ಪ್ರೋ ಕಬಡ್ಡಿ 8: ತೆಲುಗು ಟೈಟಾನ್ಸ್ vs ಹರಿಯಾಣ ಸ್ಟೀಲರ್ಸ್ ಮುಖಾಮುಖಿಯಲ್ಲಿ ಬಲಿಷ್ಠ ತಂಡ ಯಾವುದು?

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 24ರ ಸೋಮವಾರದವರೆಗೂ ಒಟ್ಟು 76 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಬೆಂಗಳೂರು ಬುಲ್ಸ್ ಅಗ್ರಸ್ಥಾನದಲ್ಲಿದ್ದರೆ, ದಬಾಂಗ್ ಡೆಲ್ಲಿ ದ್ವಿತೀಯ ಸ್ಥಾನ ಮತ್ತು ಬೆಂಗಾಲ್ ವಾರಿಯರ್ಸ್ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 76 ಪಂದ್ಯಗಳು ಈಗಾಗಲೇ ಮುಗಿದಿದ್ದು ಇಂದು ( ಜನವರಿ 25 ) ತೆಲುಗು ಟೈಟಾನ್ಸ್ ಮತ್ತು ಹರಿಯಾಣ ಸ್ಟೀಲರ್ಸ್ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಯ ಪ್ರಕಾರ ಇಂದು 2 ಪಂದ್ಯಗಳು ನಡೆಯಬೇಕಿತ್ತು ಆದರೆ ಕೆಲ ಆಟಗಾರರಿಗೆ ಕೊರೋನಾವೈರಸ್ ತಗುಲಿರುವ ಕಾರಣದಿಂದಾಗಿ ಹನ್ನೆರಡು ತಂಡಗಳ ಪೈಕಿ 2 ತಂಡಗಳಿಗೆ ತಂಡ ರಚಿಸಿ ಕಣಕ್ಕಿಳಿಸುವಷ್ಟು ಆಟಗಾರರು ಇಲ್ಲದೇ ಇರುವ ಕಾರಣ ಭಾಗವಹಿಸುವಿಕೆಯಿಂದ ಹಿಂದೆ ಸರಿದಿವೆ. ಹೀಗೆ ಕೊರೋನಾ ಸೋಂಕಿಗೆ ಒಳಗಾಗಿರುವ ಆಟಗಾರರು ಯಾವ 2 ತಂಡಗಳಿಗೆ ಸೇರಿದವರು ಎಂಬ ಮಾಹಿತಿಯನ್ನು ಮಾತ್ರ ಬಿಟ್ಟುಕೊಡದ ಪ್ರೋ ಕಬಡ್ಡಿ ಲೀಗ್ ಆಯೋಜಕರು ಲಭ್ಯವಿರುವ ತಂಡಗಳನ್ನು ಬಳಸಿಕೊಂಡು ಟೂರ್ನಿಯನ್ನು ಮುಂದುವರೆಸಲು ತೀರ್ಮಾನಿಸಿದ್ದಾರೆ.

ಈತ ಬೇಕೆಂದು ಪ್ರತೀ ತಂಡವೂ ಬಯಸುತ್ತದೆ: ತಂಡದಿಂದ ಹೊರಬಿದ್ದ ಆಟಗಾರನನ್ನು ಕೊಂಡಾಡಿದ ರಾಹುಲ್ಈತ ಬೇಕೆಂದು ಪ್ರತೀ ತಂಡವೂ ಬಯಸುತ್ತದೆ: ತಂಡದಿಂದ ಹೊರಬಿದ್ದ ಆಟಗಾರನನ್ನು ಕೊಂಡಾಡಿದ ರಾಹುಲ್

ತೆಲುಗು ಟೈಟಾನ್ಸ್ ಮತ್ತು ಹರಿಯಾಣ ಸ್ಟೀಲರ್ಸ್ ತಂಡಗಳ ನಡುವಿನ ಪಂದ್ಯದ ಮಾಹಿತಿ

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿರುವ ಹರಿಯಾಣ ಸ್ಟೀಲರ್ಸ್ 6 ಪಂದ್ಯಗಳಲ್ಲಿ ಜಯ ಸಾಧಿಸಿ, 5 ಪಂದ್ಯಗಳಲ್ಲಿ ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದರೆ, ಅತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿರುವ ತೆಲುಗು ಟೈಟಾನ್ಸ್ ಕೇವಲ ಒಂದೇ ಒಂದು ಪಂದ್ಯದಲ್ಲಿ ಗೆದ್ದು, 10 ಪಂದ್ಯಗಳಲ್ಲಿ ಸೋತು, ಉಳಿದೆರಡು ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 19 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಯ 77ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇತ್ತಂಡಗಳ ನಡುವೆ ಇದುವರೆಗೂ ಒಟ್ಟು 9 ಮುಖಾಮುಖಿ ಪಂದ್ಯಗಳು ನಡೆದಿದ್ದು ಹರಿಯಾಣ ಸ್ಟೀಲರ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ತೆಲುಗು ಟೈಟಾನ್ಸ್ ಕೂಡ 3 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದ 3 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ಹರಿಯಾಣ ಸ್ಟೀಲರ್ಸ್ ಸಂಭಾವ್ಯ ಆಡುವ ಬಳಗ: ವಿಕಾಸ್ ಕಂಡೋಲಾ (ನಾಯಕ), ರೋಹಿತ್ ಗುಲಿಯಾ, ಮೀಟು ಶರ್ಮಾ, ಜೈದೀಪ್ ಕುಲದೀಪ್, ರವಿ ಕುಮಾರ್, ಸುರೇಂದ್ರ ನಾದ, ಮೋಹಿತ್ ನಂದಲ್

ಕೊಹ್ಲಿ ನಾಯಕತ್ವ ಬಿಡುವಂತೆ ತಂಡದೊಳಗೆ ರಚಿಸಿದ್ದ ಈ ಪ್ಲಾನ್ ಯಾರಿಗೂ ಗೊತ್ತಿಲ್ಲ ಬಿಡಿ: ಮಾಜಿ ಕ್ರಿಕೆಟಿಗ!ಕೊಹ್ಲಿ ನಾಯಕತ್ವ ಬಿಡುವಂತೆ ತಂಡದೊಳಗೆ ರಚಿಸಿದ್ದ ಈ ಪ್ಲಾನ್ ಯಾರಿಗೂ ಗೊತ್ತಿಲ್ಲ ಬಿಡಿ: ಮಾಜಿ ಕ್ರಿಕೆಟಿಗ!

ತೆಲುಗು ಟೈಟಾನ್ಸ್ ಸಂಭಾವ್ಯ ಆಡುವ ಬಳಗ: ರಜನೀಶ್ ದಲಾಲ್, ಅಂಕಿತ್ ಬೇನಿವಾಲ್ ,ಆದರ್ಶ ಟಿ, ಪ್ರಿನ್ಸ್, ಸುರೀಂದರ್ ಸಿಂಗ್, ಸಂದೀಪ್ ಕಾಂಡೋಲಾ (ನಾಯಕ), ಆಕಾಶ್ ಚೌಧರಿ

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

For Quick Alerts
ALLOW NOTIFICATIONS
For Daily Alerts
Story first published: Tuesday, January 25, 2022, 16:50 [IST]
Other articles published on Jan 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X