ಆಗಸ್ಟ್ 31: ಸಚಿನ್‌ಗೆ ಪ್ರತಿಭಟನೆ ಬಿಸಿ: ಭಾರತ vs ಪಾಕ್ ಪಂದ್ಯ ನಡೆಯುವುದು ಅನುಮಾನ!: ಕ್ರೀಡಾ ಲೋಕದ ಇಂದಿನ ಸುದ್ದಿ
* ಕ್ರಿಕೆಟ್‌ನ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಮನೆಯ ಬಳಿ ಇಂದು ಭಾರೀ ಪ್ರತಿಭಟನೆ ನಡೆಯುತ್ತಿದೆ. ಪಕ್ಷೇತರ ಶಾಸಕ ಬಚ್ಚು ಕಡು ಅವರ ನೇತೃತ್ವದಲ್ಲಿ ನೂರಾರು ಜನರು ಸಚಿನ್ ತೆಂಡೂಲ್ಕರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ನಂತರ ಬಂದ್ರಾ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಂದಹಾಗೆ ಈ ಪ್ರತಿಭಟನೆಗೆ ಕಾರಣ ಸಚಿನ್ ತೆಂಡೂಲ್ಕರ್ ಅವರು ನೀಡಿರುವ ಒಂದು ಜಾಹೀರಾತು. ಆನ್‌ಲೈನ್ ಗೇಮಿಂಗ್ ಪರವಾಗಿ ಸಚಿನ್ ತೆಂಡೂಲ್ಕರ್ ಜಾಹಿರಾತಿನಲ್ಲಿ ಭಾಗಿಯಾಗಿದ್ದು ಇದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗಿದೆ.
* ಏಷ್ಯಾಕಪ್ ಟೂರ್ನಿಯ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ಗೆಲ್ಲುವ ಮೂಲಕ ಟೂರ್ನಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು ಸಾಧಿಸಿದೆ. ಇತ್ತ ಬಾಂಗ್ಲಾದೇಶ ಆರಂಭಿಕ ಪಂದ್ಯದಲ್ಲೇ ಸೋಲು ಅನುಭವಿಸುವ ಮೂಲಕ ಆಘಾತ ಅನುಭವಿಸಿದೆ. ಬಾಂಗ್ಲಾದೇಶ ನೀಡಿದ್ದ 165 ರನ್‌ಗಳ ಸವಾಲನ್ನು ಬೆನ್ನಟ್ಟಿದ್ದ ಶ್ರೀಲಂಕಾ ತಂಡ ಆರಂಭಿಕ ಹಿನ್ನಡೆ ಅನುಭವಿಸಿತ್ತು. 15 ರನ್‌ಗಳಾಗುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡಿದ್ದ ಲಂಕಾ 43 ರನ್‌ಗಳಾಗಿದ್ದಾಗ 3ನೇ ವಿಕೆಟ್ ಕಳೆದುಕೊಂಡಿತ್ತು.

* ಬುಧವಾರ, ಆಗಸ್ಟ್ 30ರಂದು ನಡೆದ 2023ರ ಯುಎಸ್ ಓಪನ್‌ನ ಪುರುಷರ ಡಬಲ್ಸ್‌ನ ಮೊದಲ ಸುತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರೋಹನ್ ಬೋಪಣ್ಣ ಮತ್ತು ಮ್ಯಾಥ್ಯೂ ಎಬ್ಡೆನ್ ಅವರು ಎರಡನೇ ಸುತ್ತಿಗೆ ಪ್ರವೇಶಿಸಿದರು. ಭಾರತದ ರೋಹನ್ ಬೋಪಣ್ಣ ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಆಸ್ಟ್ರೇಲಿಯಾದ ಕ್ರಿಸ್ಟೋಫರ್ ಓ'ಕಾನ್ನೆಲ್ ಮತ್ತು ಅಲೆಕ್ಸಾಂಡರ್ ವುಕಿಕ್ ಜೋಡಿಯನ್ನು 6-4, 6-2 ಸೆಟ್‌ಗಳಿಂದ ಸೋಲಿಸಿ ಎರಡನೇ ಸುತ್ತಿಗೆ ಮುನ್ನಡೆ ಪಡೆದರು.
* ಮುಂಬರುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಪೂರ್ವ ತಯಾರಿ ಎಂಬಂತೆ, ಹೈಬ್ರಿಡ್ ಮಾದರಿಯಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ 2023ರ ಏಷ್ಯಾ ಕಪ್ ಪಂದ್ಯಾವಳಿ ನಡೆಯುತ್ತಿದೆ. ಈ ವೇಳೆ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಣ್ಣರಳಿಸಿ ಕಾಯುತ್ತಿದ್ದಾರೆ. ಶನಿವಾರ, ಸೆಪ್ಟೆಂಬರ್ 2ರಂದು ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ 2023ರ ಏಷ್ಯಾ ಕಪ್ ಪಂದ್ಯಾವಳಿಯ ಅತಿದೊಡ್ಡ ಹಣಾಹಣಿಗೆ ಮಳೆ ಅಡ್ಡಿಯನ್ನುಂಟು ಮಾಡುವ ಸಾಧ್ಯತೆ ಇದೆ.
* Viacom18 ಪ್ರಸಾರ ಮಾಧ್ಯಮ ಸಂಸ್ಥೆಯು ಮುಂದಿನ ಐದು ವರ್ಷಗಳವರೆಗೆ (2023-28) ಭಾರತ ತಂಡದ ತವರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಟಿವಿ ಮತ್ತು ಡಿಜಿಟಲ್ ಹಕ್ಕುಗಳನ್ನು ಬಿಡ್ ಅನ್ನು ಗೆದ್ದುಕೊಂಡಿದೆ. Sports18 ಇದೀಗ ಅಂತಾರಾಷ್ಟ್ರೀಯ ಮತ್ತು ದೇಶೀಯ ಪಂದ್ಯಗಳನ್ನು ಟಿವಿಯಲ್ಲಿ ಪ್ರಸಾರ ಮಾಡಲಿದ್ದರೆ, JioCinema ಪ್ಲಾಟ್‌ಫಾರ್ಮ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ಪ್ರಸಾರ ಮಾಡಲಾಗುತ್ತದೆ.
* ಭಾರತ ಪುರುಷರ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅವರ ಪತ್ನಿ ಸೋನಂ ಭಟ್ಟಾಚಾರ್ಯ ಗುರುವಾರ, ಆಗಸ್ಟ್ 31ರಂದು ಬೆಂಗಳೂರಿನಲ್ಲಿ ಗಂಡು ಮಗುವಿನ ಜನ್ಮ ನೀಡಿದರು. ಇದರಿಂದ ಗಂಡುಮಗುವಿಗೆ ತಂದೆಯಾದ ಖುಷಿಯಲ್ಲಿ ಭಾರತೀಯ ಫುಟ್ಬಾಲ್ ತಾರೆ ಹಾಗೂ ಬೆಂಗಳೂರು ಫುಟ್ಬಾಲ್ ಕ್ಲಬ್ (ಬಿಎಫ್‌ಸಿ) ನಾಯಕ ಸುನಿಲ್ ಛೆಟ್ರಿ ಇದ್ದಾರೆ. ಸೋನಂ ಭಟ್ಟಾಚಾರ್ಯ ಮತ್ತು ನವಜಾತ ಶಿಶುವಿನ ಯೋಗಕ್ಷೇಮವನ್ನು ಎರಡೂ ಕುಟುಂಬ ಸದಸ್ಯರು ಮತ್ತು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.
* ಏಷ್ಯಾಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ನೇಪಾಳದ ವಿರುದ್ಧ ಅಮೋಘ ಗೆಲುವು ಸಾಧಿಸಿರುವ ಪಾಕಿಸ್ತಾನ ಮುಂದಿನ ಪಂದ್ಯದಲ್ಲಿ ಭಾರತವನ್ನು ಎದುರಿಸಲಿದೆ. ಹೀಗಾಗಿ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ ಟೀಮ್ ಇಂಡಿಯಾವನ್ನು ಎದುರಿಸಲು ಶ್ರೀಲಂಕಾಗೆ ಬಂದಿಳಿದಿದೆ. ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆಯಲಿರುವ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ರಣರೋಚಕ ಕದನ ನಡೆಯಲಿದ್ದು ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾದುಕುಳಿತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications