ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಒಲಿಂಪಿಕ್ಸ್ ಬಂಗಾರ ಗೆದ್ದ ಬಳಿಕ ನೀರಜ್ ಚೋಪ್ರಾಗೆ ವಿಶ್ವ ಚಾಂಪಿಯನ್‌ಶಿಪ್‌ನತ್ತ ಕಣ್ಣು

After Olympic gold, Neeraj Chopra eyes World Championships title next year

ನವದೆಹಲಿ: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಬಂಗಾರ ಗೆದ್ದು ಭಾರತದ ಹಿರಿಮೆ ಜಗದಗಲಕೆ ಸಾರಿದ ಅಥ್ಲೀಟ್ ನೀರಜ್ ಚೋಪ್ರಾ ಮುಂಬರಲಿರುವ ವಿಶ್ವ ಚಾಂಪಿಯನ್‌ಶಿಪ್‌ನತ್ತ ಕಣ್ಣಿಟ್ಟಿದ್ದಾರೆ. ಮುಂದಿನ ವರ್ಷ ಯುನೈಟೆಡ್ ಸ್ಟೇಟ್ಸ್‌ ಆಫ್ ಅಮೆರಿಕಾ (ಯುಎಸ್‌ಎ)ಯಲ್ಲಿ ವರ್ಲ್ಡ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ನಡೆಯಲಿದೆ. ಟೋಕಿಯೋದಲ್ಲಿ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಬಂಗಾರ ಗೆದ್ದು ಇತಿಹಾಸ ನಿರ್ಮಿಸಿದ್ದರು.

ಟೋಕಿಯೋ ಒಲಿಂಪಿಕ್ಸ್‌ ಪದಕ ಗೆದ್ದವರಲ್ಲಿ ಯಾರಿಗೆ ಎಷ್ಟೆಷ್ಟು ಹಣ?: ಸಂಪೂರ್ಣ ಮಾಹಿತಿಟೋಕಿಯೋ ಒಲಿಂಪಿಕ್ಸ್‌ ಪದಕ ಗೆದ್ದವರಲ್ಲಿ ಯಾರಿಗೆ ಎಷ್ಟೆಷ್ಟು ಹಣ?: ಸಂಪೂರ್ಣ ಮಾಹಿತಿ

ಯುಎಸ್‌ಎಯ ಯುಜೀನ್, ಒರೆಗಾನ್‌ನಲ್ಲಿ ಈ ವರ್ಷದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ನಡೆಯಬೇಕಿತ್ತು. ಆದರೆ 2021ರಲ್ಲಿ ನಡೆಯಬೇಕಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ ಮುಂದಿನ ವರ್ಷಕ್ಕೆ ಮುಂದೂಡಲ್ಪಟ್ಟಿದೆ. ಕೋವಿಡ್ 19 ಕಾರಣದಿಂದ ಟೋಕಿಯೋ ಒಲಿಂಪಿಕ್ಸ್ 2021ಕ್ಕೆ ಮುಂದೂಡಲ್ಪಟ್ಟಿದ್ದರಿಂದ ವಿಶ್ವ ಚಾಂಪಿಯನ್‌ಶಿಪ್‌ ಅನ್ನು ಕೂಡ ಮುಂದೂಡಲಾಗಿತ್ತು.

2022 ಜುಲೈ 15-24ರ ವರೆಗೆ ಅಮೆರಿಕಾದಲ್ಲಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಡೆಯಲಿದೆ. ಒಲಿಂಪಿಕ್ಸ್ ಬಂಗಾರ ಗೆದ್ದಿರುವ ನೀರಜ್, ವರ್ಲ್ಡ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲೂ ಬಂಗಾರದ ಬೇಟೆ ಮುಂದುವರೆಸುವ ನಿರೀಕ್ಷೆಯಿದೆ.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬಂಗಾರ ಗೆಲ್ಲೋದು ನನ್ನ ಮುಂದಿನ ಗುರಿ
"ನಾನು ಈಗಾಗಲೇ ಏಷ್ಯನ್ ಗೇಮ್ಸ್ ಜಾವೆಲಿನ್‌ನಲ್ಲಿ ಬಂಗಾರ ಗೆದ್ದಿದ್ದೇನೆ, ಕಾಮನ್ವೆಲ್ತ್ ಗೇಮ್ಸ್‌ನಲ್ಲೂ ಚಿನ್ನದ ಪದಕ ಜಯಿಸಿದ್ದೇನೆ. ಈಗ ಒಲಿಂಪಿಕ್ಸ್‌ನಲ್ಲೂ ಬಂಗಾರದ ಪದಕ ಬಂದಿದೆ. ಹೀಗಾಗಿ ನನ್ನ ಮುಂದಿನ ಗುರಿ ಮುಂದಿನ ವರ್ಷ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬಂಗಾರ ಗೆಲ್ಲೋದು," ಎಂದು ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಒಲಿಂಪಿಕ್ಸ್ ಪದಕ ಗೆದ್ದಿದ್ದಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೋಪ್ರಾ ಹೇಳಿದ್ದಾರೆ.

ಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ಗೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ ಎದುರಾಗಿದೆ!ಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ಗೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ ಎದುರಾಗಿದೆ!

ಟೋಕಿಯೋದಲ್ಲಿ ದಾಖಲೆ ನಿರ್ಮಿಸಿದ್ದ ನೀರಜ್ ಚೋಪ್ರಾ
ನೀರಜ್ ಚೋಪ್ರಾರ ಅಥ್ಲೆಟಿಕ್ಸ್ ಚಿನ್ನದ ಪದಕ ಟೋಕಿಯೋ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್ (ಈಟಿ) ಎಸೆತದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ 23ರ ಹರೆಯ ನೀರಜ್ ಚೋಪ್ರಾ, 87.58 ಮೀಟರ್ ಸಾಧನೆಯೊಂದಿಗೆ ಬಂಗಾರ ಗೆದ್ದಿದ್ದರು. ಈ ಬಂಗಾರದ ಪದಕ ಹಲವಾರು ದಾಖಲೆಗಳಿಗೆ ಕಾರಣವಾಗಿದೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಲಭಿಸಿದ ಮೊದಲನೇ ಚಿನ್ನವಾಗಿ, ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ಕಮೊದಲನೇ ಬಂಗಾರದ ಪದಕವಾಗಿ, ಒಲಿಂಪಿಕ್ಸ್‌ನಲ್ಲಿ ಭಾರತದ ಪರ ವೈಯಕ್ತಿಕ ವಿಭಾಗದಲ್ಲಿ ಗೆದ್ದ ಎರಡನೇ ಪದಕವಾಗಿ, ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತಕ್ಕೆ ಬಂದ ಎರಡನೇ ಪದಕವಾಗಿ ಈ ಸಾಧನೆ ಗುರುತಿಸಿಕೊಂಡಿದೆ. ಭಾರತಕ್ಕೆ ಮೊದಲ ಬಾರಿಗೆ ಅಥ್ಲೆಟಿಕ್ಸ್‌ನಲ್ಲಿ ಪದಕ ಬಂದಿದ್ದು ಬ್ರಿಟಿಷ್-ಇಂಡಿಯನ್ ಅಥ್ಲೀಟ್ ನಾರ್ಮನ್ ಪ್ರಿಚರ್ಡ್ ಅವರಿಗೆ. 1900ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪ್ರಿಚರ್ಡ್ 200 ಮೀಟರ್ ಓಟ ಮತ್ತು 200 ಮೀಟರ್ ಹರ್ಡಲ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಇನ್ನು ಒಲಿಂಪಿಕ್ಸ್‌ನಲ್ಲಿ ಮೊದಲ ವೈಯಕ್ತಿಕ ಬಂಗಾರ ಗೆದ್ದ ಹಿರಿಮೆ ಶೂಟರ್ ಅಭಿನವ್ ಬಿಂದ್ರಾಗೆ ಸಲ್ಲುತ್ತದೆ. 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಬಿಂದ್ರಾ 10 ಮೀಟರ್ ಏರ್ ರೈಫಲ್‌ನಲ್ಲಿ ಬಂಗಾರ ಗೆದ್ದಿದ್ದರು.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತೀಯ ತಂಡ ಈ ಬಾರಿ ಅತೀ ಹೆಚ್ಚಿನ ಪದಕ ಗೆದ್ದು ಗಮನ ಸೆಳೆದಿದೆ. ಒಟ್ಟು 7 ಪದಕಗಳನ್ನು ಭಾರತ ಗೆದ್ದಿದ್ದು, ಇದರಲ್ಲಿ 1 ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕಗಳು ಸೇರಿವೆ. ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು 49 ಕೆಜಿ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ ಪದಕವನ್ನು ಮೊದಲ ಪದಕವಾಗಿ ಗೆದ್ದಿದ್ದರು. ಆ ಬಳಿಕ ಮಹಿಳಾ ಬ್ಯಾಡ್ಮಿಂಟನ್‌ನಲ್ಲಿ ಪಿವಿ ಸಿಂಧು ಕಂಚು ಗೆದ್ದರು. ಮಹಿಳಾ 69 ಕೆಜಿ ಬಾಕ್ಸಿಂಗ್‌ನಲ್ಲಿ ಲವ್ಲಿನಾ ಬೊರ್ಹೊಹೈನ್ ಮತ್ತೊಂದು ಕಂಚು ಸೇರಿಸಿದ್ದರು. ಆ ಬಳಿಕ ಪುರುಷರ ಹಾಕಿಯಲ್ಲೂ ಭಾರತಕ್ಕೆ ಕಂಚಿನ ಪದಕ ಒಲಿದಿತ್ತು. ಬಳಿಕ ನಡೆದ ಪುರುಷರ ರಸ್ಲಿಂಗ್ 57 ಕೆಜಿ ವಿಭಾಗದಲ್ಲಿ ಭಾರತದ ರವಿಕುಮಾರ್ ದಾಹಿಯಾ ಬೆಳ್ಳಿ ಜಯಿಸಿದ್ದರು. ಮತ್ತೊಂದು ಪಂದ್ಯದಲ್ಲಿ ಭಜರಂಗ್ ಪೂನಿಯಾ ಕೂಡ ಕಂಚು ಗೆದ್ದರು. ಕೊನೇಯದಾಗಿ ಭಾರತದ ಅಥ್ಲೀಟ್ ನೀರಜ್ ಚೋಪ್ರಾಗೆ ಜಾವೆಲಿನ್ ಥ್ರೋನಲ್ಲಿ ಬಂಗಾರ ಲಭಿಸಿತ್ತು.

Story first published: Wednesday, August 11, 2021, 1:25 [IST]
Other articles published on Aug 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X