For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಫೆಬ್ರವರಿ 3ರ ಎಲ್ಲಾ ಪಂದ್ಯಗಳ ಮಾಹಿತಿ ಮತ್ತು ಸಂಭಾವ್ಯ ತಂಡಗಳ ವಿವರ

PKL 8: Tamil Thalaivas vs Telugu Titans preview, head to head and probable playing 7

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಫೆಬ್ರವರಿ 2ರ ಬುಧವಾರದವರೆಗೂ ಒಟ್ಟು 89 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಬೆಂಗಳೂರು ಬುಲ್ಸ್ ದ್ವಿತೀಯ ಸ್ಥಾನ ಮತ್ತು ಪಾಟ್ನಾ ಪೈರೇಟ್ಸ್ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 89 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಫೆಬ್ರವರಿ 3) ಒಟ್ಟು 2 ಪಂದ್ಯಗಳು ನಡೆಯಲಿವೆ. ಈ 2 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ದಬಾಂಗ್ ಡೆಲ್ಲಿ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ಮತ್ತು ತಮಿಳ್ ತಲೈವಾಸ್ ತಂಡಗಳು ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 2 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..

ಪಂದ್ಯ 1: ಜೈಪುರ ಪಿಂಕ್ ಪ್ಯಾಂಥರ್ಸ್ vs ದಬಾಂಗ್ ಡೆಲ್ಲಿ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 15 ಪಂದ್ಯಗಳನ್ನಾಡಿರುವ ದಬಾಂಗ್ ಡೆಲ್ಲಿ 9 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 53 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡ 6 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತಿದ್ದು, ಉಳಿದ 2 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 40 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 90ನೇ ಪಂದ್ಯವಾಗಿದ್ದು ಸಂಜೆ 7. 30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 17 ಮುಖಾಮುಖಿ ಪಂದ್ಯಗಳು ನಡೆದಿದ್ದು ಜೈಪುರ್ ಪಿಂಕ್ ಪ್ಯಾಂಥರ್ಸ್ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ದಬಾಂಗ್ ಡೆಲ್ಲಿ 7 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೆರಡು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ದಬಾಂಗ್ ಡೆಲ್ಲಿ ಸಂಭಾವ್ಯ ಆಡುವ ಬಳಗ: ವಿಜಯ್ ಮಲಿಕ್, ಅಶು, ಮಂಜೀತ್ ಚಿಲ್ಲರ್, ಜೀವ ಕುಮಾರ್, ಸಂದೀಪ್ ನರ್ವಾಲ್, ಕ್ರಿಶನ್ ಧುಲ್, ಜೋಗಿಂದರ್ ನರ್ವಾಲ್ (ನಾಯಕ)

ಜೈಪುರ ಪಿಂಕ್ ಪ್ಯಾಂಥರ್ಸ್ ಸಂಭಾವ್ಯ ಆಡುವ ಬಳಗ: ಅರ್ಜುನ್ ದೇಶ್ವಾಲ್, ದೀಪಕ್ ನಿವಾಸ ಹೂಡಾ, ನಿತಿನ್ ರಾವಲ್, ವಿಶಾಲ್, ಅಮಿತ್, ಸಾಹುಲ್ ಕುಮಾರ್, ಸಂದೀಪ್ ಧುಲ್ (ನಾಯಕ)

ಪಂದ್ಯ 2: ತಮಿಳ್ ತಲೈವಾಸ್ vs ತೆಲುಗು ಟೈಟಾನ್ಸ್

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿರುವ ತಮಿಳ್ ತಲೈವಾಸ್ 4 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು, ಉಳಿದ 6 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 39 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 14 ಪಂದ್ಯಗಳನ್ನಾಡಿರುವ ತೆಲುಗು ಟೈಟಾನ್ಸ್ ತಂಡ 1 ಪಂದ್ಯದಲ್ಲಿ ಗೆದ್ದು, 10 ಪಂದ್ಯಗಳಲ್ಲಿ ಸೋತಿದ್ದು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 22 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 91ನೇ ಪಂದ್ಯವಾಗಿದ್ದು ಸಂಜೆ 8.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 9 ಮುಖಾಮುಖಿ ಪಂದ್ಯಗಳು ನಡೆದಿದ್ದು ತೆಲುಗು ಟೈಟಾನ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ತಮಿಳ್ ತಲೈವಾಸ್ 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ತೆಲುಗು ಟೈಟಾನ್ಸ್ ಸಂಭಾವ್ಯ ಆಡುವ ಬಳಗ: ರೋಹಿತ್ ಕುಮಾರ್ (ನಾಯಕ), ಆದರ್ಶ್ ಟಿ, ಅಂಕಿತ್ ಬೇನಿವಾಲ್, ಸುರೀಂದರ್ ಸಿಂಗ್, ಆಕಾಶ್ ಚೌಧರಿ, ಸಿ ಅರುಣ್, ಸಂದೀಪ್ ಕಾಂಡೋಲಾ

ತಮಿಳ್ ತಲೈವಾಸ್ ಸಂಭಾವ್ಯ ಆಡುವ ಬಳಗ: ಮಂಜೀತ್, ಸುರ್ಜೀತ್ (ನಾಯಕ), ಮೋಹಿತ್, ಅಜಿಂಕ್ಯ ಪವಾರ್, ಅತುಲ್ ಎಂಎಸ್, ಸಾಗರ್, ಸಾಗರ್ ಕೃಷ್ಣ

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Thursday, February 3, 2022, 17:35 [IST]
Other articles published on Feb 3, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+