For Quick Alerts
ALLOW NOTIFICATIONS  
For Daily Alerts

ಮಹಿಳಾ ರೆಸ್ಲರ್ ಮೇಲೆ ಅಧ್ಯಕ್ಷನಿಂದಲೇ ಲೈಂಗಿಕ ಕಿರುಕುಳ; ಬಂಧಿಸುವಂತೆ ರಾತ್ರಿಪೂರ್ತಿ ಪ್ರತಿಭಟನೆ!

7 women wrestlers once again files sexual harrasment complaint against Brij Bhushan Sharan Singh

ಕಳೆದ ಜನವರಿ ತಿಂಗಳಿನಲ್ಲಿ ಭಾರತದ ಟಾಪ್ ರೆಸ್ಲರ್‌ಗಳಾದ ವಿನೀಶ್ ಫೋಗಟ್, ಭಜರಂಗ್ ಪೂನಿಯಾ ಹಾಗೂ ಸಾಕ್ಷಿ ಮಲ್ಲಿಕ್ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ( WFI ) ಅಧ್ಯಕ್ಷರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿ ಕಿರುಕುಳದ ಗಂಭೀರ ಆರೋಪವನ್ನು ಮಾಡಿದ್ದರು. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಿ ಎಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು.

ದೆಹಲಿ ಪೊಲೀಸರಿಗೆ ದೂರನ್ನೂ ಸಹ ನೀಡಿದ್ದರು. ಆದರೆ ದೂರು ನೀಡಿ ಮೂರು ತಿಂಗಳುಗಳು ಕಳೆದರೂ ಸಹ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ ಎಂದು ಮತ್ತೆ ರೆಸ್ಲರ್‌ಗಳು ರೊಚ್ಚಿಗೆದ್ದಿದ್ದಾರೆ. ಈ ಬಾರಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ಪ್ರತಿಭಟನೆ ನಡೆಸಲು ರೆಸ್ಲರ್‌ಗಳು ತೀರ್ಮಾನಿಸಿದ್ದಾರೆ.

"ಪ್ರತಿಷ್ಠಿತ ಕುಸ್ತಿ ಸ್ಪರ್ಧೆಗಳಲ್ಲಿ ಈ ದೇಶಕ್ಕೆ ಪ್ರಶಸ್ತಿಗಳನ್ನು ತಂದುಕೊಟ್ಟ ಹಲವು ಮಹಿಳಾ ರೆಸ್ಲರ್‌ಗಳು WFI ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರಿಂದ ಲೈಂಗಿಕ ಶೋಷಣೆಗೆ ಹಾಗೂ ಕಿರುಕುಳಕ್ಕೆ ಒಳಗಾಗಿದ್ದಾರೆ. 21.04.2023 ರಂದು ದೂರು ನೀಡಿದ್ದರೂ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಳ್ಳುತ್ತಿಲ್ಲ" ಎಂದು ಟ್ವೀಟ್ ಮಾಡಿರುವ ವಿನೇಶ್ ಫೋಗಟ್ ಕಿಡಿಕಾರಿದ್ದಾರೆ.

ಇನ್ನು ಈ ಬಾರಿ ಏಳು ಮಹಿಳಾ ರೆಸ್ಲರ್‌ಗಳು ಹೊಸ ದೂರುಗಳೊಂದಿಗೆ ಬಂದಿದ್ದು, ಬ್ರಿಜ್ ಭೂಷಣ್ ಶರಣ್ ಸಿಂಗ್ ಸಂಕಷ್ಟಕ್ಕೆ ಸಿಲುಕುವ ಎಲ್ಲಾ ಲಕ್ಷಣಗಳೂ ಸಹ ಕಾಣಸಿಗುತ್ತಿವೆ. ಈ ದೂರಿನ ಕುರಿತು ಯಾವುದೇ ಮಾಹಿತಿಯನ್ನು ಸರ್ಕಾರ ಬಹಿರಂಗಪಡಿಸಿಲ್ಲ ಎಂದು ಕಿಡಿಕಾರಿರುವ ಸಾಕ್ಷಿ ಮಲ್ಲಿಕ್ "ಮಹಿಳಾ ಕುಸ್ತಿಪಟುಗಳ ಹೇಳಿಕೆಯನ್ನು ದಾಖಲಿಸಿಕೊಂಡಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ದೂರು ನೀಡಿದವರಲ್ಲಿ ಅಪ್ರಾಪ್ತ ಬಾಲಕಿಯೂ ಇದ್ದಾರೆ" ಎಂದು ಹೇಳಿಕೆ ನೀಡಿ ಯಾವುದೇ ಕಾರಣಕ್ಕೂ ಆ ದೂರುದಾರರ ಹೆಸರುಗಳು ಆಚೆ ಬರಬಾರದು ಎಂದು ಸಹ ಹೇಳಿಕೆ ನೀಡಿದರು.

ಇನ್ನು ಭಜರಂಗ್ ಪೂನಿಯಾ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ನಾವು ಈ ಜಾಗ ಬಿಟ್ಟು ಕದಲುವುದಿಲ್ಲ, ಪ್ರತಿಭಟನೆ ಮಾಡುತ್ತಲೇ ಇರುತ್ತೇವೆ ಎಂದರು. ಪದೇ ಪದೇ ದೂರು ನೀಡಿದರೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗದ್ದರಿಂದ ಬೇಸತ್ತ ವಿನೇಶ್ ಫೋಗಟ್ "ನಮಗೆ ನ್ಯಾಯ ಸಿಗುವ ತನಕ ಇಲ್ಲಿಯೇ ಊಟ ಮಾಡುತ್ತೇವೆ, ಇಲ್ಲಿಯೇ ಮಲಗುತ್ತೇವೆ" ಎಂದು ಹೇಳಿಕೆ ನೀಡಿದ್ದಾರೆ.

vinesh phogat

ಇನ್ನೂ ಮುಂದುವರಿದು ಮಾತನಾಡಿರುವ ವಿನೇಶ್ ಫೋಗಟ್ "ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಪ್ರಾಧಿಕಾರವನ್ನು ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುತ್ತಿಲ್ಲ. ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ" ಎಂದು ಹೇಳಿಕೊಂಡಿದ್ದಾರೆ.

ಅಲ್ಲದೇ ವಿನೇಶ್ ಫೋಗಟ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಜಂತರ್ ಮಂತರ್‌ನ ನೆಲದ ಮೇಲೆ ಟಾರ್ಪಲ್ ಹಾಕಿ ರಾತ್ರಿ ವೇಳೆ ನಿದ್ರೆ ಮಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿದ್ದು ಪೋಡಿಯಂನಿಂದ ಫುಟ್‌ಪಾತ್‌ವರೆಗೆ ಎಂದು ಬರೆದುಕೊಂಡಿದ್ದಾರೆ.

Story first published: Monday, April 24, 2023, 9:39 [IST]
Other articles published on Apr 24, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+