For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಪಾಟ್ನಾ ಪೈರೇಟ್ಸ್ vs ತಮಿಳ್ ತಲೈವಾಸ್ ಮುಖಾಮುಖಿಯಲ್ಲಿ ಬಲಿಷ್ಠ ತಂಡ ಯಾವುದು?

PKL 8: Patna Pirates vs Tamil Thalaivas preview, head to head and probable playing 7

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 27ರ ಗುರುವಾರದವರೆಗೂ ಒಟ್ಟು 79 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಬೆಂಗಳೂರು ಬುಲ್ಸ್ ಅಗ್ರಸ್ಥಾನದಲ್ಲಿದ್ದರೆ, ದಬಾಂಗ್ ಡೆಲ್ಲಿ ದ್ವಿತೀಯ ಸ್ಥಾನ ಮತ್ತು ಹರಿಯಾಣ ಸ್ಟೀಲರ್ಸ್ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 79 ಪಂದ್ಯಗಳು ಈಗಾಗಲೇ ಮುಗಿದಿದ್ದು ಇಂದು ( ಜನವರಿ 28 ) ಪಾಟ್ನಾ ಪೈರೇಟ್ಸ್ ಮತ್ತು ತಮಿಳ್ ತಲೈವಾಸ್ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಯ ಪ್ರಕಾರ ಇಂದು 2 ಪಂದ್ಯಗಳು ನಡೆಯಬೇಕಿತ್ತು ಆದರೆ ಟೂರ್ನಿ ಮಧ್ಯದಲ್ಲಿ ಕೊರೋನಾವೈರಸ್ ಕಾಣಿಸಿಕೊಂಡ ಕಾರಣದಿಂದಾಗಿ ದಿನಕ್ಕೆ ಕೇವಲ ಒಂದು ಪಂದ್ಯವನ್ನು ಮಾತ್ರ ನಡೆಸಲು ಆಯೋಜಕರು ನಿರ್ಧರಿಸಿದ್ದಾರೆ.

ಪಾಟ್ನಾ ಪೈರೇಟ್ಸ್ vs ತಮಿಳ್ ತಲೈವಾಸ್ ತಂಡಗಳ ನಡುವಿನ ಪಂದ್ಯದ ಮಾಹಿತಿ, ಇತ್ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದವರು ಯಾರು ಎಂಬುದರ ಮಾಹಿತಿ, ಈ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಇತ್ತಂಡಗಳ ಸಂಭಾವ್ಯ ತಂಡಗಳು ಹಾಗೂ ನೇರ ಪ್ರಸಾರದ ಮಾಹಿತಿಗಳ ವಿವರ ಈ ಕೆಳಕಂಡಂತಿದೆ..

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಪಾಟ್ನಾ ಪೈರೇಟ್ಸ್ ತಂಡ ಇಲ್ಲಿಯವರೆಗೂ ಒಟ್ಟು 11 ಪಂದ್ಯಗಳನ್ನಾಡಿದ್ದು 7 ಪಂದ್ಯಗಳಲ್ಲಿ ಜಯ ಸಾಧಿಸಿ, 3 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 40 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿವರೆಗೂ ಒಟ್ಟು 12 ಪಂದ್ಯಗಳನ್ನಾಡಿರುವ ತಮಿಳ್ ತಲೈವಾಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿ, 3 ಪಂದ್ಯಗಳಲ್ಲಿ ಸೋತು, ಉಳಿದ 6 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 34 ಅಂಕಗಳನ್ನು ಪಡೆದುಕೊಂಡು ಅಂಕ ಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಅಂಕಪಟ್ಟಿಯಲ್ಲಿ ತಮಿಳ್ ತಲೈವಾಸ್ ತಂಡಕ್ಕಿಂತ ಉತ್ತಮ ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ ತಂಡ ಇತ್ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳಲ್ಲಿಯೂ ಕೂಡ ಉನ್ನತ ಸ್ಥಾನದಲ್ಲಿದೆ. ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಪಾಟ್ನಾ ಪೈರೇಟ್ಸ್ ಮತ್ತು ತಮಿಳ್ ತಲೈವಾಸ್ ತಂಡಗಳ ನಡುವೆ ಒಟ್ಟು 9 ಮುಖಾಮುಖಿ ಪಂದ್ಯಗಳು ನಡೆದಿದ್ದು ಪಾಟ್ನಾ ಪೈರೇಟ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ತಮಿಳ್ ತಲೈವಾಸ್ 2 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೆರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 80ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

ಪಾಟ್ನಾ ಪೈರೇಟ್ಸ್ ಸಂಭಾವ್ಯ ಆಡುವ ಬಳಗ: ಪ್ರಶಾಂತ್ ಕುಮಾರ್ ರೈ (ನಾಯಕ), ಸಚಿನ್ ತನ್ವರ್, ಮೋನು ಗೋಯತ್, ನೀರಜ್, ಸಜಿನ್, ಸಿ ಮೊಹಮ್ಮದ್ರೇಜಾ ಶಾದ್ಲೂಯಿ ಮತ್ತು ಸುನಿಲ್

ತಮಿಳ್ ತಲೈವಾಸ್ ಸಂಭಾವ್ಯ ಆಡುವ ಬಳಗ: ಮಂಜೀತ್, ಸುರ್ಜೀತ್ (ನಾಯಕ), ಮೋಹಿತ್, ಭವಾನಿ ರಜಪೂತ್, ಅತುಲ್, ಎಂಎಸ್ ಸಾಗರ್ ಮತ್ತು ಸಾಹಿಲ್ ಸಿಂಗ್

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Friday, January 28, 2022, 22:55 [IST]
Other articles published on Jan 28, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+