ಆಗಸ್ಟ್ 25: ಮತ್ತೊಂದು ಐತಿಹಾಸಿಕ ಪದಕದತ್ತ ನೀರಜ್ ಚೋಪ್ರ; WWE ಮಾಜಿ ಚಾಂಪಿಯನ್ ನಿಧನ: ಕ್ರೀಡಾ ಲೋಕದ ಇಂದಿನ ಸುದ್ದಿ
* ಸೃಜನಶೀಲ ಕುಸ್ತಿ ಪಟು ಬ್ರೇ ವ್ಯಾಟ್ ತಮ್ಮ 36ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. WWE ಮುಖ್ಯ ಕಂಟೆಂಟ್ ಅಧಿಕಾರಿಯಾಗಿರುವ ಟ್ರಿಪಲ್ ಹೆಚ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ. ವ್ಯಾಟ್ ಅವರ ನಿಜವಾದ ಹೆಸರು ವಿಂಡ್‌ಹ್ಯಾಮ್ ರೊಟುಂಡಾ. ಡಬ್ಲ್ಯುಡಬ್ಲ್ಯುಇ ಕಣದಲ್ಲಿ ಸೃಜನಶೀಲ ಪಾತ್ರಗಳೊಂದಿಗೆ ಜನರಿಗೆ ಮತ್ತಷ್ಟು ಹತ್ತಿರವಾಗಿದ್ದರು.
* ಏಷ್ಯಾಕಪ್ ಟೂರ್ನಿಗೆ ದಿನಗಣನೆ ಇರುವಾಗ ಟೀಮ್ ಇಂಡಿಯಾ ಆಟಗಾರರು ಬೆಂಗಳೂರಿನ ಎನ್‌ಸಿಎನಲ್ಲಿ ತರಬೇತಿ ಶಿಬಿರದಲ್ಲಿ ಭಾಗಿಯಾಗಿದ್ದಾರೆ. ಟೀಮ್ ಇಂಡಿಯಾದ ಕ್ರಿಕೆಟ್ ಆಟಗಾರರ ಫಿಟ್‌ನೆಸ್ ಪರೀಕ್ಷೆಯ ಮಾನದಂಡವಾಗಿರುವ ಯೋ ಯೋ ಪರೀಕ್ಷೆಯನ್ನು ಏಷ್ಯಾಕಪ್ ಟೂರ್ನಿಗೂ ಮುನ್ನ ನಡೆಸಲಾಗಿದೆ. ಗುರುವಾರ ವಿರಾಟ್ ಕೊಹ್ಲಿ ಈ ಯೋ ಯೋ ಟೆಸ್ಟ್‌ನಲ್ಲಿ ಭಾಗಿಯಾಗಿದ್ದರು. ಆದರೆ ಅದಾದ ಬಳಿಕ ವಿರಾಟ್ ಕೊಹ್ಲಿ ತಮ್ಮ ಯೋ ಯೋ ಪರೀಕ್ಷೆಯ ಅಂಕಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ವಿರಾಟ್ ಕೊಹ್ಲಿಯ ಈ ನಡೆಗೆ ಬಿಸಿಸಿಐ ಅಸಮಾಧಾನಗೊಂಡಿದೆ.

* ಏಷ್ಯಾ ಕಪ್‌ನಲ್ಲಿ ಕಣಕ್ಕಿಳಿಯಲಿರುವ ಪಾಕಿಸ್ತಾನ ತಂಡ ಅತ್ಯಂತ ಬಲಿಷ್ಠವಾದ ತಂಡವಾಗಿದೆ ಎಂದಿರುವ ಸೌರವ್ ಗಂಗೂಲಿ ಭಾರತ ಕೂಡ ಎಂದುನಂತೆಯೇ ಬಲಿಷ್ಠವಾಗಿ ಕಣಕ್ಕಿಳಿಯುತ್ತಿದೆ ಎಂದಿದ್ದಾರೆ. ಹೀಗಾಗಿ ಈ ಮುಖಾಮುಖಿಯಲ್ಲಿ ಯಾವ ತಂಡ ಗೆಲುವು ಸಾಧಿಸಲಿದೆ ಎನ್ನುವುದು ಹೇಳುವುದು ಕಷ್ಟ ಎಂದಿದ್ದಾರೆ ಸೌರವ್ ಗಂಗೂಲಿ. "ಏಷ್ಯಾಕಪ್‌ನಲ್ಲಿ ಯಾವ ತಂಡ ಗೆಲ್ಲಲಿದೆ ಎನ್ನುವುದು ಬಹಳ ಕಷ್ಟ. ಯಾರು ಬೇಕಾದರೂ ಗೆಲ್ಲಬಹುದು. ಎರಡು ತಂಡಗಳು ಕೂಡ ಉತ್ತಮವಾಗಿದೆ. ಪಾಕಿಸ್ತಾನ ತಂಡ ಕೂಡ ಉತ್ತಮವಾದ ತಂಡವಾಗಿದೆ. ಭಾರತ ಖಂಡಿತವಾಗಿಯೂ ಬಲಿಷ್ಠವಾದ ತಂಡ" ಎಂದಿದ್ದಾರೆ ಸೌರವ್ ಗಂಗೂಲಿ.
* ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿದ ಕೋವಿಡ್ ವೈರಸ್ ಕ್ರೀಡಾಲೋಕದಲ್ಲಿಯೂ ಸಾಕಷ್ಟು ದೊಡ್ಡ ಮಟ್ಟದಲ್ಲಿ ಕೆಟ್ಟ ಪರಿಣಾಮವನ್ನುಂಟು ಮಾಡಿತ್ತು. ಇದೀಗ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಆರಂಭಕ್ಕೆ ಬೆರಳೆಣಿಕೆಯ ದಿನಗಳು ಮಾತ್ರವೇ ಇರುವಾಗ ಮತ್ತೆ ಕೋವಿಡ್ ಆತಂಕ ಮೂಡಿಸಿದೆ. ಶ್ರೀಲಂಕಾದ ಇಬ್ಬರು ಆಟಗಾರರಿಗೆ ಕೊರೊನಾ ದೃಢಪಟ್ಟಿದೆ ಎಂದು ವರದಿಯಾಗಿದೆ. ಮೂಲಗಳ ಮಾಹಿತಿಯ ಪ್ರಕಾರ ಶ್ರೀಲಂಕಾದ ಆರಂಭಿಕ ಆಟಗಾರ ಅವಿಷ್ಕಾ ಫೆರ್ನಾಂಡೋ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಕುಸಾಲ್ ಪೆರೆರ ಇಬ್ಬರಿಗೆ ಕೂಡ ಕೊರೊನಾವೈರಸ್ ದೃಢಪಟ್ಟಿದೆ ಎನ್ನಲಾಗಿದೆ. ಇಬ್ಬರು ಕೂಡ ಚಿಕಿತ್ಸೆಗೆ ಒಳಪಟ್ಟಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
* ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಸ್‌ಶಿಪ್‌ನ ಅರ್ಹತಾ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ನಿರೀಕ್ಷೆಯಂತೆಯೇ ನೀರಜ್ ಚೋಪ್ರ ಮೊದಲ ಯತ್ನದಲ್ಲಿಯೇ 88.77 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಫೈನಲ್‌ಗೆ ಅರ್ಹತೆ ಸಂಪಾದಿಸಿದ್ದಾರೆ. ಹಂಗೇರಿಯ ಬುಡುಪೆಸ್ಟ್‌ನಲ್ಲಿ ಈ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಆಯೋಜನೆಯಾಗುತ್ತಿದೆ. ಇನ್ನು ಈ ಸಂದರ್ಭದಲ್ಲಿ ನೀರಜ್ ಚೋಪ್ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಕೂಡ ಅರ್ಹತೆಯನ್ನು ಸಂಪಾದಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ 27 ಜಾವೆಲಿನ್ ಎಸೆತಗಾರರು ಎ ಮತ್ತು ಬಿ ಗುಂಪುಗಳಲ್ಲಿ ವಿಂಗಡಣೆ ಮಾಡಲಾಗಿದೆ.
* ದಕ್ಷಿಣ ಆಫ್ರಿಕಾದ ದಿಗ್ಗಜ ಕ್ರಿಕೆಟಿಗ ಮಾಜಿ ಆಟಗಾರ ಜಾಕ್ ಕ್ಯಾಲಿಸ್ ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸುವ ಆಟಗಾರ ಯಾರಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಇಂಗ್ಲೆಂಡ್ ಸೀಮಿತ ಓವರ್‌ಗಳ ತಂಡದ ನಾಯಕ ಜೋಸ್ ಬಟ್ಲರ್ ಅದ್ಭುತ ಫಾರ್ಮ್‌ನಲ್ಲಿದ್ದು ಭಾರತದಲ್ಲಿ ನಡೆಯಲಿರುವ ಮುಂದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸುವ ಆಟಗಾರ ಎನಿಸಿಕೊಳ್ಳಲಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ದಿಗ್ಗಜ ಹೇಳಿಕೆ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications