* ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅಕ್ಷರಶಃ ಆರ್ಭಟಿಸಿದೆ. ಮೊದಲಿಗೆ ಬ್ಯಾಟಿಂಗ್‌ನಲ್ಲಿ ಮಿಂಚಿದ ಟೀಮ್ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ ಅಮೋಘ 351/5 ರನ್‌ಗಳನ್ನು ಬಾರಿಸಿತು. ಇದಕ್ಕೆ ಪ್ರತಿಯಾಗಿ ಬೌಲಿಂಗ್‌ನಲ್ಲಿಯೂ ಅಷ್ಟೇ ಅದ್ಭುತ ಪ್ರದರ್ಸನ ನೀಡಿದ ಟೀಮ್ ಇಂಡಿಯಾ ವೆಸ್ಟ ಇಂಡೀಸ್ ತಂಡವನ್ನು ಕೇವಲ 151 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಭರ್ಜರಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನದ ಮೂಲಕ ಟೀಮ್ ಇಂಡಿಯಾ ಭರ್ಜರಿ 200 ರನ್‌ಗಳ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿದೆ. ಅಲ್ಲದೆ ಮೂರು ಪಂದ್ಯಗಳ ಈ ಏಕದಿನ ಪಂದ್ಯದಲ್ಲಿ 2-1 ಅಂತರದಿಂದ ಗೆಲುವು ಸಾಧಿಸಿ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.
* ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಪರವಾಗಿ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದು ಆರಂಭಿಕನಾಗಿ ಕಣಕ್ಕಿಳದ ಯುವ ಕ್ರಿಕೆಟಿಗ ಇಶಾನ್ ಕಿಶನ್. ಸರಣಿಯ ಮೂರು ಪಂದ್ಯಗಳಲ್ಲಿಯೂ ಇಶಾನ್ ಆರಂಭಿಕನಾಗಿ ಭರ್ಜರಿ ಯಶಸ್ಸು ಸಾಧಿಸಿದ್ದು ಮೂರು ಪಂದ್ಯಗಳಲ್ಲಿಯೂ ಅರ್ಧ ಶತಕ ಸಿಡಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಈ ಅರ್ಧ ಶತಕದ ಮೂಲಕ ಮೂರು ಪಂದ್ಯಗಳ ಏಕದಿಕ ಸರಣಿಯಲ್ಲಿ ಮೂರು ಪಂದ್ಯಗಳಲ್ಲಿಯೂ ಅರ್ಧ ಶತಕ ಸಿಡಿಸಿದ ಭಾರತದ ಆರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಈ ಸಾಧನೆ ಮಾಡಿದ ಉಳಿದ ಬ್ಯಾಟರ್‌ಗಳು ಎಂದರೆ ಕ್ರಿಸ್ ಶ್ರೀಕಾಂತ್, ದಿಲಿಪ್ ವೆಂಗ್‌ಸರ್ಕಾರ್, ಮೊಹಮ್ಮದ್ ಅಜರುದ್ದೀನ್, ಎಂಎಸ್ ಧೋನಿ ಹಾಗೂ ಶ್ರೇಯಸ್ ಐಯ್ಯರ್.

* ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಅದ್ಭುತ ಪ್ರದರ್ಶನ ನೀಡಿ ಗಮನಸೆಳೆದಿರುವ ಓರ್ವ ಆಟಗಾರನ ಬಗ್ಗೆ ಮಾಜಿ ಕ್ರಿಕೆಟಿಗ ಹಾಗೂ ಕಾಮೆಂಟೇಟರ್ ಆಕಾಶ್ ಚೋಪ್ರ ವಿಶೇಷ ಮಾತುಗಳನ್ನಾಡಿದ್ದು ಮುಂಬರುವ ವಿಶ್ವಕಪ್ ತಂಡದಲ್ಲಿ ಆಡನ್ನು ಸುಲಭವಾಗಿ ಕಡೆಗಣಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅಂದಹಾಗೆ ಆಕಾಶ್ ಚೋಪ್ರ ಹೀಗೆ ಹೇಳಿದ್ದು ಬೇರೆ ಯಾರ ಬಗ್ಗೆಯೂ ಅಲ್ಲ. ಅಂತಿಮ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದ ಆಟಗಾರ ಸಂಜು ಸ್ಯಾಮ್ಸನ್ ವಿಚಾರವಾಗಿ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಚೋಪ್ರ ಅಂತಿಮ ಏಕದಿನ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದ ಸಂಜು ಸ್ಯಾಮ್ಸನ್ ಅವರನ್ನು ಭಾರೀ ಪ್ರಶಂಸಿಸಿದ್ದಾರೆ.
* ಮಂಗಳವಾರ, ಆಗಸ್ಟ್ 1ರಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಮುಕ್ತಾಯಗೊಂಡ 3 ಪಂದ್ಯಗಳ ಏಕದಿನ ಸರಣಿಯ ನಂತರ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ ಐಸಿಸಿ ಏಕದಿನ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಕುಸಿತ ಕಂಡಿದ್ದಾರೆ. ಬುಧವಾರ, ಆಗಸ್ಟ್ 2ರಂದು ಐಸಿಸಿ ಬಿಡುಗಡೆ ಮಾಡಿದ ಏಕದಿನ ರ್‍ಯಾಂಕಿಂಗ್‌ನಲ್ಲಿ ರೋಹಿತ್ ಶರ್ಮಾ ಪುರುಷರ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಟಾಪ್ 10ರಿಂದ ಹೊರಗುಳಿಯುವ ಮೂಲಕ ಇಬ್ಬರೂ ಬ್ಯಾಟ್ಸ್‌ಮನ್‌ಗಳ ಸ್ಥಾನವು ಕುಸಿದಿದೆ. ಇದೇ ವೇಳೆ, ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ತಮ್ಮ ಅತ್ಯುತ್ತಮ ಪ್ರದರ್ಶನಕ್ಕಾಗಿ ಏಕದಿನ ಶ್ರೇಯಾಂಕದಲ್ಲಿ ಬಹುಮಾನ ಪಡೆದರು.
* ಆಸ್ಟ್ರೇಲಿಯಾ ಓಪನ್ ಬ್ಯಾಡ್ಮಿಂಟನ್ ಆರಂಭವಾಗಿದ್ದು ಮೊದಲ ಸುತ್ತಿನಲ್ಲಿ ಭಾರತ ಮಿಶ್ರ ಅನುಭವ ಪಡೆದುಕೊಂಡಿದೆ. ಕುತೂಹಲಕಾರಿ ಸಂಗತಿಯೆಂದರೆ ಭಾರತದ ಶಟ್ಲರ್ ೫೦ನೇ ಶ್ರೇಯಾಂಕದ ಮಿಥುನ್ ಮಂಜುನಾಥ್ ವಿಶ್ವದ 7ನೇ ಶ್ರೇಯಾಂಕದ ಸಿಂಗಾಪುರದ ಕೀನ್ ಯೂ ಲೋಹ್ ಅವರನ್ನು ಆರಂಭಿಕ ಸುತ್ತಿನಲ್ಲಿ ಮಣಿಸಿದ್ದಾರೆ. ಇನ್ನು ಪಿವಿ ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ ನೇರ ಗೇಮ್‌ಗಳಿಂದ ಗೆಲುವು ಸಾಧಿಸಿ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.