ಪ್ರೋ ಕಬಡ್ಡಿ ಲೀಗ್ 8: ಜನವರಿ 21ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 20ರ ಗುರುವಾರದವರೆಗೂ ಒಟ್ಟು 67 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಬೆಂಗಳೂರು ಬುಲ್ಸ್ ದ್ವಿತೀಯ ಸ್ಥಾನ ಮತ್ತು ಪಾಟ್ನಾ ಪೈರೇಟ್ಸ್ ತೃತೀಯ ಸ್ಥಾನದಲ್ಲಿವೆ.
ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 67 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 21 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ಮತ್ತು ಯುಪಿ ಯೋಧಾ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..
ಪಂದ್ಯ 1: ದಬಾಂಗ್ ಡೆಲ್ಲಿ vs ಹರಿಯಾಣ ಸ್ಟೀಲರ್ಸ್
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ದಬಾಂಗ್ ಡೆಲ್ಲಿ 7 ಪಂದ್ಯಗಳಲ್ಲಿ ಜಯ ಗಳಿಸಿ, 2 ಪಂದ್ಯಗಳಲ್ಲಿ ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 42 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿರುವ ಹರ್ಯಾಣ ಸ್ಟೀಲರ್ಸ್ 4 ಪಂದ್ಯಗಳಲ್ಲಿ ಜಯ ಗಳಿಸಿ, 5 ಪಂದ್ಯಗಳಲ್ಲಿ ಸೋತು, ಉಳಿದ 2 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 29 ಅಂಕಗಳನ್ನು ಹೊಂದಿ ಅಂಕ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 68ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇತ್ತಂಡಗಳ ನಡುವೆ ಇದುವರೆಗೂ ಒಟ್ಟು 9 ಮುಖಾಮುಖಿ ಪಂದ್ಯಗಳು ನಡೆದಿದ್ದು ಹರಿಯಾಣ ಸ್ಟೀಲರ್ಸ್ 6 ಪಂದ್ಯಗಳಲ್ಲಿ ಜಯ ಗಳಿಸಿ ಮೇಲುಗೈ ಸಾಧಿಸಿದ್ದರೆ, ದಬಾಂಗ್ ಡೆಲ್ಲಿ 3 ಪಂದ್ಯಗಳಲ್ಲಿ ಗೆದ್ದಿದೆ.
ದಬಾಂಗ್ ಡೆಲ್ಲಿ ಸಂಭಾವ್ಯ ಆಡುವ ಬಳಗ: ನವೀನ್ ಗೋಯತ್, ವಿಜಯ್ ಮಲಿಕ್, ಅಶು, ಮಂಜೀತ್ ಚಿಲ್ಲರ್ (ನಾಯಕ), ವಿಕಾಶ್ ಡಿ, ಸಂದೀಪ್ ನರ್ವಾಲ್ ಮತ್ತು ಜೋಗಿಂದರ್ ನರ್ವಾಲ್
ಹರಿಯಾಣ ಸ್ಟೀಲರ್ಸ್ ಸಂಭಾವ್ಯ ಆಡುವ ಬಳಗ: ವಿಕಾಸ್ ಕಂಡೋಲಾ (ನಾಯಕ), ರೋಹಿತ್ ಗುಲಿಯಾ, ಮೀಟು ಶರ್ಮಾ, ಜೈದೀಪ್ ಕುಲದೀಪ್, ರವಿ ಕುಮಾರ್, ಸುರೇಂದ್ರ ನಾದ ಮತ್ತು ಮೋಹಿತ್ ನಂದಲ್
ಪಂದ್ಯ 2: ಬೆಂಗಾಲ್ ವಾರಿಯರ್ಸ್ vs ಯುಪಿ ಯೋಧಾ
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿರುವ ಬೆಂಗಾಲ್ ವಾರಿಯರ್ಸ್ 6 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 35 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳಲ್ಲಿ ಕಣಕ್ಕಿಳಿದು 4 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 33 ಅಂಕಗಳನ್ನು ಪಡೆದಿರುವ ಯುಪಿ ಯೋಧಾ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಈ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 69ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ನಡೆಯಲಿದೆ. ಇನ್ನು ಬೆಂಗಾಲ್ ವಾರಿಯರ್ಸ್ ಮತ್ತು ಯುಪಿ ಯೋಧಾ ತಂಡಗಳ ನಡುವೆ ಪ್ರೋ ಕಬಡ್ಡಿ ಲೀಗ್ ಇತಿಹಾಸದಲ್ಲಿ ಒಟ್ಟು 9 ಮುಖಾಮುಖಿ ಪಂದ್ಯಗಳು ನಡೆದಿದ್ದು, ಯುಪಿ ಯೋಧಾ 3 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಬೆಂಗಾಲ್ ವಾರಿಯರ್ಸ್ 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದ 3 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.
ಬೆಂಗಾಲ್ ವಾರಿಯರ್ಸ್ ಸಂಭಾವ್ಯ ಆಡುವ ಬಳಗ: ಮಣಿಂದರ್ ಸಿಂಗ್, ಸುಕೇಶ್ ಹೆಗ್ಡೆ, ಮೊಹಮ್ಮದ್ ನಬಿಬಕ್ಷ್, ದರ್ಶನ್, ಅಮಿತ್ ನಿರ್ವಾಲ್, ರಾನ್ ಸಿಂಗ್ ಮತ್ತು ಅಬೋಜರ್ ಮಿಘಾನಿ
ಯುಪಿ ಯೋಧಾ ಸಂಭಾವ್ಯ ಆಡುವ ಬಳಗ: ಪರ್ದೀಪ್ ನರ್ವಾಲ್, ಸುರೇಂದರ್ ಗಿಲ್, ಶ್ರೀಕಾಂತ್ ಜಾಧವ್, ನಿತೇಶ್ ಕುಮಾರ್ (ನಾಯಕ) ಶುಭಂ ಕುಮಾರ್, ಅಶು ಸಿಂಗ್ ಮತ್ತು ಸುಮಿತ್
ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications