For Quick Alerts
ALLOW NOTIFICATIONS  
For Daily Alerts

ಆಗಸ್ಟ್ 28: ಇತಿಹಾಸ ಬರೆದ ನೀರಜ್; ಮಹಾರಾಜ ಟ್ರೋಫಿ ಸೆಮಿಫೈನಲ್ ಮುಕ್ತಾಯ: ಕ್ರೀಡಾ ಲೋಕದ ಇಂದಿನ ಸುದ್ದಿ

* ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಹಂಗೇರಿಯಾ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನೀರಜ್ ಚೋಪ್ರ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಫೈನಲ್‌ನಲ್ಲಿ 88.17 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಚಿನ್ನದ ಪದಕಕ್ಕೆ ಕೊರಳೋಡ್ಡುವಂತೆ ಮಾಡಿದ್ದಾರೆ.

* ಇನ್ನು ನೀರಜ್ ಚೋಪ್ರ ಅವರ ಈ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್‌ನಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. "ಪ್ರತಿಭಾನ್ವಿತ ಕ್ರೀಡಾಪಟು ನೀರಜ್ ಚೋಪ್ರ ಶ್ರೇಷ್ಠತೆಗೆ ಉದಾಹರಣೆಯಾಗಿದ್ದಾರೆ. ಅವರ ಬದ್ಧತೆ, ಸಮರ್ಪಣಾಭಾವ ಹಾಗೂ ನಿಖರತೆ ಅವರನ್ನು ಅಥ್ಲೆಟಿಕ್ಸ್‌ನಲ್ಲಿ ಕೇವಲ ಚಾಂಪಿಯನ್ ಮಾತ್ರವೇ ಆಡಿಲ್ಲ. ಇಡೀ ಕ್ರೀಡಾ ಜಗತ್ತಿನಲ್ಲಿಯೇ ಸಾಟಿಯಿಲ್ಲದ ಶ್ರೇಷ್ಠ ಕ್ರೀಡಾಪಟು ಎನಿಸಿಕೊಳ್ಳುವಂತೆ ಮಾಡಿದೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಅವರಿಗೆ ಅಭಿನಂದನೆಗಳು" ಎಂದಿದ್ದಾರೆ ಪ್ರಧಾನಿ ಮೋದಿ.

August 28, what happened in sports World: Todays Top sports news and headlines

* ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಚಿನ್ನದ ಪದಕವನ್ನು ಗೆದ್ದ ಐತಿಹಾಸಿಕ ಸಾಧನೆ ಮಾಡಿದ ಬಳಿಕ ನೀರಜ್ ಚೋಪ್ರ ಪ್ರತಿಕ್ರಿಯೆ ನೀಡಿದ್ದಾರೆ. "ಒಲಿಂಪಿಕ್ಸ್ ಚಿನ್ನದ ಪದಕ ಗೆದ್ದ ಬಳಿಕ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಗೆಲುವು ಸಾಧಿಸಲೇಬೇಕೆಂದು ನಾನು ಬಯಸಿದ್ದೆ. ನಾನು ಮತ್ತಷ್ಟು ದೂರಕ್ಕೆ ಎಸೆಯಲು ಬಯಸಿದ್ದೆ. ರಾಷ್ಟ್ರೀಯ ತಂಡಕ್ಕೆ ಇದು ಅದ್ಭುತವಾದ ಸಾಧನೆ. ಆದರೆ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವುದು ನನ್ನ ಕನಸಾಗಿತ್ತು" ಎಂದಿದ್ದಾರೆ ನೀರಜ್ ಚೋಪ್ರ.

* ಚಿಕ್ಕಮಗಳೂರಿನ ಅಬ್ಲೈಸ್ ಮೋಟಾರ್ ಸ್ಪೋಟ್ರ್ಸ್ ಕ್ಲಬ್ ಆಯೋಜಿಸಿದ್ದ ಡರ್ಟ್ ಕಾರ್ ರ್ಯಾಲಿ ಕಾಫಿನಾಡಿಗರಿಗೆ ರ‍್ಯಾಲಿ ಪ್ರಿಯರನ್ನು ರೋಮಾಂಚನಗೊಳಿಸುವಲ್ಲಿ ಯಶಸ್ವಿಯಾಗಿದೆ. ಚಿಕ್ಕಮಗಳೂರು ಮುಗುಳುವಳ್ಳಿ ಗ್ರಾಮದ ಮೈದಾನದಲ್ಲಿ ನಡೆದ ಕಾರ್ ರ‍್ಯಾಲಿಯಲ್ಲಿ ಕರ್ನಾಟಕ, ತಮಿಳುನಾಡು, ಗೋವಾ, ಕೇರಳ, ಹೈದರಾಬಾದ್, ಮೇಘಾಲಯ, ದಿಲ್ಲಿ, ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಆಗಮಿಸಿದ್ದ ರಾಷ್ಟ್ರಮಟ್ಟದ ಕಾರ್ ರ‍್ಯಾಲಿ ಪಟುಗಳು ಪೈಪೋಟಿಗೆ ಬಿದ್ದು ಕಾರುಗಳನ್ನು ಶರವೇಗದಲ್ಲಿ ಮುನ್ನುಗ್ಗಿಸುತ್ತಿದ್ದ ಪರಿ ನೋಡುಗರ ಮನಸೂರೆಗೊಂಡಿತು.

* ವಿಶ್ವಕಪ್ ಟೂರ್ನಿಗೆ ಆಸ್ಟ್ರೇಲಿಯಾ ತಂಡ ಸಿದ್ಧತೆ ನಡೆಸುತ್ತಿದೆ. ಇದರ ಭಾಗವಾಗಿ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನು ಆಡಲು ಸಜ್ಜಾಗಿದೆ. ಆದರೆ ಈ ಸರಣಿಗೂ ಮುನ್ನ ತಂಡದ ಸ್ಟಾರ್ ಆಟಗಾರ ಗಾಯಗೊಂಡಿದ್ದು ಈ ಸರಣಿಗೆ ಅಲಭ್ಯವಾಗಿದ್ದಾರೆ. ಹೀಗಾಗಿ ಆಸಿಸ್ ಪಡೆಗೆ ಬದಲಿ ಆಟಗಾರನನ್ನು ಹೆಸರಿಸಲಾಗಿದೆ. ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಗಾಯಗೊಂಡಿರುವ ಆಟಗಾರನಾಗಿದ್ದಾರೆ. ಮ್ಯಾಕ್ಸ್‌ವೆಲ್ ಮೊಣಕಾಲಿಗೆ ಗಾಯವಾಗಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿಯಬೇಕಾಗಿದೆ.

* ಮಹಾರಾಜ ಟ್ರೋಫಿ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಮೈಸೂರ್ ವಾರಿಯರ್ಸ್ ಅಮೋಘ ಆಟವನ್ನು ಪ್ರದರ್ಶಿಸಿದೆ. ಗುಲ್ಬರ್ಗಾ ಮಿಸ್ಟಿಕ್ಸ್ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಮೈಸೂರ್ ವಾರಿಯರ್ಸ್ ತಂಡ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಫೈನಲ್‌ಗೆ ಪ್ರವೇಶಿಸಿದೆ. ಇನ್ನು ಇದಕ್ಕೂ ಮುನ್ನ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಶಿವಮೊಗ್ಗ ಲಯನ್ ಹಾಗೂ ಹುಬ್ಳಿ ಟೈಗರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಹುಬ್ಳಿ ಟೈಗರ್ಸ್ ತಂಡ 8 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿತ್ತು. ಈ ಮೂಲಕ ಮೊದಲ ತಂಡವಾಗಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು.

* ಏಷ್ಯಾಕಪ್ ಟೂರ್ನಿಯ ಮೇಲೆ ಸದ್ಯಕ್ಕೆ ಟೀಮ್ ಇಂಡಿಯಾ ಅಭಿಮಾಣಿಗಳ ಚಿತ್ತ ನೆಟ್ಟಿದೆ. ಈ ಮಧ್ಯೆ ಮುಂಬರುವ ವಿಶ್ವಕಪ್ ಟೂರ್ನಿಗೂ ಟೀಮ್ ಇಂಡಿಯಾ ಸ್ಕ್ವಾಡ್ ಪ್ರಕಟಿಸುವ ಕ್ಷಣ ಹತ್ತಿರವಾಗಿದೆ. ಈ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದ್ದು ಸೆಪ್ಟೆಂಬರ್ 3ರಂದು ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Story first published: Monday, August 28, 2023, 23:45 [IST]
Other articles published on Aug 28, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+