ಬಹುನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಮತ್ತೆ ಬಂದಿದ್ದು, ಕಳೆದ ಡಿಸೆಂಬರ್ 22ರಂದು ಬೆಂಗಳೂರು ಬುಲ್ಸ್ ಮತ್ತು ಯು ಮುಂಬಾ ತಂಡಗಳ ನಡುವೆ ನಡೆದ ಹಣಾಹಣಿಯ ಮೂಲಕ ಆರಂಭವನ್ನು ಪಡೆದುಕೊಂಡಿದೆ. ಫೆಬ್ರವರಿ 4ರ ಗುರುವಾರದವರೆಗೂ ಒಟ್ಟು 94 ಪಂದ್ಯಗಳು ನಡೆದಿದ್ದು, ಈ ಸಮಯಕ್ಕೆ ಅಂಕಪಟ್ಟಿಯಲ್ಲಿ ಹೆಚ್ಚು ಅಂಕವನ್ನು ಪಡೆದುಕೊಳ್ಳುವುದರ ಮೂಲಕ ದಬಾಂಗ್ ಡೆಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಟ್ನಾ ಪೈರೇಟ್ಸ್ ದ್ವಿತೀಯ ಸ್ಥಾನ ಮತ್ತು ಬೆಂಗಳೂರು ಬುಲ್ಸ್ ತೃತೀಯ ಸ್ಥಾನದಲ್ಲಿವೆ.
ಹೀಗೆ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ ಪೈಕಿ ಇಲ್ಲಿಯವರೆಗೂ 94 ಪಂದ್ಯಗಳು ಈಗಾಗಲೇ ಮುಗಿದಿದ್ದು, ಇಂದು ( ಫೆಬ್ರವರಿ 5) ಒಟ್ಟು 3 ಪಂದ್ಯಗಳು ನಡೆಯಲಿವೆ. ಈ 3 ಪಂದ್ಯಗಳ ಪೈಕಿ ಪ್ರಥಮ ಪಂದ್ಯದಲ್ಲಿ ಯು ಮುಂಬಾ ಮತ್ತು ತಮಿಳ್ ತಲೈವಾಸ್ ತಂಡಗಳು ಸೆಣಸಾಟ ನಡೆಸಿದರೆ, ದ್ವಿತೀಯ ಪಂದ್ಯದಲ್ಲಿ ಯುಪಿ ಯೋಧಾ ಮತ್ತು ತೆಲುಗು ಟೈಟಾನ್ಸ್ ತಂಡಗಳು ಸೆಣಸಾಟ ನಡೆಸಲಿವೆ ಮತ್ತು ತೃತೀಯ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಹರಿಯಾಣ ಸ್ಟೀಲರ್ಸ್ ಸೆಣಸಾಟ ನಡೆಸಲಿವೆ. ಹೀಗೆ ಇಂದು ನಡೆಯಲಿರುವ ಈ 3 ಪಂದ್ಯಗಳ ಕುರಿತಾದ ಮಾಹಿತಿ, ಪಂದ್ಯಗಳಲ್ಲಿ ಕಣಕ್ಕಿಳಿಯಲಿರುವ ಸಂಭಾವ್ಯ ಆಟಗಾರರ ಪಟ್ಟಿ ಮತ್ತು ಮುಖಾಮುಖಿ ಹಣಾಹಣಿಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದಿದೆ ಎಂಬುದರ ಮಾಹಿತಿ ಮುಂದೆ ಇದೆ ಓದಿ..
ಪಂದ್ಯ 1: ಯು ಮುಂಬಾ vs ತಮಿಳ್ ತಲೈವಾಸ್
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 15 ಪಂದ್ಯಗಳನ್ನಾಡಿರುವ ತಮಿಳ್ ತಲೈವಾಸ್ 4 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು, ಉಳಿದ 6 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 44 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 15 ಪಂದ್ಯಗಳನ್ನಾಡಿರುವ ಯು ಮುಂಬಾ ತಂಡ 5 ಪಂದ್ಯಗಳಲ್ಲಿ ಗೆದ್ದು, 5 ಪಂದ್ಯಗಳಲ್ಲಿ ಸೋತಿದ್ದು, ಉಳಿದ 5 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 43 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 95ನೇ ಪಂದ್ಯವಾಗಿದ್ದು ಸಂಜೆ 7. 30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 6 ಮುಖಾಮುಖಿ ಪಂದ್ಯಗಳು ನಡೆದಿದ್ದು ಯು ಮುಂಬಾ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ತಮಿಳ್ ತಲೈವಾಸ್ 1 ಪಂದ್ಯದಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.
