನಾಡಾ (ಎಡ ಮೂಲೆ) ರವಿ ಕುಮಾರ್ (ಬಲ ಮೂಲೆ)

ಪಂದ್ಯ 2: ಜೈಪುರ್ ಪಿಂಕ್ ಪ್ಯಾಂಥರ್ಸ್ vs ತೆಲುಗು ಟೈಟಾನ್ಸ್

ಪ್ರಸ್ತುತ ನಡೆಯುತ್ತಿರುವ ಎಂಟನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಸಾಮಾನ್ಯ ಹಂತದಲ್ಲಿದ್ದರೆ, ಸಾಲು ಸಾಲು ಸೋಲುಗಳನ್ನು ಅನುಭವಿಸಿರುವ ತೆಲುಗು ಟೈಟಾನ್ಸ್ ಹೀನಾಯ ಹಂತದಲ್ಲಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು ಹತ್ತು ಪಂದ್ಯಗಳನ್ನಾಡಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ 5 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿ, 4 ಪಂದ್ಯಗಳಲ್ಲಿ ಸೋತಿದ್ದು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 31 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದರೆ, ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು ಹತ್ತು ಪಂದ್ಯಗಳನ್ನಾಡಿ ಯಾವುದೇ ಪಂದ್ಯದಲ್ಲಿಯೂ ಕೂಡ ಗೆಲುವನ್ನು ಸಾಧಿಸದೇ 8 ಪಂದ್ಯಗಳಲ್ಲಿ ಸೋತು ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡಿರುವ ತೆಲುಗು ಟೈಟಾನ್ಸ್ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಟೂರ್ನಿಯ 65ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭವಾಗಲಿದೆ. ಇನ್ನು ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಇತ್ತಂಡಗಳ ನಡುವೆ 10 ಮುಖಾಮುಖಿ ಪಂದ್ಯಗಳು ನಡೆದಿದ್ದು ಜೈಪುರ್ ಪಿಂಕ್ ಪ್ಯಾಂಥರ್ಸ್ 5 ಪಂದ್ಯಗಳಲ್ಲಿ ಗೆದ್ದಿದ್ದರೆ, ತೆಲುಗು ಟೈಟಾನ್ಸ್ 4 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಜೈಪುರ್ ಪಿಂಕ್ ಪ್ಯಾಂಥರ್ಸ್ ಸಂಭಾವ್ಯ ಆಡುವ ಬಳಗ: ದೀಪಕ್ ನಿವಾಸ್ ಹೂಡಾ (ನಾಯಕ) (ಆಲ್ ರೌಂಡರ್) ಅರ್ಜುನ್ ದೇಶ್ವಾಲ್ (ರೈಡರ್) ಅಮಿತ್ ನಗರ್ (ರೈಡರ್) ಸಾಹುಲ್ ಕುಮಾರ್ (ಡಿಫೆಂಡರ್) ಸಂದೀಪ್ ಧುಲ್ (ಡಿಫೆಂಡರ್) ನಿತಿನ್ ರಾವಲ್ (ಆಲ್ ರೌಂಡರ್) ಅಮಿತ್ (ಡಿಫೆಂಡರ್)

ತೆಲುಗು ಟೈಟಾನ್ಸ್ ಸಂಭಾವ್ಯ ಆಡುವ ಬಳಗ: ರೋಹಿತ್ ಕುಮಾರ್ (ನಾಯಕ) (ರೈಡರ್) ರಜನೀಶ್ ದಲಾಲ್ (ರೈಡರ್) ಅಂಕಿತ್ ಬೇನಿವಾಲ್ (ರೈಡರ್) ಸಿ ಅರುಣ್ (ಎಡ ಕವರ್) ಸುರಿಂದರ್ ಸಿಂಗ್ (ಬಲ ಕವರ್) ಸಂದೀಪ್ ಕಾಂಡೋಲಾ (ಎಡ ಮೂಲೆ) ರುತುರಾಜ್ ಕೊರವಿ (ಬಲ ಮೂಲೆ)

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Wednesday, January 19, 2022, 16:53 [IST]
Other articles published on Jan 19, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+