For Quick Alerts
ALLOW NOTIFICATIONS  
For Daily Alerts

ಆಗಸ್ಟ್ 17: ಅಮೆರಿಕಾದಲ್ಲಿ ದ್ರಾವಿಡ್ ಜೊತೆ ಜಯ್ ಶಾ ಮೀಟಿಂಗ್; ಐರ್ಲೆಂಡ್ ವಿರುದ್ಧ ಟಿ20 ಸರಣಿ : ಕ್ರೀಡಾ ಲೋಕದ ಇಂದಿನ ಸುದ್ದಿ

* ಮುಂಬರುವ ಪ್ರಮುಖ ಪಂದ್ಯಾವಳಿಗಳಿಗೆ ಭಾರತ ತಂಡದ ಸಿದ್ಧತೆಗಳ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆಯೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಮಿಯಾಮಿಯಲ್ಲಿ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

* ಆಗಸ್ಟ್ 30ರಿಂದ ಆರಂಭವಾಗಲಿರುವ 2023ರ ಏಷ್ಯಾ ಕಪ್ ಪಂದ್ಯಾವಳಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪುರುಷರ ಆಯ್ಕೆ ಸಮಿತಿಯು ಆಗಸ್ಟ್ 20ರ ಭಾನುವಾರದಂದು ಭಾರತ ತಂಡವನ್ನು ಪ್ರಕಟಿಸಲು ಸಿದ್ಧವಾಗಿದೆ. ಈಗಾಗಲೇ ಏಷ್ಯಾ ಕಪ್ 2023ರಲ್ಲಿ ಭಾಗವಹಿಸುವ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ತಂಡಗಳು ತಮ್ಮ 15 ಸದಸ್ಯರ ಅಂತಿಮ ತಂಡವನ್ನು ಪ್ರಕಟಿಸಿವೆ. ಆದರೆ, ಭಾರತ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳು ತಮ್ಮ ತಂಡವನ್ನು ಪ್ರಕಟಿಸಬೇಕಿದೆ.

August 17, what happened in sports World: Todays Top sports news and headlines

* ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಆತಿಥೇಯ ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಏಷ್ಯನ್ ತಂಡಗಳ ಪ್ರದರ್ಶನದ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಶೀದ್ ಲತೀಫ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಭಾರತ ತಂಡದ ನಾಯಕನಾಗಿ ಮುಂದುವರಿಯಲು ಅವಕಾಶ ನೀಡಿದ್ದರೆ, ಈ ಹೊತ್ತಿಗೆ ಭಾರತ ತಂಡವು ಏಕದಿನ ವಿಶ್ವಕಪ್‌ಗೆ 100 ಪ್ರತಿಶತ ಸಿದ್ಧವಾಗಿರುತ್ತಿತ್ತು ಎಂದು ಪಾಕಿಸ್ತಾನ ಮಾಜಿ ಕ್ರಿಕೆಟಿಗ ರಶೀದ್ ಲತೀಫ್ ತಿಳಿಸಿದರು

* ಶುಕ್ರವಾರ, ಆಗಸ್ಟ್ 18ರಿಂದ ಡಬ್ಲಿನ್‌ನಲ್ಲಿ ಆರಂಭವಾಗಲಿರುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಿದ್ದರೂ, ಮುಂಬರುವ 2023ರ ಏಷ್ಯಾ ಕಪ್ ಪಂದ್ಯಾವಳಿಗೆ ವಿಕೆಟ್ ಕೀಪರ್-ಬ್ಯಾಟರ್ ಆಯ್ಕೆಯಾಗುವ ಸಾಧ್ಯತೆಯಿಲ್ಲ ಎಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ವರದಿ ಮಾಡಿದೆ.

* ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳಲಿದ್ದು ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ವಿಶ್ವಕಪ್‌ಗೂ ಮುನ್ನ ನಡೆಯಲಿರುವ ಈ ಸರಣಿ ಬಾರತದಕ್ಕಿ ನಡೆಯಲಿರುವ ವಿಶ್ವಕಪ್‌ಗೆ ಸಿದ್ಧತೆಯ ಭಾಗವಾಗಿ ಆಯೋಜಿಸಲಾಗಿದೆ. ಕುತೂಹಲಕಾರಿ ಎಂದರೆ ನ್ಯೂಜಿಲೆಂಡ್ ತಂಡ 2013ರ ಬಳಿಕ ಇದೇ ಮೊದಲ ಬಾರಿಗೆ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದು ಭರ್ತಿ ಒಂದು ದಶಕದ ಬಳಿಕ ಏಷ್ಯಾದ ರಾಷ್ಟ್ರಕ್ಕೆ ಪ್ರಯಾಣಿಸಲಿದೆ.

* ಐರ್ಲೆಂಡ್ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಶುಕ್ರವಾರ ಮೊದಲ ಪಂದ್ಯವನ್ನಾಡಲಿದೆ. ಸರಣಿಯ ಮೂರು ಪಂದ್ಯಗಳು ಕೂಡ ಡಬ್ಲಿನ್‌ನ ಮಾಲೆಹೈಡ್‌ ಕ್ರಿಕೆಟ್ ಮೈದಾನದಲ್ಲಿ ಆಯೋಜನೆಯಾಗಲಿದ್ದು ಬೂಮ್ರಾ ನಾಯಕತ್ವದ ಯುವ ಆಟಗಾರರ ಪಡೆ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಈಗ ಸಾಕಷ್ಟು ಕುತೂಹಲ ಮೂಡಿಸಿದೆ.

* ರಿಂಕು ಸಿಂಗ್ ಸಾಕಷ್ಟು ನಿರೀಕ್ಷೆಯ ಬಳಿಕ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೂಲಕ ಭಾರತ ತಂಡಕ್ಕೆ ಪದಾರ್ಪಣೆ ಮಾಡಲು ಎದುರು ನೋಡುತ್ತಿದ್ದಾರೆ. ಈ ಅವಕಾಶದ ಬಗ್ಗೆ ರಿಂಕು ಸಿಂಗ್ ಮಾತನಾಡಿದ್ದು ಟೀಮ್ ಇಂಡಿಯಾದ ಜರ್ಸಿಯಲ್ಲಿ ತನ್ನ ಹೆಸರು ನೋಡುತ್ತಿರುವುದು ನನಗೆ ಅತ್ಯಂತ ಭಾವುಕವಾದ ಸಂದರ್ಭ ಎಂದಿದ್ದಾರೆ. ಗುರುವಾರದಂದು ಬಿಸಿಸಿಐ ತನ್ನ ವೆಬ್‌ಸೈಟ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಜಿತೇಶ್ ಶರ್ಮಾ ರಿಂಕು ಸಿಂಗ್ ಅವರನ್ನು ಸಂದರ್ಶನ ಮಾಡಿದ್ದಾರೆ. ಇದರಲ್ಲಿ ರಿಂಕು ಸಿಂಗ್ ತನ್ನ ಭಾವನೆ ವ್ಯಕ್ತಪಡಿಸಿದ್ದಾರೆ. ಈ ಸರಣಿಯಲ್ಲಿ ತನ್ನ ಕನಸು ನನಸಾಗುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ ರಿಂಕು ಸಿಂಗ್.

* ಯುವ ಕ್ರಿಕೆಟಿಗ ಪೃಥ್ವಿ ಶಾ ಇಂಗ್ಲೆಂಡ್‌ನ ರಾಯಲ್ ಲಂಡನ್ ಕಪ್ ಟೂರ್ನಿಯಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದಾರೆ. ಇಂಗ್ಲೆಂಡ್ ದೇಶೀಯ ಕ್ರಿಕೆಟ್‌ನಲ್ಲಿ ದಾಖಲೆಯ ದ್ವಿಶತಕ ಸಿಡಿಸಿದ ಪೃಥ್ವಿ ಶಾ ಮತ್ತೆ ಭರ್ಜರಿ ಫಾರ್ಮ್‌ಗೆ ಮರಳಿರುವುದನ್ನು ಭರ್ಜರಿಯಾಗಿ ಘೋಷಿಸಿದ್ದರು. ಆದರೆ ಅದಾದ ಬಳಿಕ ಗಾಯಕ್ಕೆ ತುತ್ತಾಗಿರುವುದು ಯುವ ಕ್ರಿಕೆಟಿಗನಿಗೆ ತೀವ್ರ ಹಿನ್ನಡೆಯುಂಟು ಮಾಡಿದೆ. ಇದೀಗ ಮುಂಬರುವ ದೇಶೀಯ ಆವೃತ್ತಿಗೆ ಅಲಭ್ಯವಾಗುವುದು ಬಹುತೇಕ ಖಚಿತವಾಗಿದೆ.

Story first published: Thursday, August 17, 2023, 23:54 [IST]
Other articles published on Aug 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+