For Quick Alerts
ALLOW NOTIFICATIONS  
For Daily Alerts

ಆಗಸ್ಟ್ 18: ಐರ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು; ದ್ಯುತಿ ಚಾಂದ್‌ಗೆ 4 ವರ್ಷ ನಿಷೇಧ ಶಿಕ್ಷೆ!: ಕ್ರೀಡಾ ಲೋಕದ ಇಂದಿನ ಸುದ್ದಿ

* ಭಾರತ ಹಾಗೂ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಡಕ್ವರ್ತ್ ಲೂಯಿಸ್ ನಿಯಮದಲ್ಲಿ ಕೇವಲ ಎರಡು ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು. ಮೊದಲ ಇನ್ನಿಂಗ್ಸ್‌ನ ಆಟಕ್ಕೆ ಮಳೆ ಯಾವುದೇ ರೀತಿಯಲ್ಲಿಯೂ ಅಡ್ಡಿಯುಂಟು ಮಾಡಿರಲಿಲ್ಲ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 6.5 ಓವರ್‌ಗಳ ಆಟಕ್ಕೆ ಮಾತ್ರವೇ ಅವಕಾಶ ಮಾಡಿಕೊಟ್ಟಿತು. ಹೀಗಾಗಿ ಡಿಎಲ್‌ ನಿಯಮದ ಆಧಾರದಲ್ಲಿ ಪಂದ್ಯದ ಫಲಿತಾಂಶವನ್ನು ಕಂಡುಕೊಳ್ಳಬೇಕಾಯಿತು.

* ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸದ್ಯ ಸಾರ್ವಕಾಲಿಕ ಕ್ರಿಕೆಟಿಗರಲ್ಲಿ ಒಬ್ಬರು. ತಮ್ಮ ಆಟ, ದಾಖಲೆ ಮುರಿಯುವಿಕೆ ಮತ್ತು ಫಿಟ್‌ನೆಸ್‌ನಿಂದಾಗಿ ವಿಶ್ವದಲ್ಲಿಯೇ ಮುಂಚೂಣಿ ಸ್ಥಾನದಲ್ಲಿದ್ದಾರೆ. ಭಾರತ ತಂಡದ ಪ್ರಮುಖ ಬ್ಯಾಟರ್ ಆಗಿರುವ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇಂದಿಗೆ 15 ವರ್ಷ ಪೂರೈಸಿದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 18, 2008ರಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪ್ರವೇಶ ಮಾಡಿದರು ಮತ್ತು ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ತಮ್ಮ ಚೊಚ್ಚಲ ಪಂದ್ಯವನ್ನು ಆಡಿದರು. ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದ 15ನೇ ವಾರ್ಷಿಕೋತ್ಸವ ಆಚರಿಸುತ್ತಿರುವಾಗ ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನಕ್ಕೆ ಎಂದೆಂದಿಗೂ ಕೃತಜ್ಞರಾಗಿರುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

August 18, what happened in sports World: Todays Top sports news and headlines

* ರಾಷ್ಟ್ರೀಯ ದಾಖಲೆ ಹೊಂದಿರುವ ಭಾರತದ ಓಟಗಾರ್ತಿ ದ್ಯುತಿ ಚಾಂದ್ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ನಾಲ್ಕು ವರ್ಷಗಳ ನಿಷೇಧಕ್ಕೆ ಗುರಿಯಾಗಿದ್ದಾರೆ. 2021ರ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ 4 ರಲ್ಲಿ 11.17 ಸೆಕೆಂಡ್‌ಗಳಲ್ಲಿ 100 ಮೀ ಓಡಿ ದ್ಯುತಿ ಭಾರತದಲ್ಲಿ ಹೊಸ ಮಹಿಳಾ ದಾಖಲೆಯನ್ನು ಬರೆದಿದ್ದರು. ಈ ನಿಷೇಧವು ಜನವರಿ 3, 2023 ರಿಂದ ಪ್ರಾರಂಭವಾಗುತ್ತದೆ ಮತ್ತು ಮಾದರಿ ಸಂಗ್ರಹಣೆಯ ದಿನಾಂಕ ಡಿಸೆಂಬರ್ 5, 2022ರ ಬಳಿಕ ದ್ಯುತಿ ಚಾಂದ್ ಪಡೆದ ಎಲ್ಲಾ ಸ್ಪರ್ಧಾತ್ಮಕ ಫಲಿತಾಂಶಗಳನ್ನು ಅನರ್ಹಗೊಳಿಸಲಾಗುತ್ತದೆ.

* ಅಕ್ಟೋಬರ್ 5ರಿಂದ ಭಾರತದಲ್ಲಿ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದ್ದು, ಇದಕ್ಕೆ ಪೂರ್ವ ತಯಾರಿಯಾಗಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ವೈಟ್‌ಬಾಲ್ ಸರಣಿ ಆಡಲಿದೆ. ಇದೇ ವೇಳೆ ಸ್ಟಾರ್ ಬ್ಯಾಟರ್ ಸ್ಟೀವನ್ ಸ್ಮಿತ್ ಮತ್ತು ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಅವರು ಗಾಯದ ಕಾರಣದಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾದ ವೈಟ್-ಬಾಲ್ ಪ್ರವಾಸದಲ್ಲಿ ಆಡುವುದಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಶುಕ್ರವಾರ, ಆಗಸ್ಟ್ 18ರಂದು ಖಚಿತಪಡಿಸಿದೆ. 2023ರ ವಿಶ್ವಕಪ್ ಪಂದ್ಯಾವಳಿಗೂ ಮುನ್ನ ಈ ಸುದ್ದಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ದೊಡ್ಡ ಹೊಡೆತವಾಗಿದೆ.

* ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಪುರುಷರ ಹಿರಿಯ ಆಯ್ಕೆ ಸಮಿತಿಯು ಸೋಮವಾರ, ಆಗಸ್ಟ್ 21ರಂದು ನವದೆಹಲಿಯಲ್ಲಿ ಮಹತ್ವದ ಸಭೆ ಸೇರಲಿದೆ. ಈ ವೇಳೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಆಗಸ್ಟ್ 30ರಿಂದ ಆರಂಭವಾಗಲಿರುವ 2023ರ ಏಷ್ಯಾ ಕಪ್ ಪಂದ್ಯಾವಳಿಗೆ ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಲಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೂಡ ನವದೆಹಲಿಯಲ್ಲಿ ನಡೆಯಲಿರುವ ಬಿಸಿಸಿಐ ಆಯ್ಕೆ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

* ಮಹಾರಾಜ ಟ್ರೋಫಿಯ 12ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮಂಗಳೂರು ಡ್ರ್ಯಾಗನ್ಸ್ ತಂಡಗಳು ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತೊಂದು ಸೋಲು ಕಂಡಿದೆ. ಮಂಗಳೂರು ಡ್ರ್ಯಾಗನ್ಸ್ ತಮಡ ಬ್ಯಾಟಿಂಗ್‌ನಲ್ಲೊ ಅದ್ಭುತ ಯಶಸ್ಸು ಸಾಧಿಸಿದ್ದು ಬೌಲಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನಿಡಿದ ಕಾರಣದಿಂದಾಗಿ 23 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಡ್ರ್ಯಾಗನ್ಸ್ ಪರವಾಗಿ ಸಿದ್ಧಾರ್ಥ್ ಅಮೋಘ ಶತಕ ಸಿಡಿಸಿ ಗಮನಸೆಳೆದರು.

Story first published: Friday, August 18, 2023, 23:55 [IST]
Other articles published on Aug 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+