ಯು ಮುಂಬಾ ಸಂಭಾವ್ಯ ಆಡುವ ಬಳಗ: ಅಭಿಷೇಕ್ ಸಿಂಗ್, ವಿ ಅಜಿತ್, ರಾಹುಲ್ ಸೇಠಪಾಲ್, ಹರೇಂದ್ರ, ಅಜಿಂಕ್ಯ ಕಪ್ರೆ, ರಿಂಕು, ಫಜೆಲ್ ಅತ್ರಾಚಲಿ (ನಾಯಕ)
ತಮಿಳ್ ತಲೈವಾಸ್ ಸಂಭಾವ್ಯ ಆಡುವ ಬಳಗ: ಮಂಜೀತ್, ಅಜಿಂಕ್ಯ ಪವಾರ್, ಮೋಹಿತ್, ಅಭಿಷೇಕ್, ಸುರ್ಜೀತ್ (ನಾಯಕ), ಸಾಗರ್ ಸಾಹಿಲ್
ನಾನು ಬಲಗೈ ವೇಗದ ಬೌಲರ್, ದ.ಆಫ್ರಿಕಾದ ಈ ಕ್ರಿಕೆಟಿಗನೆಂದರೆ ನನಗೆ ಅಚ್ಚುಮೆಚ್ಚು: ವಿರಾಟ್ ಕೊಹ್ಲಿ
ಪಂದ್ಯ 2: ಯುಪಿ ಯೋಧಾ vs ತೆಲುಗು ಟೈಟಾನ್ಸ್
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 16 ಪಂದ್ಯಗಳನ್ನಾಡಿರುವ ಯುಪಿ ಯೋಧಾ 5 ಪಂದ್ಯಗಳಲ್ಲಿ ಗೆದ್ದು, 8 ಪಂದ್ಯಗಳಲ್ಲಿ ಸೋತು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 42 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 8ನೇ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 15 ಪಂದ್ಯಗಳನ್ನಾಡಿರುವ ತೆಲುಗು ಟೈಟಾನ್ಸ್ ತಂಡ 1 ಪಂದ್ಯದಲ್ಲಿ ಗೆದ್ದು, 11 ಪಂದ್ಯಗಳಲ್ಲಿ ಸೋತಿದ್ದು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 22 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 96ನೇ ಪಂದ್ಯವಾಗಿದ್ದು ರಾತ್ರಿ 8.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 9 ಮುಖಾಮುಖಿ ಪಂದ್ಯಗಳು ನಡೆದಿದ್ದು ಯುಪಿ ಯೋಧಾ 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ತೆಲುಗು ಟೈಟಾನ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೆರಡು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿವೆ.
ಯುಪಿ ಯೋಧಾ ಸಂಭಾವ್ಯ ಆಡುವ ಬಳಗ: ಪರ್ದೀಪ್ ನರ್ವಾಲ್, ಸುರೇಂದರ್ ಗಿಲ್, ಶ್ರೀಕಾಂತ್ ಜಾಧವ್, ಅಶು ಸಿಂಗ್, ಶುಭಂ, ಸುಮಿತ್, ನಿತೇಶ್ ಕುಮಾರ್ (ನಾಯಕ)
ತೆಲುಗು ಟೈಟಾನ್ಸ್ ಸಂಭಾವ್ಯ ಆಡುವ ಬಳಗ: ರಜನೀಶ್ ದಲಾಲ್, ಆದರ್ಶ್ ಟಿ, ಅಂಕಿತ್ ಬೇನಿವಾಲ್, ಸುರಿಂದರ್ ಸಿಂಗ್, ಆಕಾಶ್ ಚೌಧರಿ, ಸಿ ಅರುಣ್, ಸಂದೀಪ್ ಕಂಡೋಲಾ (ನಾಯಕ)
ಭಾರತ vs ವಿಂಡೀಸ್: ತಂಡಕ್ಕೆ ಒಳ್ಳೆ ಆಟಗಾರರು ಬೇಕು ಎಂದಿದ್ದ ರಾಹುಲ್ಗೆ ರೋಹಿತ್ ಶರ್ಮಾ ಪ್ರತ್ಯುತ್ತರ?
ಪಂದ್ಯ 3: ಜೈಪುರ್ ಪಿಂಕ್ ಪ್ಯಾಂಥರ್ಸ್ vs ಹರಿಯಾಣ ಸ್ಟೀಲರ್ಸ್
ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 15 ಪಂದ್ಯಗಳನ್ನಾಡಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ 7 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತು, ಉಳಿದ 2 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 45 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ 5ನೇ ಸ್ಥಾನ ಪಡೆದುಕೊಂಡಿದೆ. ಅತ್ತ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯಲ್ಲಿ ಇಲ್ಲಿಯವರೆಗೂ ಒಟ್ಟು 16 ಪಂದ್ಯಗಳನ್ನಾಡಿರುವ ಹರಿಯಾಣ ಸ್ಟೀಲರ್ಸ್ ತಂಡ 7 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತಿದ್ದು, ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವುದರ ಮೂಲಕ 48 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಪ್ರೊ ಕಬಡ್ಡಿ ಲೀಗ್ ಆವೃತ್ತಿಯ 97ನೇ ಪಂದ್ಯವಾಗಿದ್ದು ರಾತ್ರಿ 9.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಇತ್ತಂಡಗಳ ನಡುವೆ ಪ್ರೊ ಕಬಡ್ಡಿ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಒಟ್ಟು 8 ಮುಖಾಮುಖಿ ಪಂದ್ಯಗಳು ನಡೆದಿದ್ದು ಜೈಪುರ್ ಪಿಂಕ್ ಪ್ಯಾಂಥರ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಹರಿಯಾಣ ಸ್ಟೀಲರ್ಸ್ 1 ಪಂದ್ಯದಲ್ಲಿ ಗೆದ್ದಿದೆ ಹಾಗೂ ಉಳಿದೆರಡು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿವೆ.
ಜೈಪುರ್ ಪಿಂಕ್ ಪ್ಯಾಂಥರ್ಸ್ ಸಂಭಾವ್ಯ ಆಡುವ ಬಳಗ: ಅರ್ಜುನ್ ದೇಶ್ವಾಲ್, ದೀಪಕ್ ನಿವಾಸ ಹೂಡಾ, ನಿತಿನ್ ರಾವಲ್, ವಿಶಾಲ್, ಅಮಿತ್, ಸಾಹುಲ್ ಕುಮಾರ್, ಸಂದೀಪ್ ಧುಲ್ (ನಾಯಕ)
ಹರಿಯಾಣ ಸ್ಟೀಲರ್ಸ್ ಸಂಭಾವ್ಯ ಆಡುವ ಬಳಗ: ವಿಕಾಸ್ ಕಂಡೋಲಾ (ನಾಯಕ), ರೋಹಿತ್ ಗುಲಿಯಾ, ಮೀಟು ಶರ್ಮಾ, ಜೈದೀಪ್ ಕುಲದೀಪ್, ರವಿ ಕುಮಾರ್, ಸುರೇಂದ್ರ ನಾದ, ಮೋಹಿತ್ ನಂದಲ್
ನೇರಪ್ರಸಾರದ ಮಾಹಿತಿ: ಎಲ್ಲಾ ಪಂದ್ಯಗಳ ನೇರಪ್ರಸಾರದ ಮಾಹಿತಿ: ಈ ಬಾರಿಯ ವಿವೋ ಪ್ರೊ ಕಬಡ್ಡಿ ಲೀಗ್ನ ಎಲ್ಲ ಪಂದ್ಯಗಳು ಸಹ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ಪ್ರಸಾರವಾಗಲಿದ್ದು, ಡಿಸ್ನೆ + ಹಾಟ್ಸ್ಟಾರ್ ಅಪ್ಲಿಕೇಶನ್ನಲ್ಲಿಯೂ ಕೂಡ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.