ಆಗಸ್ಟ್ 4: ಭಾರತಕ್ಕೆ ಸೋಲಿನ ಆಘಾತ; ಆರ್‌ಸಿಬಿಗೆ ನೂತನ ಕೋಚ್: ಕ್ರೀಡಾ ಲೋಕದ ಇಂದಿನ ಸುದ್ದಿ
* ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಘಾತಕಾರಿ ಸೋಲು ಅನುಭವಿಸಿದೆ. ವೆಸ್ಟ್ ಇಂಡೀಸ್ ತಂಡ ನೀಡಿದ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ಆರಂಭಿಕ ಹಿನ್ನಡೆ ಅನುಭವಿಸಿದರೂ ನಂತರ ಉತ್ತಮ ಚೇತರಿಕೆಯ ಭರವಸೆ ಮೂಡಿಸಿತು. ಆದರೆ ಅಗತ್ಯವಿದ್ದಾಗ ವಿಂಡೀಸ್ ಬೌಲರ್‌ಗಳು ವಿಕೆಟ್ ಪಡೆಯಲು ಯಶಸ್ವಿಯಾಗಿದ್ದು ಭಾರತ ತಂಡಕ್ಕೆ ಭಾರೀ ಹಿನ್ನಡೆ ಮೂಡಿಸಿತು. ಹೀಗಾಗಿ 4 ರನ್‌ಗಳ ಅಂತರದಿಂದ ಭಾರತ ಈ ಪಂದ್ಯದಲ್ಲಿ ಸೋಲು ಅನುಭವಿಸಿದೆ. (ಸಂಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ)
* ಆರ್‌ಸಿಬಿ ತಂಡದ ಕ್ರಿಕೆಟ್ ನಿರ್ದೇಶಕ ಮೈಕ್ ಹೆಸನ್ ಹಾಗೂ ಕೋಚ್ ಸಂಜಯ್ ಬಂಗಾರ್ ಅವರ ಕಾರ್ಯಾವಧಿ ಅಂತ್ಯವಾಗಿದ್ದು ಮುಂದಿನ ಆವೃತ್ತಿಗೆ ಹೊಸ ಮ್ಯಾನೇಜ್‌ಮೆಂಟ್‌ನೊಂದಿಗೆ ಆರ್‌ಸಿಬಿ ತಂಡ ಕಣಕ್ಕಿಳಿಯುವುದು ಖಚಿತ. ಈ ಸಂದರ್ಭದಲ್ಲಿ ಆರ್‌ಸಿಬಿ ತಂಡದ ಮುಂದಿನ ಕೋಚ್ ಯಾರಾಗಬಹುದು ಎಂಬ ಪ್ರಶ್ನೆ ತಂಡದ ಅಭಿಮಾನಿಗಳಲ್ಲಿ ಸಾಕಷ್ಟು ಕಾಡುತ್ತಿತ್ತು. ಈ ವಿಚಾರವಾಗಿ ಅಧಿಕೃತ ಮಾಹಿತಿಯನ್ನು ಈಗ ಸ್ವತಃ ಆರ್‌ಸಿಬಿ ಫ್ರಾಂಚೈಸಿ ನೀಡಿದ್ದು ಮುಖ್ಯ ಕೋಚ್ ಆಗಿ ನೇಮಕಗೊಳಿಸಲಾಗಿದೆ ಎಂದು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದೆ. ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ದಿಗ್ಗಜ ಕ್ರಿಕೆಟಿಗ ಹಾಗೂ ಕೋಚ್ ಆಗಿ ಸಾಕಷ್ಟು ಖ್ಯಾತಿ ಪಡೆದಿರುವ ಆಂಡಿ ಫ್ಲವರ್ ಆರ್‌ಸಿಬಿ ತಂಡದ ಮುಂದಿನ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲು ನೇಮಕವಾಗಿದ್ದಾರೆ. ಸ್ವತಃ ಆರ್‌ಸಿಬಿ ಫ್ರಾಂಚೈಸಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು ಸಾಕಷ್ಟು ಮಾತುಕತೆಗಳ ನಂತರ ಈ ನಿರ್ಧಾರವನ್ನು ಅಂತಿಮಗೊಳಿಸಲಾಗಿದೆ. (ಸಂಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ)

* 17 ವರ್ಷದ ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ವಿಶೇಷ ಸಾಧನೆಯೊಂದು ಮಾಡಿದ್ದಾರೆ. ಕಳೆದ ಮಂಗಳವಾರ (ಆಗಸ್ಟ್ 1) ನಡೆದ ಫಿಡೆ ವಿಶ್ವಕಪ್‌ನ ಎರಡನೇ ಸುತ್ತಿನ ಪಂದ್ಯದಲ್ಲಿ ಅಜರ್‌ಬೈಜಾನ್‌ನ ಮಿಸ್ರದ್ದೀನ್ ಇಸ್ಕಂದರೋವ್ ವಿರುದ್ಧ ಜಯಗಳಿಸಿದ್ದಾರೆ. ಈ ಮೂಲಕ ಲೈವ್ ವರ್ಲ್ಡ್ (FIDE) ಶ್ರೇಯಾಂಕದಲ್ಲಿ ಭಾರತದ ದಿಗ್ಗಜ ವಿಶ್ವನಾಥನ್ ಆನಂದ್ ಅವರನ್ನು ಹಿಂದಿಕ್ಕಿದ್ದಾರೆ. (ಸಂಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ)
