For Quick Alerts
ALLOW NOTIFICATIONS  
For Daily Alerts

ಆಗಸ್ಟ್ 10: ಈಡನ್ ಗಾರ್ಡನ್‌ನಲ್ಲಿ ಬೆಂಕಿ; ಭಾರತದ ಜರ್ಸಿಯಲ್ಲಿ ಪಾಕ್ ಹೆಸರು!: ಕ್ರೀಡಾ ಲೋಕದ ಇಂದಿನ ಸುದ್ದಿ

* ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯವನ್ನು ಮತ್ತೊಂದು ಪಂದ್ಯವೆಂದು ಪರಿಗಣಿಸುವುದು ನಿರ್ಣಾಯಕ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಹೇಳಿದ್ದಾರೆ. ಇಲ್ಲದಿದ್ದರೆ ಆಟಗಾರರ ಮೇಲೆ ಒತ್ತಡ ಬೀಳಲಿದೆ ಎಂದು ಅಭಿಪ್ರಾಯಪಟ್ಟರು. ತಾವು ಆಡುವಾಗ, ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕೀನ್ಯಾ ವಿರುದ್ಧ ಸೋತರೂ ಆರಾಮವಾಗಿರುತ್ತಿದ್ದರು. ಆದರೆ ಪಾಕಿಸ್ತಾನ ವಿರುದ್ಧ ಸೋತರೆ ಕೋಪಿಸಿಕೊಳ್ಳುತ್ತಿದ್ದರು ಎಂದು ಮಾಜಿ ಭಾರತೀಯ ನಾಯಕ ಅನಿಲ್ ಕುಂಬ್ಳೆ ತಿಳಿಸಿದರು. (ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ)

* ಬುಧವಾರ ರಾತ್ರಿ ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದ ಡ್ರೆಸ್ಸಿಂಗ್‌ರೂಮ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ ಆತಂಕ ಮೂಡಿಸಿತ್ತು. ವಿಶ್ವಕಪ್ ಟೂರ್ನಿಯ ಸನಿಹದಲ್ಲಿ ಟೂರ್ನಿಯ ಆತಿಥ್ಯದ ತಾಣದಲ್ಲಿಯೇ ಈ ಘಟನೆರ ನಡೆದಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಆದರೆ ಈ ಘಟನೆಯ ಬಗ್ಗೆ ಕ್ರಿಕೆಟ್ ಅಸಿಸಿಯೇಶನ್ ಆಫ್ ಬೆಂಗಾಲ್(ಸಿಎಬಿ) ಅಧ್ಯಕ್ಷ ಸ್ನೇಹಾಶೀಷ್ ಗಂಗೂಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ. ವಿಶ್ವಕಪ್ 2023ರ ಆಯೋಜನೆಗೆ ನವೀಕರಣ ಕಾರ್ಯಗಳು ನಡೆಯುತ್ತಿರುವಾಗ ಆಗಸ್ಟ 9ರ ರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ ಕಾರಣ ಅಗ್ನಿ ನಿಯಂತ್ರಣಕ್ಕೆ ಬಂದಿತ್ತು. (ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ)

August 10, what happened in sports World: Todays Top sports news and headlines

* ಭಾರತೀಯ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ತಬ್ಬಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಬುಧವಾರ, ಆಗಸ್ಟ್ 9ರಂದು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಎದುರಾಳಿ ವಕೀಲರು ತಮ್ಮ ವಿರುದ್ಧ ಆರೋಪ ಹೊರಿಸುವಾಗ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮ್ಮ ವಕೀಲರ ಮೂಲಕ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರಿಗೆ ಹೇಳಿಕೆ ಸಲ್ಲಿಸಿದರು. (ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ)

* ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 2023ರ ಐಪಿಎಲ್ ಋತುವಿನಲ್ಲಿ ಗಾಯದ ಹಿನ್ನಡೆಯ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಮುಂಬರುವ ಐಸಿಸಿ ಪಂದ್ಯಾವಳಿಗಳಿಗೆ ಭಾರತ ತಂಡಕ್ಕೆ ಹಿಂದಿರುಗುವ ಮುನ್ಸೂಚನೆ ನೀಡಿದ್ದಾರೆ. ಸದ್ಯ ಕೆಎಲ್ ರಾಹುಲ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ಅವರು ಪುನರ್ವಸತಿಗೆ ಒಳಗಾಗಿದ್ದಾರೆ. ಕ್ರಿಕೆಟ್ ಮೈದಾನಕ್ಕೆ ರಾಹುಲ್ ಅವರ ಬಹುನಿರೀಕ್ಷಿತ ವಾಪಸಾತಿಯನ್ನು ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. (ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ)

* ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ಪಾಕಿಸ್ತಾನದ ಹೆಸರಿರುವ ಜರ್ಸಿಯಲ್ಲಿ ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲಿದೆ. ಹೌದು, ಟೀಮ್ ಇಂಡಿಯಾದ ಜರ್ಸಿಯಲ್ಲಿ ಪಾಕಿಸ್ತಾನದ ಹೆಸರು ಕೂಡ ಕಾಣಿಸಲಿದೆ. ಇದಕ್ಕೆ ಕಾರಣ ಈ ಬಾರಿಯ ಏಷ್ಯಾ ಕಪ್ ಟೂರ್ನಿಯ ಆತಿಥ್ಯವನ್ನು ಪಾಕಿಸ್ಥಾನ ವಹಿಸಿಕೊಳ್ಳುತ್ತಿದೆ. ಬಹುತೇಕ ಭಾಗ ಪಾಕಿಸ್ತಾನಕ್ಕಿಂತ ಹೊರಗೆ ಶ್ರೀಲಂಕಾದಲ್ಲಿ ಆಯೋಜನೆಯಾದರು ಪ್ರಾಥಮಿಕ ಆತಿಥ್ಯ ರಾಷ್ಟ್ರವಾಗಿ ಪಾಕಿಸ್ತಾನ ಇರುವುದೇ ಇದಕ್ಕೆ ಕಾರಣ. (ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ)

* ಸೆಪ್ಟೆಂಬರ್‌ನಲ್ಲಿ ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲಿರುವ 2023ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಚಿನ್ನದ ಪದಕ ಗೆಲ್ಲಲಿದೆ ಎಂದು ಭಾರತದ ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗಮನಾರ್ಹವಾಗಿ, 2022ರ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಮಹಿಳಾ ತಂಡವು ತಮ್ಮ ಚೊಚ್ಚಲ ಪಂದ್ಯಾವಳಿಯಲ್ಲಿ ಚಿನ್ನ ಗೆಲ್ಲಲು ವಿಫಲವಾಯಿತು, ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತು. (ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ)

* ಟೀಮ್ ಇಂಡಿಯಾ ಈ ಬಾರಿಯೂ ಕಳೆದ ಏಕದಿನ ವಿಶ್ವಕಪ್‌ನಲ್ಲಿ ಅನುಭವಿಸಿದ ಸಮಸ್ಯೆಯನ್ನೇ ಎದುರಿಸುತ್ತಿದೆ. ಈ ವಿಚಾರವನ್ನು ಸ್ವತಃ ನಾಯಕ ರೋಹಿತ್ ಶರ್ಮಾ ಕೂಡ ಈಗ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. 2019ರ ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾಗೆ ದೊಡ್ಡ ಸಮಸ್ಯೆಯಾಗಿ ಕಾಡಿದ್ದು 4ನೇ ಕ್ರಮಾಂಕ. ಅದಾದ ಬಳಿಕ ಶ್ರೇಯಸ್ ಐಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡದ ದೊಡ್ಡದೊಂದು ಸಮಸ್ಯೆಗೆ ಪರಹಾರ ರೂಪದಲ್ಲಿ ಕಾಣಿಸಿಕೊಂಡಿದ್ದರು. ಆದರೆ ವಿಶ್ವಕಪ್ ಟೂರ್ನಿಯ ಸನಿಹದಲ್ಲಿರುಆಗ ಶ್ರೇಯಸ್ ಐಯ್ಯರ್ ಗಾಯಕ್ಕೆ ತುತ್ತಾಗಿದ್ದು ಮತ್ತೆ ನಾಲ್ಕನೇ ಕ್ರಮಾಂಕದ ಬಗ್ಗೆ ದೊಡ್ಡ ಪ್ರಶ್ನೆಯನ್ನುಂಟು ಮಾಡಿದೆ.

* "ನೋಡಿ, 4ನೇ ಕ್ರಮಾಂಕದ ಸಮಸ್ಯೆ ನಮಗೆ ಬಹಳ ಕಾಲದಿಂದ ಇದೆ. ಯುವರಾಜ್ ಸಿಂಗ್ ಬಳಿಕ ಯಾರೂ ಕೂಡ ಅಲ್ಲಿ ಸ್ಥಿರವಾಗಿ ಉಳಿಯಲು ಸಾಧ್ಯವಾಗಿಲ್ಲ. ಆದರೆ ಶ್ರೇಯಸ್ ಐಯ್ಯರ್ ಸುದೀರ್ಘ ಕಾಲದಿಂದ ಆ ಕ್ರಮಾಂಕದಲ್ಲಿ ಆಡಿ ಉತ್ತಮವಾಗಿ ಪ್ರದರ್ಶನ ನೀಡಿದ್ದರು. ಅವರ ಅಂಕಿಅಂಶಗಳು ಬಹಳ ಉತ್ತಮವಾಗಿತ್ತು" ಎಂದಿದ್ದಾರೆ ನಾಯಕ ರೋಹಿತ್ ಶರ್ಮಾ. (ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ)

*ಏಷ್ಯನ್ ಗೇಮ್ಸ್‌ನಲ್ಲಿ ಭಾರತ ತಂಡದಲ್ಲಿ ಅವಕಾಶ ದೊರೆಯಬಹುದು ಎಂದು ನಿರೀಕ್ಷಿಸಿದ್ದೆ ಎಂದಿರುವ ಶಿಖರ್ ಧವನ್ ಅಲ್ಲಿ ಅವಕಾಶ ಇಲ್ಲ ಎಂದಾಗ ನನಗೆ ಸ್ವಲ್ಪ ಆಘಾತವಾಗಿದ್ದು ನಿಜ ಎಂದಿದ್ದಾರೆ. ಆದರೆ ಯುವ ಆಟಗಾರ ಋತುರಾಜ್ ಗಾಯಕ್ವಾಡ್‌ಗೆ ಭಾರತ ತಂಡವನ್ನು ಮುನ್ನಡೆಸುವುದಕ್ಕೆ ನನಗೆ ಖುಷಿಯಿದೆ. ಎಲ್ಲಾ ಯುವ ಆಟಗಾರರೇ ಇದ್ದಾರೆ ಎಲ್ಲರೂ ಉತ್ತಮವಾಗಿ ಆಡಲಿದ್ದಾರೆ ಎಂದು ಯುವ ಆಟಗಾರರ ಬಳಗಕ್ಕೆ ಶುಭಹಾರೈಸಿದ್ದಾರೆ ಶಿಖರ್ ಧವನ್. (ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ)

Story first published: Thursday, August 10, 2023, 23:57 [IST]
Other articles published on Aug 10, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+