For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಫೆಬ್ರವರಿ 18ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 8: Puneri Paltan vs Bengal Warriors preview, head to head and probable playing 7

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಫೆಬ್ರವರಿ 17ರ ಗುರುವಾರದವರೆಗೂ ಒಟ್ಟು 126 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಪಾಟ್ನಾ ಪೈರೇಟ್ಸ್ ಅಗ್ರಸ್ಥಾನದಲ್ಲಿದ್ದರೆ, ದಬಾಂಗ್ ಡೆಲ್ಲಿ ದ್ವಿತೀಯ ಸ್ಥಾನ ಮತ್ತು ಯುಪಿ ಯೋಧಾ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 126 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಫೆಬ್ರವರಿ 18) ಒಟ್ಟು 3 ಪಂದ್ಯಗಳು ನಡೆಯಲಿವೆ. ಈ 3 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಪುಣೇರಿ ಪಲ್ಟನ್ ಮತ್ತು ಬೆಂಗಾಲ್ ವಾರಿಯರ್ಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ಸೆಣಸಾಟ ನಡೆಸಲಿವೆ ಮತ್ತು ತೃತೀಯ ಪಂದ್ಯದಲ್ಲಿ ತಮಿಳ್ ತಲೈವಾಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 3 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಪುಣೇರಿ ಪಲ್ಟನ್ vs ಬೆಂಗಾಲ್ ವಾರಿಯರ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 20 ಪಂದ್ಯಗಳನ್ನಾಡಿರುವ ಪುಣೇರಿ ಪಲ್ಟನ್ 11 ಪಂದ್ಯಗಳಲ್ಲಿ ಗೆದ್ದು, 8 ಪಂದ್ಯಗಳಲ್ಲಿ ಸೋತು, ಉಳಿದೊಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 60 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ಹಾಲಿ ಚಾಂಪಿಯನ್ಸ್ ಬೆಂಗಾಲ್ ವಾರಿಯರ್ಸ್ 8 ಪಂದ್ಯಗಳಲ್ಲಿ ಜಯ ಸಾಧಿಸಿ, 10 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 52 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 127ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ.

ಪುಣೇರಿ ಪಲ್ಟಾನ್ ಸಂಭಾವ್ಯ ಆಡುವ ಬಳಗ: ಅಸ್ಲಾಂ ಇನಾಮದಾರ್, ಮೋಹಿತ್ ಗೋಯತ್, ಅಭಿನೇಶ್ ನಾಡರಾಜನ್, ವಿಶಾಲ್ ಭಾರದ್ವಾಜ್, ನಿತಿನ್ ತೋಮರ್, ಸೋಂಬಿರ್, ಸಂಕೇತ್ ಸಾವಂತ್.

ಬೆಂಗಾಲ್ ವಾರಿಯರ್ಸ್ ಸಂಭಾವ್ಯ ಆಡುವ ಬಳಗ: ಮಣಿಂದರ್ ಸಿಂಗ್, ಮೊಹಮ್ಮದ್ ನಬಿಬಕ್ಷ್, ಅಬೋಜರ್ ಮಿಘಾನಿ, ರಾನ್ ಸಿಂಗ್, ರೋಹಿತ್, ಅಮಿತ್ ನಿರ್ವಾಲ್, ತಪಸ್ ಪಾಲ್

ಪಂದ್ಯ 2: ತೆಲುಗು ಟೈಟಾನ್ಸ್ vs ದಬಾಂಗ್ ಡೆಲ್ಲಿ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ದಬಾಂಗ್ ಡೆಲ್ಲಿ 11 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು, ಉಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 70 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ತೆಲುಗು ಟೈಟಾನ್ಸ್ 1 ಪಂದ್ಯದಲ್ಲಿ ಜಯ ಸಾಧಿಸಿ, 16 ಪಂದ್ಯಗಳಲ್ಲಿ ಸೋತು, ಉಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 27 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 128ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭವಾಗಲಿದೆ. ಹೀಗೆ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ದಬಾಂಗ್ ಡೆಲ್ಲಿ ಪ್ಲೇ ಆಫ್ ಪ್ರವೇಶಿಸುವ ಅವಕಾಶವನ್ನು ಮತ್ತಷ್ಟು ಗಟ್ಟಿಪಡಿಸಿಕೊಳ್ಳಬೇಕೆಂದರೆ ಈ ಪಂದ್ಯದಲ್ಲಿ ಗೆಲುವು ಸಾಧಿಸಬೇಕಿದೆ. ಅತ್ತ ಈ ಬಾರಿ ತೀರಾ ಕಳಪೆ ಮಟ್ಟದ ಪ್ರದರ್ಶನ ನೀಡಿ ದೊಡ್ಡ ಸೋಲನ್ನು ಕಂಡಿರುವ ತೆಲುಗು ಟೈಟಾನ್ಸ್ ಈಗಾಗಲೇ ಪ್ಲೇ ಆಫ್ ಪ್ರವೇಶಿಸುವ ಅವಕಾಶವನ್ನು ಕಳೆದುಕೊಂಡಿದೆ.

ದಬಾಂಗ್ ಡೆಲ್ಲಿ ಸಂಭಾವ್ಯ ಆಡುವ ಬಳಗ: ನವೀನ್ ಕುಮಾರ್, ಸಂದೀಪ್ ನರ್ವಾಲ್, ನೀರಜ್ ನರ್ವಾಲ್, ಮಂಜೀತ್ ಚಿಲ್ಲರ್, ಜೀವ ಕುಮಾರ್, ಕ್ರಿಶನ್ ಧುಲ್, ವಿಜಯ್.

ತೆಲುಗು ಟೈಟಾನ್ಸ್ ಸಂಭಾವ್ಯ ಆಡುವ ಬಳಗ: ಅಂಕಿತ್ ಬೇನಿವಾಲ್, ಗಲ್ಲಾ ರಾಜು, ಆದರ್ಶ್ ಟಿ, ಸುರಿಂದರ್ ಸಿಂಗ್, ಸಂದೀಪ್ ಕಾಂಡೋಲಾ, ಮುಹಮ್ಮದ್ ಶಿಹಾಸ್, ಆಕಾಶ್ ಚೌಧರಿ.

ಪಂದ್ಯ 3: ತಮಿಳ್ ತಲೈವಾಸ್ vs ಗುಜರಾತ್ ಜೈಂಟ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 20 ಪಂದ್ಯಗಳನ್ನಾಡಿರುವ ಗುಜರಾತ್ ಜೈಂಟ್ಸ್ 8 ಪಂದ್ಯಗಳಲ್ಲಿ ಗೆದ್ದು, 8 ಪಂದ್ಯಗಳಲ್ಲಿ ಸೋತು, ಉಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 57 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 21 ಪಂದ್ಯಗಳನ್ನಾಡಿರುವ ತಮಿಳ್ ತಲೈವಾಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿ, 10 ಪಂದ್ಯಗಳಲ್ಲಿ ಸೋತು, ಉಳಿದ 6 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 47 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 129ನೇ ಪಂದ್ಯವಾಗಿದ್ದು ರಾತ್ರಿ 9.30ಕ್ಕೆ ಆರಂಭವಾಗಲಿದೆ.

ತಮಿಳ್ ತಲೈವಾಸ್ ಸಂಭಾವ್ಯ ಆಡುವ ಬಳಗ: ಹಿಮಾಂಶು ಸಿಂಗ್, ಪೊ ಸುರ್ಜಿತ್ ಸಿಂಗ್, ಹಿಮಾಂಶು, ಸಾಗರ್, ಸಾಹಿಲ್ ಸಿಂಗ್, ಮೋಹಿತ್, ಸಾಹಿಲ್ ಸುರೇಂದರ್

ಗುಜರಾತ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ: ಅಜಯ್ ಕುಮಾರ್, ಮಹೇಂದ್ರ ಗಣೇಶ್ ರಜಪೂತ್, ಪ್ರವೇಶ್ ಭೈನ್ಸ್ವಾಲ್, ಗಿರೀಶ್ ಮಾರುತಿ ಎರ್ನಾಕ್, ಸುನಿಲ್ ಕುಮಾರ್, ಹಾಡಿ ಶೋಷ್ಟೋರಾಕ್, ರಾಕೇಶ್ ಹಸ್

ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Friday, February 18, 2022, 15:43 [IST]
Other articles published on Feb 18, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+