* ಬಾಂಗ್ಲಾದೇಶ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ತಮೀಮ್ ಇಕ್ಬಾಲ್ ಏಕದಿನ ಸ್ವರೂಪದಲ್ಲಿ ರಾಷ್ಟ್ರೀಯ ತಂಡದ ನಾಯಕತ್ವ ಸ್ಥಾನದಿಂದ ಹಿಂದೆ ಸರಿದಿದ್ದಾರೆ. 34 ವರ್ಷದ ತಮೀಮ್ ಇಕ್ಬಾಲ್ ಇತ್ತೀಚೆಗೆ ಬಾಂಗ್ಲಾದೇಶ ತಂಡದ ಮ್ಯಾನೇಜ್‌ಮೆಂಟ್‌ನೊಂದಿಗಿನ ವಿವಾದದ ನಂತರ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದರು. ಆದರೆ, ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾದ ನಂತರ ತಮ್ಮ ನಿರ್ಧಾರವನ್ನು ಬದಲಾಯಿಸಿದ್ದರು ಎಂಬುದು ಗಮನಾರ್ಹ ಸಂಗತಿ. (ಸಂಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ)
* ಏಷ್ಯಾ ಕಪ್ ಟೂರ್ನಿಯ ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ ಟೀಮ್ ಇಂಡಿಯಾದ ಇಬ್ಬರು ಆಟಗಾರರ ಲಭ್ಯತೆಯ ಬಗ್ಗೆ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದೆ. ಅನುಭವಿ ವೇಗಿ ಜಸ್ಪ್ರೀತ್ ಬೂಮ್ರಾ ಐರ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗುವ ಮೂಲಕ ಅನುಮಾನಗಳಿಗೆ ಉತ್ತರ ನೀಡಿದ್ದರೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಐಯ್ಯರ್ ವಿಚಾರವಾಗಿ ಗೊಂದಲ ಉಳಿದುಕೊಂಡಿತ್ತು. ಆ ಪೈಕಿ ಕೆಎಲ್ ರಾಹುಲ್ ಏಷ್ಯಾ ಕಪ್‌ಗೆ ಸಂಪೂರ್ಣವಾಗಿ ಫಿಟ್ ಆಗಿರಲಿದ್ದು ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. (ಸಂಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ)
* ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟರ್ ಅಲೆಕ್ಸ್ ಹೇಲ್ಸ್ ಅವರು ಈ ಕ್ಷಣದಿಂದಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಒಟ್ಟು 156 ಪಂದ್ಯಗಳನ್ನು ಆಡಿರುವ ಅಲೆಕ್ಸ್ ಹೇಲ್ಸ್, ಎಲ್ಲಾ ಮೂರು ಸ್ವರೂಪಗಳಲ್ಲಿ 5066 ರನ್ ಗಳಿಸಿದ ನಂತರ ತಮ್ಮ ವೃತ್ತಿಜೀವನ ಕೊನೆಗೊಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (ಎಂಸಿಜಿ) ನಡೆದ 2022ರ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಗೆಲುವಿನಲ್ಲಿ ಇಂಗ್ಲೆಂಡ್ ತಂಡದ ಸದಸ್ಯನಾಗಿ ಅವರ ಕೊನೆಯ ಪಂದ್ಯವಾಡಿದರು. (ಸಂಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications