For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಫೆಬ್ರವರಿ 19ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 8: Patna Pirates vs Haryana Steelers preview, head to head and probable playing 7

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಫೆಬ್ರವರಿ 18ರ ಶುಕ್ರವಾರದವರೆಗೂ ಒಟ್ಟು 129 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಪಾಟ್ನಾ ಪೈರೇಟ್ಸ್ ಅಗ್ರಸ್ಥಾನದಲ್ಲಿದ್ದರೆ, ದಬಾಂಗ್ ಡೆಲ್ಲಿ ದ್ವಿತೀಯ ಸ್ಥಾನ ಮತ್ತು ಯುಪಿ ಯೋಧಾ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 129 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಫೆಬ್ರವರಿ 19) ಒಟ್ಟು 3 ಪಂದ್ಯಗಳು ನಡೆಯಲಿವೆ. ಈ 3 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಪುಣೇರಿ ಪಲ್ಟನ್ ಮತ್ತು ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಯು ಮುಂಬಾ ತಂಡಗಳು ಸೆಣಸಾಟ ನಡೆಸಲಿವೆ ಮತ್ತು ತೃತೀಯ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಮತ್ತು ಪಾಟ್ನಾ ಪೈರೇಟ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 3 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಪುಣೇರಿ ಪಲ್ಟನ್ vs ಜೈಪುರ್ ಪಿಂಕ್ ಪ್ಯಾಂಥರ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ಪುಣೇರಿ ಪಲ್ಟನ್ 11 ಪಂದ್ಯಗಳಲ್ಲಿ ಗೆದ್ದು, 9 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 61 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ 10 ಪಂದ್ಯಗಳಲ್ಲಿ ಜಯ ಸಾಧಿಸಿ, 9 ಪಂದ್ಯಗಳಲ್ಲಿ ಸೋತು, ಉಳಿದ 2 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 62 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 130ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ. ಹೀಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಬೇಕೆಂದರೆ ಇಂದು ನಡೆಯಲಿರುವ ತನ್ನ ಅಂತಿಮ ಪಂದ್ಯದಲ್ಲಿ ಜಯ ಸಾಧಿಸಲೇಬೇಕಾದ ಅನಿವಾರ್ಯತೆಯಿದೆ.

ಪುಣೇರಿ ಪಲ್ಟಾನ್ ಸಂಭಾವ್ಯ ಆಡುವ ಬಳಗ: ಅಸ್ಲಾಂ ಇನಾಮದಾರ್, ಮೋಹಿತ್ ಗೋಯತ್, ಅಭಿನೇಶ್ ನಾಡರಾಜನ್, ವಿಶಾಲ್ ಭಾರದ್ವಾಜ್, ನಿತಿನ್ ತೋಮರ್, ಸೋಂಬಿರ್, ಸಂಕೇತ್ ಸಾವಂತ್.

ಜೈಪುರ್ ಪಿಂಕ್ ಪ್ಯಾಂಥರ್ಸ್ ಸಂಭಾವ್ಯ ಆಡುವ ಬಳಗ: ಅರ್ಜುನ್ ದೇಶ್ವಾಲ್, ದೀಪಕ್ ನಿವಾಸ ಹೂಡಾ, ಸಚಿನ್ ನರ್ವಾಲ್, ದೀಪಕ್ ಸಿಂಗ್, ವಿಶಾಲ್, ಸಾಹುಲ್ ಕುಮಾರ್, ಸಂದೀಪ್ ಧುಲ್ (ನಾಯಕ)

ಪಂದ್ಯ 2: ಗುಜರಾತ್ ಜೈಂಟ್ಸ್ vs ಯು ಮುಂಬಾ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ಗುಜರಾತ್ ಜೈಂಟ್ಸ್ 9 ಪಂದ್ಯಗಳಲ್ಲಿ ಗೆದ್ದು, 8 ಪಂದ್ಯಗಳಲ್ಲಿ ಸೋತು, ಉಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 62 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೋ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ಯು ಮುಂಬಾ 7 ಪಂದ್ಯಗಳಲ್ಲಿ ಜಯ ಸಾಧಿಸಿ, 9 ಪಂದ್ಯಗಳಲ್ಲಿ ಸೋತು, ಉಳಿದ 5 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 54 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 131ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭವಾಗಲಿದೆ. ಹೀಗೆ ಇತ್ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಎರಡೂ ತಂಡಗಳಿಗೂ ಕೂಡ ಲೀಗ್ ಹಂತದ ಅಂತಿಮ ಪಂದ್ಯವಾಗಿದ್ದು, ಯು ಮುಂಬಾ ಈ ಪಂದ್ಯದಲ್ಲಿ ಗೆದ್ದರೂ ಸಹ ಪ್ಲೇಆಫ್ ಪ್ರವೇಶಿಸುವುದಿಲ್ಲ. ಆದರೆ, ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಸಾಧ್ಯತೆಗಳಿವೆ.

ಗುಜರಾತ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ: ಅಜಯ್ ಕುಮಾರ್, ಮಹೇಂದ್ರ ಗಣೇಶ್ ರಜಪೂತ್, ಪ್ರವೇಶ್ ಭೈನ್ಸ್ವಾಲ್, ಗಿರೀಶ್ ಮಾರುತಿ ಎರ್ನಾಕ್, ಸುನಿಲ್ ಕುಮಾರ್, ಹಾಡಿ ಶೋಷ್ಟೋರಾಕ್, ರಾಕೇಶ್ ಹಸ್

ಯು ಮುಂಬಾ ಸಂಭಾವ್ಯ ಆಡುವ ಬಳಗ: ಅಭಿಷೇಕ್ ಸಿಂಗ್, ವಿ. ಅಜಿತ್ ಕುಮಾರ್, ಹರೇಂದ್ರ ಕುಮಾರ್, ಫಜಲ್ ಅತ್ರಾಚಲಿ, ರಿಂಕು ಹಕ್, ಅಜಿಂಕ್ಯ ಕಡೇ, ರಾಹುಲ್ ಸೇಠಪಾಲ್

ಪಂದ್ಯ 3: ಹರಿಯಾಣ ಸ್ಟೀಲರ್ಸ್ vs ಪಾಟ್ನಾ ಪೈರೇಟ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ಹರಿಯಾಣ ಸ್ಟೀಲರ್ಸ್ 10 ಪಂದ್ಯಗಳಲ್ಲಿ ಗೆದ್ದು, 8 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 63 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೋ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ಪಾಟ್ನಾ ಪೈರೇಟ್ಸ್ 15 ಪಂದ್ಯಗಳಲ್ಲಿ ಜಯ ಸಾಧಿಸಿ, 5 ಪಂದ್ಯಗಳಲ್ಲಿ ಸೋತು, ಉಳಿದ 1 ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 81 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 1ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 132ನೇ ಪಂದ್ಯವಾಗಿದ್ದು ರಾತ್ರಿ 9.30ಕ್ಕೆ ಆರಂಭವಾಗಲಿದೆ. ಇನ್ನು ಹೆಚ್ಚಿನ ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿರುವ ಪಾಟ್ನಾ ಪೈರೇಟ್ಸ್ ತನ್ನ ಅಂತಿಮ ಪಂದ್ಯದಲ್ಲಿ ಇಂದು ಸೋತರೂ ಸಹ ಪ್ಲೇ ಆಫ್ ಸುತ್ತಿಗೆ ಲಗ್ಗೆ ಇಡಲಿದೆ. ಆದರೆ, ಐದನೇ ಸ್ಥಾನದಲ್ಲಿರುವ ಹರಿಯಾಣ ಸ್ಟೀಲರ್ಸ್ ಪ್ಲೇ ಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಬೇಕೆಂದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕಾದ ಅನಿವಾರ್ಯತೆಯಲ್ಲಿದೆ.

ಪಾಟ್ನಾ ಪೈರೇಟ್ಸ್ ಸಂಭಾವ್ಯ ಆಡುವ ಬಳಗ: ಪ್ರಶಾಂತ್ ಕುಮಾರ್ ರೈ (ನಾಯಕ), ಸಚಿನ್ ತನ್ವರ್, ಮೋನು ಗೋಯತ್, ನೀರಜ್, ಸಜಿನ್ ಸಿ, ಮೊಹಮ್ಮದ್ರೇಜಾ ಶಾದ್ಲೂಯಿ ಮತ್ತು ಸುನಿಲ್

ಹರಿಯಾಣ ಸ್ಟೀಲರ್ಸ್: ವಿಕಾಸ್ ಕಂಡೋಲ (ನಾಯಕ), ಮೋಹಿತ್, ಜೈದೀಪ್, ಆಶಿಶ್, ಮೀಟು, ವಿಜಯ್ ಕುಮಾರ್ ಮತ್ತು ಸುರೇಂದರ್ ನಾಡಾ

ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Saturday, February 19, 2022, 14:51 [IST]
Other articles published on Feb 19, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+