For Quick Alerts
ALLOW NOTIFICATIONS  
For Daily Alerts

ಪ್ರೋ ಕಬಡ್ಡಿ ಲೀಗ್ 8: ಯುಪಿ ಯೋಧಾ vs ಪುಣೇರಿ ಪಲ್ಟನ್ ಮುಖಾಮುಖಿಯಲ್ಲಿ ಬಲಿಷ್ಠ ತಂಡ ಯಾವುದು?

PKL 8: UP Yodha vs Puneri Paltan preview, head to head and probable playing 7

ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಜನವರಿ 26ರ ಬುಧವಾರದವರೆಗೂ ಒಟ್ಟು 78 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ಬೆಂಗಳೂರು ಬುಲ್ಸ್ ಅಗ್ರಸ್ಥಾನದಲ್ಲಿದ್ದರೆ, ದಬಾಂಗ್ ಡೆಲ್ಲಿ ದ್ವಿತೀಯ ಸ್ಥಾನ ಮತ್ತು ಹರಿಯಾಣ ಸ್ಟೀಲರ್ಸ್ ತೃತೀಯ ಸ್ಥಾನದಲ್ಲಿವೆ.

ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 78 ಪಂದ್ಯಗಳು ಈಗಾಗಲೇ ಮುಗಿದಿದ್ದು ಇಂದು ( ಜನವರಿ 27 ) ಯುಪಿ ಯೋಧಾ ಮತ್ತು ಪುಣೇರಿ ಪಲ್ಟನ್ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಈ ಹಿಂದೆ ಪ್ರಕಟಿಸಿದ್ದ ವೇಳಾಪಟ್ಟಿಯ ಪ್ರಕಾರ ಇಂದು 2 ಪಂದ್ಯಗಳು ನಡೆಯಬೇಕಿತ್ತು ಆದರೆ ಕೆಲ ಆಟಗಾರರಿಗೆ ಕೊರೋನಾವೈರಸ್ ತಗುಲಿರುವ ಕಾರಣದಿಂದಾಗಿ ಹನ್ನೆರಡು ತಂಡಗಳ ಪೈಕಿ 2 ತಂಡಗಳಿಗೆ ತಂಡ ರಚಿಸಿ ಕಣಕ್ಕಿಳಿಸುವಷ್ಟು ಆಟಗಾರರು ಇಲ್ಲದೇ ಇರುವ ಕಾರಣ ಭಾಗವಹಿಸುವಿಕೆಯಿಂದ ಹಿಂದೆ ಸರಿದಿವೆ. ಹೀಗೆ ಕೊರೋನಾ ಸೋಂಕಿಗೆ ಒಳಗಾಗಿರುವ ಆಟಗಾರರು ಯಾವ 2 ತಂಡಗಳಿಗೆ ಸೇರಿದವರು ಎಂಬ ಮಾಹಿತಿಯನ್ನು ಮಾತ್ರ ಬಿಟ್ಟುಕೊಡದ ಪ್ರೋ ಕಬಡ್ಡಿ ಲೀಗ್ ಆಯೋಜಕರು ಲಭ್ಯವಿರುವ ತಂಡಗಳನ್ನು ಬಳಸಿಕೊಂಡು ಟೂರ್ನಿಯನ್ನು ಮುಂದುವರೆಸಲು ತೀರ್ಮಾನಿಸಿದ್ದಾರೆ.

ಯುಪಿ ಯೋಧಾ ಮತ್ತು ಪುಣೇರಿ ಪಲ್ಟಾನ್ ತಂಡಗಳ ನಡುವಿನ ಪಂದ್ಯದ ಪ್ರಿವ್ಯೂ, ಸಂಭಾವ್ಯ ಆಡುವ ಬಳಗ ಮತ್ತು ಮುಖಾಮುಖಿ ಪಂದ್ಯಗಳಲ್ಲಿನ ಫಲಿತಾಂಶಗಳ ಈ ಕೆಳಕಂಡಂತಿದೆ..

ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿರುವ ಯುಪಿ ಯೋಧಾ 5 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 39 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 13 ಪಂದ್ಯಗಳನ್ನಾಡಿರುವ ಪುಣೇರಿ ಪಲ್ಟನ್ 6 ಪಂದ್ಯಗಳಲ್ಲಿ ಗೆದ್ದು, 7 ಪಂದ್ಯಗಳಲ್ಲಿ ಸೋತಿದ್ದು 32 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಇನ್ನು ಯುಪಿ ಯೋಧಾ ಮತ್ತು ಪುಣೇರಿ ಪಲ್ಟಾನ್ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 79ನೇ ಪಂದ್ಯವಾಗಿದ್ದು ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಯುಪಿ ಯೋಧಾ ಮತ್ತು ಪುಣೇರಿ ಪಲ್ಟನ್ ತಂಡಗಳು ಇದುವರೆಗೂ ಒಟ್ಟು 6 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಯುಪಿ ಯೋಧಾ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪುಣೇರಿ ಪಲ್ಟನ್ 2 ಪಂದ್ಯಗಳಲ್ಲಿ ಗೆದ್ದಿದೆ.

ಯುಪಿ ಯೋಧಾ ಸಂಭಾವ್ಯ ಆಡುವ ಬಳಗ: ಪರ್ದೀಪ್ ನರ್ವಾಲ್, ಸುರೇಂದರ್ ಗಿಲ್, ಶ್ರೀಕಾಂತ್ ಜಾಧವ್, ನಿತೇಶ್ ಕುಮಾರ್ (ನಾಯಕ), ಶುಭಂ ಕುಮಾರ್, ಅಶು ಸಿಂಗ್ ಮತ್ತು ಸುಮಿತ್

ಪುಣೇರಿ ಪಲ್ಟನ್ ಸಂಭಾವ್ಯ ಆಡುವ ಬಳಗ: ಅಸ್ಲಂ ಇನಾಮದಾರ್, ಮೋಹಿತ್ ಗೋಯತ್, ನಿತಿನ್ ತೋಮರ್ (ನಾಯಕ), ಸಂಕೇತ್ ಸಾವಂತ್, ಅಭಿನೇಶ್ ನಾಡರಾಜನ್, ಸೋಂಬಿರ್ ಮತ್ತು ವಿಶಾಲ್ ಭಾರದ್ವಾಜ್

ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್‌ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

Story first published: Thursday, January 27, 2022, 15:54 [IST]
Other articles published on Jan 27, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+