For Quick Alerts
ALLOW NOTIFICATIONS  
For Daily Alerts

ಆಗಸ್ಟ್ 6: ಭಾರತ vs ವಿಂಡೀಸ್ 2ನೇ ಟಿ20 ಪಂದ್ಯ ಇಂದು; ಫೈನಲ್‌ನಲ್ಲಿ ಸೋತ ಪ್ರಣಯ್: ಕ್ರೀಡಾ ಲೋಕದ ಇಂದಿನ ಸುದ್ದಿ

* ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಆಘಾತಕಾರಿ ಸೋಲು ಅನುಭವಿಸಿತ್ತು. ಇದೀಗ ಇತ್ತಂಡಗಳು ಕೂಡ ಎರಡನೇ ಪಂದ್ಯವನ್ನಾಡಲು ಸಜ್ಜಾಗುತ್ತಿದೆ. ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಅನುಭವಿಸಿದ ಆಘಾತಕಾರಿ ಸೋಲಿಗೆ ಪ್ರತಿಯಾಗಿ ಈ ಪಂದ್ಯದಲ್ಲಿ ಗೆದ್ದು ಸರಣಿಯನ್ನು ಸಮಬಲಗೊಳಿಸುವ ಲೆಕ್ಕಾಚಾರದಲ್ಲಿದಲ್ಲಿದೆ. ಇನ್ನು ವೆಸ್ಟ್ ಇಂಡಿಸ್ ತಂಡ ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಸೋಲು ಅನುಭವಿಸಿದ ಬಳಿಕ ಟಿ20 ಸರಣಿಯನ್ನಾದರೂ ವಶಕ್ಕೆ ಪಡೆದುಕೊಳ್ಳುವ ಲೆಕ್ಕಾಚಾರ ನಡೆಸುತ್ತಿದೆ. ಈ ಮೂಲಕ ತವರೊನಲ್ಲಿ ಭಾರತದ ವಿರುದ್ಧ ಚುಟುಕು ಮಾದರಿಯಲ್ಲಿ ಗೆದ್ದುಬೀಗುವ ಕನಸುಕಾಣುತ್ತಿದೆ. ಅದಕ್ಕೆ ಪೂರಕವಾಗಿ ಮೊದಲ ಪಂದ್ಯದಲ್ಲಿ ಸಾಧಿಸಿದ ಗೆಲುವು ತಂಡದ ಆಟಗಾರರ ಆತ್ಮವಿಶ್ವಾಸ ಹೆಚ್ಚಿಸಿದೆ.

* ಪಂದ್ಯದ ಸಂದರ್ಭದಲ್ಲಿ 30-40 ಶೇಕಡಾದಷ್ಟು ಮಳೆಯಾಗುವ ಸಾಧ್ಯತೆಯಿದ್ದು ಇದರಿಂದಾಗಿ ಪಂದ್ಯದ ಆರಂಭದಲ್ಲಿ ವಿಳಭವಾಗುವ ಸಾಧ್ಯತಯೂ ಇದೆ ಎನ್ನಲಾಗಿದೆ.

August 6, what happened in sports World: Todays Top sports news and headlines

* ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸರಣಿಯನ್ನು ಸಮಬಲಗೊಳಸಿಲು ಈ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲುವು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಆಡಿದ ಬಳಗದೊಂದಿಗೆ ಕಣಕಕ್ಇಳಿಯಲಿದೆಯಾ ಅಥವಾ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲಿದೆಯಾ ಎಂಬುದು ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಯುವ ಆಟಗಾರ ಯಸಸ್ವಿ ಜೈಸ್ವಾಲ್‌ಗೆ ಟೀಮ್ ಇಂಡಿಯಾದ ಟಿ20 ತಂಡದಲ್ಲಿ ಅವಕಾಶ ನೀಡಿ ಎಂದು ಒತ್ತಾಯಿಸಿದ್ದಾರೆ. ಮೊದಲ ಪಂದ್ಯದಲ್ಲಿ ಬೆಂಚ್ ಕಾದಿದ್ದ ಜಯಸ್ವಾಲ್‌ಗೆ ಎರಡನೆ ಪಂದ್ಯದಲ್ಲಿ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

* ಭಾರತದ ಅಗ್ರ ಶ್ರೇಯಾಂಕದ ಸಿಂಗಲ್ಸ್ ಆಟಗಾರ ಎಚ್‌ಎಸ್ ಪ್ರಣಯ್ ಆಸ್ಟ್ರೇಲಿಯನ್ ಓಪನ್‌ ಬ್ಯಾಡ್ಮಿಂಟನ್‌ನ ಫೈನಲ್‌ನಲ್ಲಿ ನಿರಾಸೆ ಅನುಭವಿಸಿದ್ದಾರೆ. ಅವರು ಆಗಸ್ಟ್ 6ರ ಭಾನುವಾರ ಸೂಪರ್ 500 ಟೂರ್ನಮೆಂಟ್ ಆಗಿರುವ ಆಸ್ಟ್ರೇಲಿಯನ್ ಓಪನ್‌ನ ಫೈನಲ್‌ನಲ್ಲಿ ಚೀನಾದ ವೆಂಗ್ ಹಾಂಗ್ಯಾಂಗ್ ವಿರುದ್ಧ 9-21, 23-21, 20-22 ಅಂತರದಿಂದ ಸೋಲು ಕಾಣುವ ಮೂಲಕ ಟೈಟಲ್ ಎತ್ತಿ ಹಿಡಿಯುವ ಅವಕಾಶ ಕಳೆದುಕೊಂಡಿದ್ದಾರೆ.

* ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿಯೂ ರೋಹಿತ್ ಶರ್ಮಾ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿಲ್ಲ. ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಭವಿಷ್ಯದ ಬಗ್ಗೆ ಬಿಸಿಸಿಐ ಕೂಡ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಈ ಸಂದರ್ಭದಲ್ಲಿ ವಿಂಡೀಸ್ ಪ್ರವಾಸ ಮುಗಿಸಿ ಅಮೆರಿಕಾ ಪ್ರವಾಸವನ್ನು ಆನಂದಿಸುತ್ತಿರುವ ರೋಹಿತ್ ಶರ್ಮಾ ಮುಂದಿನ ವರ್ಷದ ಟಿ20 ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಮಹತ್ವದ ಸುಳಿವೊಂದನ್ನು ಬಿಟ್ಟುಕೊಟ್ಟಿದ್ದಾರೆ.

Story first published: Sunday, August 6, 2023, 17:51 [IST]
Other articles published on Aug 6, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+