For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಜನವರಿ 24ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 8, January 24: All Matches preview, predicted 7, head to head details and live streaming

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 23ರ ಭಾನುವಾರದವರೆಗೂ ಒಟ್ಟು 74 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಬೆಂಗಳೂರು ಬುಲ್ಸ್ ಅಗ್ರಸ್ಥಾನದಲ್ಲಿದ್ದರೆ, ದಬಾಂಗ್ ಡೆಲ್ಲಿ ದ್ವಿತೀಯ ಸ್ಥಾನ ಮತ್ತು ಪಾಟ್ನಾ ಪೈರೇಟ್ಸ್ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 74 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಜನವರಿ 24 ) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ಮತ್ತು ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಪುಣೇರಿ ಪಲ್ಟನ್ ಮತ್ತು ದಬಾಂಗ್ ಡೆಲ್ಲಿ ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಬೆಂಗಾಲ್ ವಾರಿಯರ್ಸ್ vs ಜೈಪುರ್ ಪಿಂಕ್ ಪ್ಯಾಂಥರ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿರುವ ಬೆಂಗಾಲ್ ವಾರಿಯರ್ಸ್ 6 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 36 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಅತ್ತ 12 ಪಂದ್ಯಗಳನ್ನಾಡಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ 5 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 35 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ನಡೆಯಲಿರುವ ಇಂದಿನ ಪಂದ್ಯ ಟೂರ್ನಿಯ 75ನೇಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನು ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇತ್ತಂಡಗಳ ನಡುವೆ ಇದುವರೆಗೂ 13 ಮುಖಾಮುಖಿ ಪಂದ್ಯಗಳು ನಡೆದಿದ್ದು, ಬೆಂಗಾಲ್ ವಾರಿಯರ್ಸ್ 9 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಜೈಪುರ್ ಪಿಂಕ್ ಪ್ಯಾಂಥರ್ಸ್ 4 ಪಂದ್ಯಗಳಲ್ಲಿ ಗೆದ್ದಿದೆ.

ಬೆಂಗಾಲ್ ವಾರಿಯರ್ಸ್ ಸಂಭಾವ್ಯ ಆಡುವ ಬಳಗ: ಮಣಿಂದರ್ ಸಿಂಗ್ (ನಾಯಕ), ಸುಕೇಶ್ ಹೆಗ್ಡೆ, ಮೊಹಮ್ಮದ್ ನಬಿಬಕ್ಷ್, ವಿಜಿನ್ ತಂಗದುರೈ, ದರ್ಶನ್ ಜೆ, ರಾನ್ ಸಿಂಗ್, ಅಬೋಜರ್ ಮಿಘಾನಿ

ಜೈಪುರ್ ಪಿಂಕ್ ಪ್ಯಾಂಥರ್ಸ್ ಸಂಭಾವ್ಯ ಆಡುವ ಬಳಗ: ದೀಪಕ್ ನಿವಾಸ್ ಹೂಡಾ, ಅರ್ಜುನ್ ದೇಶ್ವಾಲ್, ಅಮಿತ್ ನಗರ್, ಸಾಹುಲ್ ಕುಮಾರ್, ಸಂದೀಪ್ ಧುಲ್ (ನಾಯಕ), ನಿತಿನ್ ರಾವಲ್, ಅಮಿತ್

ಪಂದ್ಯ 2: ಪುಣೇರಿ ಪಲ್ಟನ್ ಮತ್ತು ದಬಾಂಗ್ ಡೆಲ್ಲಿ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿರುವ ದಬಾಂಗ್ ಡೆಲ್ಲಿ 7 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 3 ಪಂದ್ಯಗಳಲ್ಲಿ ಸೋತು ಹಾಗೂ ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡು 43 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದರೆ, ಅತ್ತ 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, 7 ಪಂದ್ಯಗಳಲ್ಲಿ ಸೋತು 27 ಅಂಕಗಳೊಂದಿಗೆ ಪುಣೇರಿ ಪಲ್ಟನ್ ಅಂಕಪಟ್ಟಿಯಲ್ಲಿ ಹನ್ನೊಂದನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯ 76ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭವಾಗಲಿದೆ. ಇನ್ನು ಇತ್ತಂಡಗಳು ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 17 ಬಾರಿ ಮುಖಾಮುಖಿಯಾಗಿದ್ದು ಪುಣೇರಿ ಪಲ್ಟನ್ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ದಬಾಂಗ್ ಡೆಲ್ಲಿ ಕೂಡ 8 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಪುಣೇರಿ ಪಲ್ಟನ್ ಸಂಭಾವ್ಯ ಆಡುವ ಬಳಗ: ಅಸ್ಲಂ ಇನಾಮದಾರ್, ಮೋಹಿತ್ ಗೋಯತ್, ನಿತಿನ್ ತೋಮರ್ (ನಾಯಕ), ಸಂಕೇತ್ ಸಾವಂತ್, ಅಭಿನೇಶ್ ನಾಡರಾಜನ್, ಸೋಂಬಿರ್, ವಿಶಾಲ್ ಭಾರದ್ವಾಜ್

ದಬಾಂಗ್ ಡೆಲ್ಲಿ ಸಂಭಾವ್ಯ ಆಡುವ ಬಳಗ: ನವೀನ್ ಗೋಯತ್, ವಿಜಯ್ ಮಲಿಕ್, ಅಶು, ಮಂಜೀತ್ ಚಿಲ್ಲರ್ (ನಾಯಕ), ವಿಕಾಶ್ ಡಿ, ಸಂದೀಪ್ ನರ್ವಾಲ್, ಜೋಗಿಂದರ್ ನರ್ವಾಲ್

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Monday, January 24, 2022, 16:49 [IST]
Other articles published on Jan 24, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+