Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಗಸ್ಟ್ 21: ಏಷ್ಯಾಕಪ್‌ಗೆ ಟೀಮ್ ಇಂಡಿಯಾ ಆಯ್ಕೆ: ತಂಡದ ಬಗ್ಗೆ ರೋಹಿತ್ ಹೇಳಿಕೆ: ಕ್ರೀಡಾ ಲೋಕದ ಇಂದಿನ ಸುದ್ದಿ

* ಏಷ್ಯಾಕಪ್ ಟೂರ್ನಿಯ ಆರಂಭಕ್ಕೆ ಇನ್ನು ಬೆರಳೆಣಿಕೆಯ ದಿನಗಳು ಮಾತ್ರವೇ ಬಾಕಿಯಿದೆ. ಇದೀಗ ಬಿಸಿಸಿಐ ಆಯ್ಕೆ ಸಮಿತಿ ಟೀಮ್ ಇಂಡಿಯಾದ ಸ್ಕ್ವಾಡ್ ಪ್ರಕಟಿಸಿದೆ. ರೋಹಿತ್ ಶರ್ಮಾ ನೇತೃತ್ವದಲ್ಲಿ 17 ಆಟಗಾರರ ಬಳಗವನ್ನು ಅಂತಿಮಗೊಳಿಸಲಾಗಿದ್ದು ನಂತರ ತಂಡವನ್ನು ಪ್ರಕಟಿಸಲಾಗಿದೆ. ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್, ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ಜೊತೆಗೆ ಬಿಸಿಸಿಐ ಕಾರ್ಯದರ್ಶಿ ಕೂಡ ಆಯ್ಕೆ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು.

* ಇನ್ನು ಟೀಮ್ ಇಂಡಿಯಾ ಆಯ್ಕೆಯಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ಪ್ರಶ್ನೆಯೆಂದರೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಐಯ್ಯರ್ ಕಮ್‌ಬ್ಯಾಕ್. ಇಬ್ಬರು ಆಟಗಾರರು ಗಾಯಗೊಂಡು ಚೇತರಿಸಿಕೊಂಡಿದ್ದರೂ ಮ್ಯಾಚ್ ಫಿಟ್‌ನೆಸ್ ಬಗ್ಗೆ ಅನುಮಾನಗಳು ಮೂಡಿದ್ದವು. ಇದೀಗ ಎಲ್ಲಾ ಈ ಇಬ್ಬರು ಆಟಗಾರರು ಆಯ್ಕೆಯಾಗುವ ಮೂಲಕ ತಂಡಕ್ಕೆ ಬಲಬಂದಂತಾಗಿದೆ. ಈ ಮೂಲಕ ನಾಲ್ಕನೇ ಕ್ರಮಾಂಕದ ಪ್ರಶ್ನೆಗೂ ಉತ್ತರ ದೊರೆತಿದೆ.

August 21, what happened in sports World: Todays Top sports news and headlines

* ರೋಹಿತ್ ಶರ್ಮಾ, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.

* ಫಿಫಾ ಮಹಿಳಾ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಸ್ಪೇನ್‌ 1-0 ಗೋಲುಗಳಿಂದ ಇಂಗ್ಲೆಂಡ್‌ ತಂಡವನ್ನು ಮಣಿಸಿ, ಇತಿಹಾಸ ನಿರ್ಮಿಸಿದೆ. ಭಾನುವಾರ ಸಿಡ್ನಿ ಒಲಿಂಪಿಕ್ ಸ್ಟೇಡಿಯಂನಲ್ಲಿ ನಡೆದ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಸ್ಪೇನ್‌ ಭರ್ಜರಿ ಪ್ರದರ್ಶನ ನೀಡಿತು. ಸ್ಪೇನ್‌ ಇದೇ ಮೊದಲ ಬಾರಿಗೆ ಫಿಫಾ ಮಹಿಳಾ ವಿಶ್ವಕಪ್ ಗೆದ್ದು ಇತಿಹಾಸ ಬರೆಯಿತು. ಸ್ಪೇನ್ ಪರ 29ನೇ ನಿಮಿಷದಲ್ಲಿ ನಾಯಕಿ ಓಲ್ಗಾ ಕಾರ್ಮೋನಾ ಸೊಗಸಾದ ಗೋಲು ಬಾರಿಸಿದರು. ಈ ಜಯದೊಂದಿಗೆ ಕಳೆದ ವರ್ಷ ಯುರೋಪಿಯನ್ ಚಾಂಪಿಯನ್‌ಶಿಪ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಸೋಲಿಗೆ ಸ್ಪೇನ್ ತಂಡ ಸೇಡು ತೀರಿಸಿಕೊಂಡಿತು. ಅಂತಿಮ ಪಂದ್ಯದಲ್ಲಿ, ಸ್ಪೇನ್ ಇಂಗ್ಲೆಂಡ್‌ಗಿಂತ ಮಿಡ್‌ಫೀಲ್ಡ್‌ನಲ್ಲಿ ಹೆಚ್ಚಿನ ನಿಯಂತ್ರಣವನ್ನು ಕಾಯ್ದುಕೊಂಡಿತು. ಇಂತಹ ಪರಿಸ್ಥಿತಿಯಲ್ಲಿ ಇಂಗ್ಲೆಂಡ್‌ಗೆ ಗೋಲು ಗಳಿಸುವಷ್ಟು ಅವಕಾಶಗಳು ಸಿಗಲಿಲ್ಲ.

* ಯುಜುವೇಂದ್ರ ಚಾಹಲ್ ಅವರ ಹೆಸರು ಏಷ್ಯಾಕಪ್‌ಗೆ ಆಯ್ಕೆ ಮಾಡಿರುವ ತಂಡದಲ್ಲಿ ಇಲ್ಲದಿರುವುದು ಬಹುತೇಕರಿಗೆ ಅಚ್ಚರಿಯುಂಟು ಮಾಡಿದೆ. ಅನುಭವಿ ಸ್ಪಿನ್ನರ್ ವೈಟ್‌ಬಾಲ್ ಮಾದರಿಯಲ್ಲಿ ಭಾರತ ತಂಡಕ್ಕೆ ಯಾವಾಗಲೂ ಬಲ ನೀಡಬಲ್ಲ ಕ್ರಿಕೆಟಿಗ. ಹಾಗಿದ್ದರೂ ಏಷ್ಯಾಕಪ್‌ನಲ್ಲಿ ಯಾವ ಕಾರಣಕ್ಕಾಗಿ ಚಾಹಲ್‌ಗೆ ಅವಕಾಶವಿಲ್ಲ ಎಂಬುದರ ಬಗ್ಗೆ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ. "ನಾವು ಆಫ್ ಸ್ಪಿನ್ನರ್ ಬಗ್ಗೆ ಸಾಕಷ್ಟು ಚರ್ಚೆಗಳನ್ನು ನಡೆಸಿದೆವು. ಜೊತೆಗೆ ಲೆಗ್ ಸ್ಪಿನ್ನರ್ ಬಗ್ಗೆ ಕೂಡ. ಹೆಚ್ಚು ಹಿನ್ನಡೆಯುಂಟು ಮಾಡುವುದು ಎಲ್ಲಿ ಎಂದಾಗ 8 ಹಾಗೂ 9ನೇ ಕ್ರಮಾಂಕದಲ್ಲಿ. ಆ ಸ್ಥಾನದಲ್ಲಿ ಬ್ಯಾಟಿಂಗ್ ಕೂಡ ನಡೆಸಬಲ್ಲ ಸಾಮರ್ಥ್ಯ ಹೊಂದಿರುವ ಆಟಗಾರನನ್ನು ಬಯಸಿದ್ದೆವು. ಹಾಗಾಗಿ ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಿದ್ದು ಅವರು ಈ ವರ್ಷ ವಯಟ್‌ಬಾಲ್ ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ನಲ್ಲಿಯೂ ಉತ್ತಮವಾಗಿ ಪ್ರದರ್ಶನ ನೀಡಿದ್ದಾರೆ" ಎಂದಿದ್ದಾರೆ ರೋಹಿತ್ ಶರ್ಮಾ.

* 15ನೇ ಬ್ರಿಕ್ಸ್ (BRICS) ಶೃಂಗ ಸಭೆಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ, ಆಗಸ್ಟ್ 22ರಂದು ದಕ್ಷಿಣ ಆಫ್ರಿಕಾಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತಕಥೆಗಳಾದ ಗ್ಯಾರಿ ಕರ್ಸ್ಟನ್ ಮತ್ತು ಜಾಂಟಿ ರೋಡ್ಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶಕ್ಕೆ ಸ್ವಾಗತಿಸುವ ವಿಡಿಯೋ ಸಂದೇಶಗಳನ್ನು ಬಿಡುಗಡೆ ಮಾಡಿದ್ದಾರೆ.

Story first published: Monday, August 21, 2023, 21:40 [IST]
Other articles published on Aug 21, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+