Skating World Championship: ಇತಿಹಾಸ ಬರೆದ ಭಾರತದ ಆನಂದ್‌ಕುಮಾರ್
ಕ್ರೀಡಾ ಕ್ಷೇತ್ರದಲ್ಲಿ ಭಾರತೀಯ ಅಥ್ಲೀಟ್‌ಗಳು ಅಮೋಘ ಸಾಧನೆ ನೀಡುತ್ತಿದ್ದಾರೆ. ಚೀನಾದಲ್ಲಿ ನಡೆದ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 22 ವರ್ಷದ ಆನಂದ್ ಕುಮಾರ್ ವೇಲ್‌ಕುಮಾರ್ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಮೊದಲ ಭಾರತೀಯ ಎಂಬ ಹಿರಿಮೆಯನ್ನು ಆನಂದ್ ತಮ್ಮದಾಗಿಸಿಕೊಂಡಿದ್ದಾರೆ.
ಚೀನಾದಲ್ಲಿ ನಡೆದ ಪುರುಷರ ಸೀನಿಯರ್ 1000 ಮೀಟರ್ ಸ್ಪ್ರಿಂಟ್ ಸ್ಪರ್ಧೆಯ ಫೈನಲ್ ರೇಸ್‌ನಲ್ಲಿ ಆನಂದ್ ಕುಮಾರ್ ವೇಲ್‌ಕುಮಾರ್ ನಿಗದಿತ ದೂರವನ್ನು 1:24.924 ಸೆಕೆಂಡುಗಳಲ್ಲಿ ಕ್ರಮಿಸಿ ಬಂಗಾರ ತಮ್ಮದಾಗಿಸಿಕೊಂಡರು. ಅಲ್ಲದೆ ವಿಶ್ವ ಚಾಂಪಿಯನ್ ಪಟ್ಟವನ್ನು ಸಹ ಗೆದ್ದರು.

ಸೋಮವಾರ ಆನಂದ್ ಕುಮಾರ್ ಅವರು 500 ಮೀಟರ್ ಸ್ಪ್ರಿಂಟ್‌ನಲ್ಲಿ 43.072 ಸೆಕೆಂಡುಗಳ ಸಮಯವನ್ನು ತೆಗೆದುಕೊಂಡು ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರು. ಈ ಮೂಲಕ ಆನಂದ್ ಕುಮಾರ್ ವಿಶ್ವ ಚಾಂಪಿಯನ್ ಶಿಪ್‌ನಲ್ಲಿ ಭಾರತದ ಪರ ಮೊದಲ ಸೀನಿಯರ್ ಪದಕವನ್ನು ಗೆದ್ದರು. ಸೋಮವಾರ ಸಂಜೆಯ ನಡೆದಿದ್ದ ಜೂನಿಯರ್ ವಿಭಾಗದಲ್ಲಿ ಭಾರತದ ಕ್ರಿಶ್ ಶರ್ಮಾ 1000 ಮೀಟರ್ ಸ್ಪ್ರಿಂಟ್‌ನಲ್ಲಿ ಚಿನ್ನದ ಸಾಧನೆ ಮಾಡಿದ್ದರು. ಈ ಟೂರ್ನಿಯಲ್ಲಿ ಭಾರತ ಡಬಲ್ ಚಿನ್ನದ ಸಾಧನೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದೆ.
ಆನಂದ್ ಕುಮಾರ್ ವೇಲ್‌ಕುಮಾರ್ ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಪ್ರತಿಭೆ. ಈ ವರ್ಷದ ಆರಂಭದಲ್ಲಿ ನಡೆದ ವಿಶ್ವ ಕ್ರೀಡಾಕೂಟದಲ್ಲಿ 1000 ಮೀಟರ್ ಸ್ಪ್ರಿಂಟ್‌ನಲ್ಲಿ ಅವರು ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. ಈ ಪದಕವು ರೋಲರ್ ಕ್ರೀಡೆಗಳಲ್ಲಿ ಭಾರತ ಜಯಿಸಿದ ಮೊದಲ ಪದಕ. ಈ ಮೂಲಕ ಆನಂದ್ ಕುಮಾರ್ ತಮ್ಮ ಸಾಧನೆಯ ಜೊತೆಗೆ ವಿಶ್ವ ಮಟ್ಟದಲ್ಲಿ ದೇಶಕ್ಕೂ ಹೆಮ್ಮೆಯನ್ನು ತಂದಿದ್ದಾರೆ.
ಪ್ರಧಾನಿ ಮೋದಿ ಅಭಿನಂದನೆ
ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನ ಆನಂದ್ ಕುಮಾರ್‌ರೆ ಪ್ರಧಾನಿ ನರೇಂದ್ರ ಮೋದಿ ಸಹ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಆನಂದ್ ಕುಮಾರ್ ತಾಳ್ಮೆ, ವೇಗ ಮತ್ತು ಉತ್ಸಾಹ ಅವರನ್ನು ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ ಮಾಡಿದೆ. ಅವರ ಸಾಧನೆಯು ಅಸಂಖ್ಯಾತ ಯುವಕರಿಗೆ ಸ್ಫೂರ್ತಿ ನೀಡುತ್ತದೆ. ಆನಂದ್ ಕುಮಾರ್ ಅವರಿಗೆ ಅಭಿನಂದನೆಗಳು ಎಂದು ಮೋದಿ ಬರೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications