Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯನ್ ಓಪನ್‌ನಲ್ಲಿ ಸೆರೆನಾಗೆ ಸೋಲು

ಮೆಲ್ಬೋರ್ನ್, ಜನವರಿ 30 : ಆಸ್ಟ್ರೇಲಿಯನ್ ಓಪನ್ ಟೆನಿಸ್ ಗ್ರ್ಯಾಂಡ್ ಸ್ಲಾಮ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್‌ ಒನ್‌ ಆಟಗಾರ್ತಿ ಸೆರೆನಾ ವಿಲಿಯಮ್ಸ್‌ ಸೋಲು ಅನುಭವಿಸಿದ್ದಾರೆ. ಕೃಷ್ಣ ಸುಂದರಿ ಸೆರೆನಾ ಅವರನ್ನು ಸೋಲಿಸಿದ ಜರ್ಮನಿಯ ಏಂಜಲಿಕ್ ಕೆರ್ಬರ್ ಅವರು ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.

ಶನಿವಾರ ಮೆಲ್ಬೋರ್ನ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಏಂಜಲಿಕ್ ಅವರು ಸೆರೆನಾ ವಿಲಿಯಮ್ಸ್ ಅವರನ್ನು 6-4,3-6, 6-5 ಸೆಟ್‌ಗಳಿಂದ ಸೋಲಿಸಿದರು. ಒಂದು ವೇಳೆ ಸೆರೆನಾ ಅವರು ಗೆಲುಸು ಸಾಧಿಸಿದ್ದರೆ 22ನೇ ಗ್ರ್ಯಾನ್‌ ಸ್ಲಾಮ್ ಪ್ರಶಸ್ತಿಯನ್ನು ಪಡೆದಂತಾಗುತ್ತಿತ್ತು. [ಆಸ್ಟ್ರೇಲಿಯನ್ ಓಪನ್ ನಿಂದ ರಫೆಲ್ ನಡಾಲ್ ಹೊರಕ್ಕೆ]

serena williams

ಕ್ವಾರ್ಟರ್ ಫೈನಲ್‌ನಲ್ಲಿ ರಷ್ಯಾದ ಬೆಡಗಿ ಮರಿಯಾ ಶರಪೋವಾ ಅವರ ವಿರುದ್ಧ ಗೆಲುವು ಸಾಧಿಸಿದ್ದ ಸೆರೆನಾ ಅವರು ಫೈನಲ್‌ ಪಂದ್ಯದಲ್ಲಿಯೂ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿತ್ತು. ಆದರೆ, ಉತ್ತಮವಾಗಿ ಆಡಿದ ಏಂಜಲಿಕ್ ಅವರು, ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.[ಆಸ್ಟ್ರೇಲಿಯನ್ ಓಪನ್ ಗೆದ್ದ ಸಾನಿಯಾ-ಮಾರ್ಟಿನಾ ಜೋಡಿ]

1999ರ ನಂತರ ಇದೇ ಮೊದಲ ಬಾರಿಗೆ ಜರ್ಮನ್‌ ವನಿತೆಯೊಬ್ಬರು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಜರ್ಮನಿಯ ಸ್ಟೆಫಿ ಗ್ರಾಫ್ ಅವರು 1999ರಲ್ಲಿ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದಿದ್ದರು.

angelique kerber

ಅಂದಹಾಗೆ ಶುಕ್ರವಾರ ಭಾರತದ ಸಾನಿಯಾ ಮಿರ್ಜಾ ಮತ್ತು ಸ್ವಿಟ್ಜರ್‌ಲೆಂಡ್‌ನ ಮಾರ್ಟಿನಾ ಹಿಂಗಿಸ್ ಜೋಡಿ, ಗ್ರ್ಯಾಂಡ್‌ಸ್ಲಾಮ್‌ ಆಸ್ಟ್ರೇಲಿಯಾ ಓಪನ್‌ ಟೆನಿಸ್‌ ಟೂರ್ನಿಯ ಮಹಿಳೆಯರ ಡಬಲ್ಸ್‌ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದರು.

Story first published: Wednesday, January 3, 2018, 10:16 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+