ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ: 7 ವರ್ಷಗಳ ಬಳಿಕ ನಡೆಯುತ್ತಿರುವ ಕ್ರೀಡಾಕೂಟ

36th National Games

ಸೆಪ್ಟೆಂಬರ್ 29ರಿಂದ ಅಕ್ಟೋಬರ್ 12ರ ವರೆಗೂ ಗುಜರಾತ್ ರಾಜ್ಯದ ಆರು ನಗರಗಳಲ್ಲಿ ನಡೆಯುವ 36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಚಾಲನೆ ನೀಡಿದರು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, 7 ವರ್ಷಗಳ ಬಳಿಕ ನಡೆಯುತ್ತಿರುವ ರಾಷ್ಟ್ರೀಯ ಗೇಮ್ಸ್‌ಗೆ ಗುಜರಾತ್ ಆತಿಥ್ಯ ವಹಿಸಿದೆ.

36ನೇ ರಾಷ್ಟ್ರೀಯ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಒಲಿಂಪಿಯನ್‌ಗಳಾದ ಪಿವಿ ಸಿಂಧು, ನೀರಜ್ ಚೋಪ್ರಾ ಮತ್ತು ರವಿಕುಮಾರ್ ದಹಿಯಾ ಕೂಡ ಉಪಸ್ಥಿತರಿದ್ದರು. 7 ವರ್ಷಗಳ ಸುದೀರ್ಘ ವಿರಾಮದ ನಂತರ ರಾಷ್ಟ್ರೀಯ ಕ್ರೀಡಾಕೂಟವನ್ನು ಹಲವು ಸಂಕಷ್ಟಗಳಿಂದಾಗಿ ನಡೆಸಲಾಗುತ್ತಿದೆ. 2015 ರಲ್ಲಿ ಕೇರಳವು ಸ್ಪರ್ಧಾತ್ಮಕ ಕ್ರೀಡಾಪಟುಗಳಿಗೆ ಆತಿಥ್ಯ ವಹಿಸಿದ ಬಳಿಕ ಈ ಕ್ರೀಡಾಕೂಟ ನಡೆಯುತ್ತಿದೆ.

ಗುಜರಾತ್‌ನ 6 ನಗರಗಳು ರಾಷ್ಟ್ರೀಯ ಗೇಮ್ಸ್‌ಗೆ ಆತಿಥ್ಯ
36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಗುಜರಾತ್‌ನ 6 ನಗರಗಳಾದ ಅಹಮದಾಬಾದ್, ಗಾಂಧಿನಗರ, ಸೂರತ್, ವಡೋದರ, ರಾಜ್‌ಕೋಟ್ ಮತ್ತು ಭಾವ್‌ನಗರಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಸೈಕ್ಲಿಂಗ್ ಸ್ಪರ್ಧೆಗಳನ್ನು ನವದೆಹಲಿಯಲ್ಲಿ ನಡೆಸಲಾಗುತ್ತದೆ.

28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 7000ಕ್ಕೂ ಹೆಚ್ಚು ಕ್ರೀಡಾಪಟುಗಳು, 36ಕ್ಕೂ ಹೆಚ್ಚು ಕ್ರೀಡಾ ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. ಇದೇ ಮೊದಲ ಬಾರಿಗೆ ಕ್ರೀಡಾಕೂಟದಲ್ಲಿ ದೇಸಿ ಕ್ರೀಡೆಗಳಾದ ಮಲ್ಲಕಂಭ ಮತ್ತು ಯೋಗಾಸನವನ್ನು ಸೇರ್ಪಡೆಗೊಳಿಸಲಾಗಿದೆ. ಕಳೆದ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟವು 2015ರಲ್ಲಿ ಕೇರಳದಲ್ಲಿ ನಡೆದಿತ್ತು.

ಈಗಾಗಲೇ ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣಗೊಂಡಿದ್ದು, 'ಇನ್ನು ಜುಡೇಗಾ ಇಂಡಿಯಾ, ಜೀತೇಗಾ ಇಂಡಿಯಾ' ಎನ್ನುವುದು ಕ್ರೀಡಾಕೂಟದ ಅಧಿಕೃತ ಗೀತೆ ಆಗಿದೆ. ಖ್ಯಾತ ಬಾಲಿವುಡ್ ಗಾಯಕ ಸುಖ್ವಿಂದರ್ ಸಿಂಗ್ ಈ ಗೀತೆಯನ್ನು ಹಾಡಿದ್ದಾರೆ.

Story first published: Thursday, September 29, 2022, 20:19 [IST]
Other articles published on Sep 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X