For Quick Alerts
ALLOW NOTIFICATIONS  
For Daily Alerts

ಆಗಸ್ಟ್ 11: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಗೆಲುವು; 4ನೇ ಟಿ20 ಆಡಲು ಭಾರತ ಸಜ್ಜು: ಕ್ರೀಡಾ ಲೋಕದ ಇಂದಿನ ಸುದ್ದಿ

* ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತ ಅಮೋಘ ಗೆಲುವು ಸಾಧಿಸಿದೆ. ಜಪಾನ್ ವಿರುದ್ಧ ನಡೆದ ಸೆಮಿಫೈನಲ್ ಸೆಣೆಸಾಟದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಸಂಪೂರ್ಣ ಮೇಲುಗೈ ಸಾಧಿಸಿ ಏಕಪಕ್ಷೀಯ ಪ್ರದರ್ಶನ ನೀಡಿ ಗೆಲುವು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಜಪಾನ್ ತಂಡ ಭಾರತಕ್ಕೆ ಯಾವ ಹಂತದಲ್ಲಿಯೂ ಪ್ರತಿರೋಧವೊಡ್ಡಲು ವಿಫಲವಾಯಿತು. ಹೀಗಾಗಿ ಭಾರತ ತಂಡ ಅಮೋಘ 5-0 ಅಂತರದಿಂದ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರ ಆವೃತ್ತಿಯ ಫೈನಲ್‌ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಫೈನಲ್‌ನಲ್ಲಿ ಮಲೇಶಿಯಾ ತಂಡವನ್ನು ಎದುರಿಸಲಿದ್ದು ಚಾಂಪಿಯನ್ ಪಟ್ಟದ ಮೇಲೆ ಭಾರತ ಚಿತ್ತ ನೆಟ್ಟಿದೆ.

* ತಿಲಕ್ ವರ್ಮಾ ಅವರು ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲ ಮೂರು ಟಿ20 ಪಂದ್ಯಗಳಲ್ಲಿ 139 ರನ್ ಗಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅದ್ಭುತವಾಗಿ ಚೊಚ್ಚಲ ಪ್ರವೇಶ ಮಾಡಿದ್ದಾರೆ. ಮೊದಲ 3 ಪಂದ್ಯಗಳಲ್ಲಿ 172 ರನ್ ಗಳಿಸಿರುವ ದೀಪಕ್ ಹೂಡಾ ನಂತರ, ತಿಲಕ್ ವರ್ಮಾ ಈಗಾಗಲೇ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರನಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಕೊನೆಯ ಎರಡು ಪಂದ್ಯಗಳು ಈ ವಾರಾಂತ್ಯದಲ್ಲಿ ಯುಎಸ್‌ಎನ ಫ್ಲೋರಿಡಾದ ಫೋರ್ಟ್ ಲಾಡರ್‌ಡೇಲ್‌ನಲ್ಲಿ ನಡೆಯಲಿವೆ. ತಿಲಕ್ ವರ್ಮಾ ಅವರು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಬೃಹತ್ ದಾಖಲೆಯನ್ನು ಹಿಂದಿಕ್ಕುವ ಅವಕಾಶ ಹೊಂದಿದ್ದಾರೆ.

August 11, what happened in sports World: Todays Top sports news and headlines

* ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಹೈ-ವೋಲ್ಟೇಜ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸಾಂಪ್ರದಾಯಿಕ ಎದುರಾಳಿ ತಂಡಗಳು ಈ ಪಂದ್ಯದಲ್ಲಿ ಗೆಲುವನ್ನು ದಾಖಲಿಸಲು ಸಮಾನ ಉತ್ಸುಕವಾಗಿವೆ. ಇದೇ ವೇಳೆ ಪಾಕಿಸ್ತಾನದ ಮಾಜಿ ಬೌಲರ್ ಆಕಿಬ್ ಜಾವೇದ್ ಅವರು, ""ಉಭಯ ತಂಡಗಳ ನಡುವೆ ಪಾಕಿಸ್ತಾನ ತಂಡವು ಬಲಿಷ್ಠವಾಗಿದೆ ಮತ್ತು ಮುಂಬರುವ ಪಂದ್ಯದಲ್ಲಿ ಭಾರತ ತಂಡವನ್ನು ಸೋಲಿಸಲು ಪಾಕಿಸ್ತಾನಕ್ಕೆ ಉತ್ತಮ ಅವಕಾಶವಿದೆ. ಭಾರತದ ಮಣ್ಣಿಗೆ ತಕ್ಕಂತೆ ಅವರ ಫಿಟ್‌ನೆಸ್ ಮತ್ತು ಫಾರ್ಮ್‌ ಇಲ್ಲ,'' ಎಂದು ಆಕಿಬ್ ಜಾವೇದ್ ಹೇಳಿದರು.

* ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಶನಿವಾರ ನಡೆಯಲಿದೆ. ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಮೊದಲ ಮೂರು ಪಂದ್ಯಗಳ ಬಳಿಕ 1-2 ಅಂತರದಿಂದ ಹಿನ್ನಡೆಯಲ್ಲಿದೆ. ಹೀಗಾಗಿ ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ಟ್ರೋಫಿ ತನ್ನದಾಗಿಸಿಕೊಳ್ಳಬೇಕಿದ್ದರೆ ಉಳಿದ ಎರಡು ಪಂದ್ಯಗಳಲ್ಲಿಯೂ ಗೆಲ್ಲುವುದು ಅನಿವಾರ್ಯವಾಗಿದೆ. ಇನ್ನು ನಾಲ್ಕನೇ ಹಾಗೂ ಐದನೇ ಟಿ20 ಪಂದ್ಯಗಳು ಅಮೆರಿಕಾದ ಫ್ಲೋರಿಡಾದ ಮಿಯಾಮಿ ನಗರದಲ್ಲಿ ನಡೆಯಲಿದ್ದು ಪಂದ್ಯ ಕುತೂಹಲ ಮೂಡಿಸಿದೆ. ಹಾರ್ದಿಕ್ ಪಾಂಡ್ಯ ಪಡೆ ಸರಣಿಯ ಹಿನ್ನಡೆಯಿಂದ ಹೇಗೆ ಕಮ್‌ಬ್ಯಾಕ್ ಮಾಡಲಿದೆ ಎಂಬುದು ಕುತೂಹಲ ಮೂಡಿಸಿದ್ದು ಸಂಘಟಿತ ಪ್ರದರ್ಶನವನ್ನು ಟೀಮ್ ಇಂಡಿಯಾ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

* ಮುಂಬರುಯವ ಏಷ್ಯಾ ಕಪ್ ಹಾಗೂ ವಿಶ್ವಕಪ್ ಟೂರ್ನಿಗೆ ಶಕೀಬ್ ಅಲ್ ಹಸನ್ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ(ಬಿಸಿಬಿ) ಅಧ್ಯಕ್ಷ ನಜ್ಮುಲ್ ಹಸನ್ ಪಪೊನ್ ಢಾಕಾದ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಎರಡು ಮೆಗಾ ಟೂರ್ನಿಗಳಿಗೆ ಅಲ್ಲದೆ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಕದಿನ ಸರಣಿಯಲ್ಲಿಯೂ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.

* ಆಗಸ್ಟ್ 30ರಿಂದ ಸೆಪ್ಟೆಂಬರ್ 17ರವರೆಗೆ ನಡೆಯುವ ಮುಂಬರುವ 2023ರ ಏಷ್ಯಾ ಕಪ್ ಪಂದ್ಯಾವಳಿಗಾಗಿ ಬಾಬರ್ ಅಜಂ ನಾಯಕತ್ವದ 18 ಸದಸ್ಯರ ಪಾಕಿಸ್ತಾನ ತಂಡವನ್ನು ಬುಧವಾರ, ಆಗಸ್ಟ್ 9ರಂದು ಪ್ರಕಟಿಸಲಾಗಿದೆ. ಇನ್ನು ಏಷ್ಯಾ ಕಪ್‌ಗಾಗಿ ಪಾಕಿಸ್ತಾನ ತಂಡಕ್ಕೆ ಆಯ್ಕೆ ಮಾಡದಿರುವ ಬಗ್ಗೆ ವೇಗಿ ಶಹನವಾಜ್ ದಹಾನಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ದಹಾನಿ ಮತ್ತು ಶಾನ್ ಮಸೂದ್ ಏಷ್ಯಾ ಕಪ್ ಪಂದ್ಯಾವಳಿಗೆ ಆಯ್ಕೆಯಾಗಲಿಲ್ಲ. ಆದರೆ, ಆಲ್‌ರೌಂಡರ್ ಫಹೀಮ್ ಅಶ್ರಫ್ ಸುಮಾರು ಎರಡು ವರ್ಷಗಳ ನಂತರ ಪಾಕಿಸ್ತಾನ ತಂಡಕ್ಕೆ ಮರಳಿದ್ದಾರೆ.

* ಟೀಮ್ ಇಂಡಿಯಾ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈಗಾಗಲೇ ಭಾರತೀಯ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. ಇದೀಗ ಅವರ ಚಿತ್ತ ವಿದೇಶಿ ಲೀಗ್ ಕ್ರಿಕೆಟ್‌ನ ಮೇಲೆ ನೆಟ್ಟಿದ್ದು ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಲು ಸಜ್ಜಾಗಿದ್ದಾರೆ. ಮುಂಬರುವ ಸಿಪಿಎಲ್ ಆವೃತ್ತಿಯಲ್ಲಿ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತಗೊಂಡಿದೆ. ಮುಂದಿನ ಕೆರಿಬಿಯನ್ ಲೀಗ್ ಟೂರ್ನಿಯಲ್ಲಿ ಸೈಂಟ್ ಕಿಟ್ಸ್ ಆಂಡ್ ವೆವಿಸ್ ಪೇಟ್ರಿಯಾಟ್ಸ್ ತಂಡಕ್ಕೆ ಮಾರ್ಕ್ಯೂ ಆಟಗಾರನಾಗಿ ಒಪ್ಪಂದ ಮಾಡಿಕೊಂಡಿದ್ದಾರೆ ಹಿರಿಯ ಕ್ರಿಕೆಟಿಗ.

* ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಬೆನ್ನಲ್ಲೇ ಭಾರತ ತಂಡ ಐರ್ಲೆಂಡ್‌ಗೆ ಪ್ರವಾಸ ಕೈಗೊಂಡು ಟಿ20 ಸರಣಿಯಲ್ಲಿ ಭಾಗುಯಾಗಲಿದೆ. ಏಷ್ಯಾಕಪ್ ಹಾಗೂ ವಿಶ್ವಕಪ್ ದೃಷ್ಟಿಯಿಂದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಮೂರು ಪಂದ್ಯಗಳ ಟಿ20 ಸರಣಿಗೆ ಯುವ ಆಟಗಾರರಿಗೆ ಒಂದು ಅದ್ಭುತ ಅವಕಾಶವಾಗಿದೆ. ಸುದೀರ್ಘ ಕಾಲದಿಂದ ಗಾಯದ ಕಾರಣಕ್ಕೆ ತಂಡದಿಂದ ದೂರವಾಗಿದ್ದ ಜಸ್ಸಪ್ರೀತ್ ಬೂಮ್ರಾ ಈ ಸರಣಿಯ ಮೂಲಕ ಕಮ್‌ಬ್ಯಾಕ್ ಮಾಡಲಿದ್ದು ತಂಡದ ನಾಯಕತ್ವದ ಜವಾಬ್ಧಾರಿಯನ್ನು ಕೂಡ ಬೂಮ್ರಾಗೆ ನೀಡಲಾಗಿದೆ. ಈ ಸರಣಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹಾಗೂ ಅವರ ಕೋಚಿಂಗ್ ಸಿಬ್ಬಂದಿಗಳಿಗೆ ವಿಶ್ರಾಂತಿ ನೀಡಿ ಎನ್‌ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್‌ ಮಾರ್ಗದರ್ಶನದಲ್ಲಿ ಪ್ರವಾಸ ಕೈಗೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಹೊರಬಿದ್ದಿರುವ ಮಾಹಿತಿಯ ಪ್ರಕಾರ ಈ ಸರಣಿಗೆ ವಿವಿಎಸ್ ಲಕ್ಷ್ಮಣ್ ಕೂಡ ಹಿಂದೆಸರಿದಿದ್ದಾರೆ ಎನ್ನಲಾಗಿದೆ. ಹೀಗಾಗಿ ಆಗಸ್ಟ್ 18ರಿಂದ ಆರಂಬವಾಗಬೇಕಿರುವ ಸರಣಿಗೆ ಭಾರತ ಹೆಡ್‌ ಕೋಚ್ ಇಲ್ಲದೆಯೇ ಪ್ರಯಾಣಿಸಲಿದೆ ಎಂದು ವರದಿಯಾಗಿದೆ.

Story first published: Friday, August 11, 2023, 23:56 [IST]
Other articles published on Aug 11, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+