* ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಕ್ರೀಡಾಕೂಟದಲ್ಲಿ ಭಾರತ ಹಾಗೂ ದಕ್ಷಿಣ ಕೊರಿಯಾ ತಂಡಗಳು ರೋಚಕ ಕಾದಾಟ ನಡೆಸಿತು. ಈ ಪೈಪೋಟಿಯ ಸೆಣೆಸಾಟದಲ್ಲಿ ಭಾರತ 3-2 ಅಂತರದ ರೋಚಕ ಜಯ ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನವನ್ನು ಪಡೆದುಕೊಂಡಿದೆ ಭಾರತ ತಂಡ. ಇದರೊಂದಿಗೆ ಪಾಕಿಸ್ತಾನದ ವಿರುದ್ಧದ ಮತ್ತೊಂದು ಪೈಪೋಟಿಯ ಪಂದ್ಯಕ್ಕೆ ಭಾರತ ತಂಡ ಸಂಪೂರ್ಣವಾಗಿ ಸಿದ್ಧವಾಗಿದೆ. ಜಪಾನ್ ವಿರುದ್ಧದ ಪಂದ್ಯದಲ್ಲಿ 1-1 ಅಂತರದಿಂದ ನೀರಸ ಡ್ರಾ ಸಾಧಿಸಿದ ಬಳಿಕ ಭಾರತ ಮಲೇಷ್ಯಾ ವಿರುದ್ಧ 5-0 ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಆತ್ಮವಿಶ್ವಾಸದಿಂದಲೇ ಈ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಸಾಕಷ್ಟು ಪೈಪೋಟಿ ಎದುರಾಯಿತಾದರೂ ಕೊರಿಯಾ ತಂಡವನ್ನು ರೋಚಕವಾಗಿ ಮಣಿಸುವಲ್ಲಿ ಭಾರತ ಯಶಸ್ವಿಯಾಗಿದೆ.(ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ)
* ಹಲವು ಸಂದಿಗ್ಧ ಪರಿಸ್ಥಿತಿಗಳ ನಂತರ, ಪಾಕಿಸ್ತಾನ ಸರ್ಕಾರವು ಅಂತಿಮವಾಗಿ ಮುಂಬರುವ 2023ರ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಲು ತನ್ನ ತಂಡಕ್ಕೆ ಅನುಮತಿ ನೀಡಿದೆ. ಭಾರತ ತಂಡವು ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾ ಕಪ್‌ನಲ್ಲಿ ಭಾಗವಹಿಸಲು ನಿರಾಕರಿಸಿತ್ತು. ಬಿಸಿಸಿಐ ತಮ್ಮ ನಿಲುವನ್ನು ಬದಲಾಯಿಸದಿದ್ದರೆ ಬಾಬರ್ ಅಜಂ ನಾಯಕತ್ವದ ತಂಡವು ಏಕದಿನ ವಿಶ್ವಕಪ್‌ಗಾಗಿ ಭಾರತಕ್ಕೆ ಪಾಕಿಸ್ತಾನ ತಂಡವನ್ನು ಕಳುಹಿಸುವುದಿಲ್ಲ ಎಂದು ಪಿಸಿಬಿ ಹಲವು ಬಾರಿ ಎಚ್ಚರಿಕೆ ನೀಡಿತ್ತು. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ)

* ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿ ನಡೆಯಲಿರುವ ಮುಂಬರುವ 2023ರ ಐಸಿಸಿ ಪುರುಷರ ಏಕದಿನ ವಿಶ್ವಕಪ್ ಪಂದ್ಯಾವಳಿಗಾಗಿ ತಮ್ಮ ಪ್ರಾಥಮಿಕ ತಂಡವನ್ನು ಆಸ್ಟ್ರೇಲಿಯಾ ಘೋಷಿಸಿದೆ. ಭಾರತ ಮೂಲದ ಲೆಗ್ ಸ್ಪಿನ್ನರ್ ತನ್ವೀರ್ ಸಂಘ ಮತ್ತು ವೆಸ್ಟರ್ನ್ ಆಸ್ಟ್ರೇಲಿಯನ್ ಆಲ್‌ರೌಂಡರ್ ಆರನ್ ಹಾರ್ಡಿ ಅವರಂತಹ ಯುವ ಆಟಗಾರರಿಗೆ ಮೊದಲ ಬಾರಿಗೆ ರಾಷ್ಟ್ರೀಯ ತಂಡದಿಂದ ಕರೆಬಂದಿದೆ. ಆದರೆ ತಂಡದಲ್ಲಿ ಅಗ್ರ ಟೆಸ್ಟ್ ಬ್ಯಾಟರ್ ಮಾರ್ನಸ್ ಲ್ಯಾಬುಶೇನ್ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ)
* ನಿರೀಕ್ಷೆಯಂತೆಯೇ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮುಖ್ಯ ಕೋಚ್ ಆಗಿದ್ದ ಬ್ರಿಯಾನ್ ಲಾರಾ ತಂಡದಿಂದ ಹೊರಬಿದ್ದಿದ್ದಾರೆ. ಈ ಬಗ್ಗೆ ಎಸ್‌ಆರ್‌ಹೆಚ್ ಮ್ಯಾನೇಜ್‌ಮೆಂಟ್ ಅಧಿಕೃತ ಘೋಷಣೆ ಮಾಡಿದ್ದು ನೂತನ ಕೋಚ್ ಆಗಿ ನ್ಯೂಜಿಲೆಂಡ್ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಅವರನ್ನು ನೇಮಿಸಿದೆ. ಹೀಗಾಗಿ 44ರ ಹರೆಯದ ವೆಟ್ಟೋರಿ 2016ರ ಐಪಿಎಲ್ ಚಾಂಪಿಯನ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 2024ರ ಆವೃತ್ತಿಗೆ ಮಾರ್ಗದರ್ಶನ ನೀಡಲಿದ್ದಾರೆ. ಸನ್‌ರೈಸರ್ಸರ್ ಹಯದರಾಬಾದ್ ತಮಡ ಕಳೆದ ಒಂದೆರಡು ಆವೃತ್ತಿಗಳಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು, ಇದೀಗ ವೆಟ್ಟೋರಿ ಮಾರ್ಗದರ್ಶನದಲ್ಲಿ ಹೊಸ ಆರಂಭವನ್ನು ಎದುರುನೋಡುತ್ತಿದೆ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ)
* ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಘಾತಕಾರಿ ಸೋಲು ಅನುಭವಿಸಿದೆ. ಟೆಸ್ಟ್ ಹಾಗೂ ಏಕದಿನ ಮಾದರಿಯಲ್ಲಿ ಸುಲಭವಾಗಿ ಸರಣಿಯನ್ನು ವಶಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ ಪಡೆಗೆ ಚುಟುಕು ಸರಣಿಯಲ್ಲಿ ವಿಂಡೀಸ್ ಪಡೆ ಭರ್ಜರಿಯಾಗಿ ತಿರುಗೇಟು ನೀಡುತ್ತಿದೆ. ಆರಂಭಿಕ ಎರಡು ಪಂದ್ಯಗಳಲ್ಲಿಯೂ ಭಾರತ ತಂಡ ಸೋಲು ಅನುಭವಿಸಿದ ಬಳಿಕ ಐದು ಪಂದ್ಯಗಳ ಈ ಸರಣಿಯಲ್ಲಿ 0-2 ಅಂತರದ ಹಿನ್ನಡೆಯಲ್ಲಿರುವ ತಂಡ ಮುಂದಿನ ಮೂರು ಪಂದ್ಯಗಳಲ್ಲಿಯೂ ಗೆದ್ದರೆ ಮಾತ್ರವೇ ಸರಣಿ ವಶಕ್ಕೆ ಪಡೆಯಲು ಸಾಧ್ಯ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ)
* ವೆಸ್ಟ್ ಇಂಡಿಸ್ ತಂಡ ಎರಡನೇ ಟಿ20 ಪಂದ್ಯದಲ್ಲಿಯೂ ಭಾರತ ತಂಡವನ್ನು ಮಣಿಸಿದ್ದು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅಮೋಘ ಮೇಲುಗೈ ಸಾಧಿಸಿದೆ. ಐದು ಪಂದ್ಯಗಳ ಈ ಟಿ20 ಸರಣಿಯಲ್ಲಿ ವಿಂಡೀಸ್ ಮೊದಲ ಎರಡು ಪಂದ್ಯಗಳನ್ನು ಗೆದ್ದು ಮುನ್ನಡೆಯಲ್ಲಿದೆ. ಆದರೆ ಎರಡನೇ ಪಂದ್ಯವನ್ನು ಗೆದ್ದ ಬಳಿಕ ಪಂದ್ಯದ ಗೆಲುವಿಗೆ ಕಾರಣವಾದ ನಿಕೋಲಸ್ ಪೂರನ್‌ಗೆ ಐಸಿಸಿ ದಂಡವನ್ನು ವಿಧಿಸಿದೆ. ಭಾರತದ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಐಸಿಸಿ ನೀತಿ ಸಂಹಿತೆಯ ಲೆವೆಲ್ 1 ನಿಯಮವನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಪಂದ್ಯ ಸಂಭಾವನೆಯ 15 ಶೇಕಡಾ ದಂಡವನ್ನು ವಿಧಿಸಲಾಗಿದೆ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ)