For Quick Alerts
ALLOW NOTIFICATIONS  
For Daily Alerts

ಆಗಸ್ಟ್ 8: ಟೀಮ್ ಇಂಡಿಯಾಗೆ ಗೆಲುವು: ನಿವೃತ್ತಿ ಘೋಷಿಸಿದ ಪಾಕ್ ಬ್ಯಾಟರ್: ಕ್ರೀಡಾ ಲೋಕದ ಇಂದಿನ ಸುದ್ದಿ

* ವೆಸ್ಟ್ ಇಂಡಿಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಸೂರ್ಯಕುಮಾರ್ ಯಾದವ್ ಅಬ್ಬರ ಹಾಗೂ ತಿಲಕ್ ವರ್ಮಾ ಅವರ ಸಮಯೋಚಿತ ಬ್ಯಾಟಿಂಗ್ ಮತ್ತು ಕುಲ್‌ದೀಪ್ ಯಾದವ್ ಅವರ ಅದ್ಭುತ ಬೌಲಿಂಗ್ ದಾಳಿಯಿಂದಾಗಿ ಟೀಮ್ ಇಂಡಿಯಾ ಟಿ20 ಸರಣಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದ ಭಾರತ ಮೂರನೇ ಪಂದ್ಯದಲ್ಲಿ ಅಮೋಘ ಪ್ರದರ್ಶನ ನಿಡಿದ್ದು ಅದ್ಭುತ ಗೆಲುವು ಸಾಧಿಸಿದೆ. ಮಹತ್ವದ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಅಂತರದ ಮಹತ್ವದ ಗೆಲುವು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 160 ರನ್‌ಗಳ ಸವಾಲಿನ ಗುರಿಯನ್ನು ಪಡೆದುಕೊಂಡಿತ್ತು. ಸ್ಪಿನ್ ಬೌಲಿಂಗ್‌ಗೆ ನೆರವು ನೀಡುವ ಪಿಚ್‌ನಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದ ಭಾರತ ಈ ಪಂದ್ಯದಲ್ಲಿ ಭರ್ಜರಿ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿದೆ.

* ಟೀಮ್ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ವಿರುದ್ಧ ಇತ್ತೀಚೆಗೆ ಸತತ ಟೀಕೆಗಳು ಎದುರಾಗುತ್ತಿದೆ. ತಂಡದ ಪ್ರದರ್ಶನ ಹಾಗೂ ಕೆಲ ನಿರ್ಧಾರಗಳ ಕುರಿತಾಗಿ ಕೆಲ ಅಭಿಮಾನಿಗಳು ತಮ್ಮ ಅಸಮಾಧಾನವನ್ನು ಕೋಚ್ ರಾಹುಲ್ ದ್ರಾವಿಡ್ ಮೇಲೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಕ್ರಿಕೆಟ್ ವಿಶ್ಲೇಷಕರು, ಮಾಜಿ ಕ್ರಿಕೆಟಿಗರು ಕೂಡ ರಾಹುಲ್ ದ್ರಾವಿಡ್ ಕೋಚಿಂಗ್ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳನ್ನು ಹಾಕುತ್ತಿದ್ದಾರೆ. ಇದೀಗ ಸ್ವತಃ ರಾಹುಲ್ ದ್ರಾವಿಡ್ ಅವರೊಂದಿಗೆ ತಂಡದಲ್ಲಿ ಡ್ರೆಸ್ಸಿಂಗ್ ರೂಮ್ ಹಂಚಿಕೊಂಡಿದ್ದ ಆಟಗಾರ ಪಾರ್ಥಿವ್ ಪಟೇಲ್ ಕೂಡ ಈ ಬಗ್ಗೆ ಟೀಕೆಗಳನ್ನು ಮಾಡಿರುವುದು ಗಮನಾರ್ಹ. ರಾಹುಲ್ ದ್ರಾವಿಡ್ ಕೋಚ್ ಆಗಿ ಕ್ರೀಯಾಶೀಲ ಅಲ್ಲ ಎಂದು ಪಾರ್ಥಿವ್ ಪಟೇಲ್ ಹೇಳಿಕೆ ನಿಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದ ಬಳಿಕ ಈ ಮಾತು ಹೇಳಿದ್ದಾರೆ ಪಟೇಲ್.

August 8, what happened in sports World: Todays Top sports news and headlines

* ಪಾಕಿಸ್ತಾನ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಫವಾದ್ ಆಲಂ ಅವರು ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದರು ಮತ್ತು ಈಗ ಯುಎಸ್‌ಎನಲ್ಲಿ ಮೈನರ್ ಲೀಗ್ ಕ್ರಿಕೆಟ್‌ನಲ್ಲಿ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಿದ್ಧರಾಗಿದ್ದಾರೆ. ಗಮನಾರ್ಹವಾಗಿ, ಇತ್ತೀಚೆಗೆ ಮುಕ್ತಾಯಗೊಂಡ ಮೇಜರ್ ಲೀಗ್ ಕ್ರಿಕೆಟ್ (ಎಂಎಲ್‌ಸಿ)ಗೆ ಆಧಾರವಾಗಿರುವ ಪಂದ್ಯಾವಳಿಯಲ್ಲಿ ಚಿಕಾಗೊ ಕಿಂಗ್ಸ್‌ಮೆನ್ ತಂಡಕ್ಕೆ ಹೊರಗಿನ ಬ್ಯಾಟರ್ ಫವಾದ್ ಆಲಂ "ಸ್ಥಳೀಯ' ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

* ಮುಂಬರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಹಾಕಿ ಸ್ಪರ್ಧೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಕಾಣಿಸಿಕೊಂಡಿದೆ. ಭಾರತದಲ್ಲಿ ನಡೆಯುತ್ತಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟದಲ್ಲಿ ಈ ಎರಡು ತಂಡಗಳು ಕೂಡ ಮುಖಾಮುಖಿಯಾಗುತ್ತಿದೆ. ಅದಾದ ಬಳಿಕ ಈ ಎರಡು ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕದನ ಏಷ್ಯನ್ ಗೇಮ್ಸ್ ಟೂರ್ನಿಯ ಲೀಗ್ ಹಂತದಲ್ಲಿ ನಡೆಯಲಿದೆ. ಏಷ್ಯನ್ ಚಾಂಪಿಯಮ್ಸ್ ಟ್ರೋಫಿಯಲ್ಲಿ ಭಾರತ ಪ್ರಸ್ತುತ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಇದು ಚೀನಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅದ್ಭುತವಾದ ಸಿದ್ಧತೆ ಎಂದು ಬಣ್ಣಿಸಲಾಗುತ್ತಿದೆ. ಚೀನಾದ ಹಾಂಗ್‌ಜೂನಲ್ಲಿ ಏಷ್ಯನ್ ಗೇಮ್ಸ್ ಕ್ರೀಡಾ ಕೂಡ ಆಯೋಜನೆಯಾಗಲಿದೆ.

* ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಮೂರನೇ ಟಿ20 ಪಂದ್ಯ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದ ಆರಂಭದಲ್ಲಿಯೇ ವಿಂಡೀಸ್ ಮಂಡಳಿ ಭಾರೀ ಎಡವಟ್ಟೊಂದು ಮಾಡಿದ್ದು ನಗೆಪಾಟಲಿಗೆ ಈಡಾಗಿದೆ. ಪಂದ್ಯದಲ್ಲಿ ಟಾಸ್ ಪ್ರಕ್ರಿಯೆ ಮುಗಿದು ಎರಡು ತಂಡಗಳ ಆಟಗಾರರು ಪಂದ್ಯವನ್ನಾಡಲು ಮುಂದಾದಾಗ ಮೈದಾನದಲ್ಲಿ 30 ಯಾರ್ಡ್‌ನಲ್ಲಿ ಹಾಕುವ ಸರ್ಕಲನ್ನೇ ಮೈದಾನದ ಸಿಬ್ಬಂದಿಗಳು ಹಾಕಲು ಮರೆತ ಘಟನೆ ಬೆಳಕಿಗೆ ಬಂದಿದೆ.

* ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಈ ಮೂಲಕ ಯುವ ಭರವಸೆಯ ಆಟಗಾರ ಯಶಸ್ವಿ ಜೈಸ್ವಾಲ್‌ಗೆ ಇದೇ ಮೊದಲ ಬಾರಿಗೆ ಟಿ20 ತಂಡದಲ್ಲಿ ಭಾರತದ ಪರವಾಗಿ ಆಡುವ ಅವಕಾಶ ದೊರೆತಿದೆ.

* ಟೀಮ್ ಇಂಡಿಯಾದ ಸ್ಪಿನ್ನರ್ ಕುಲ್‌ದೀಪ್ ಯಾದವ್ ವೆಸ್ಟ್ ಇಂಡಿಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ದಾಳಿ ನಡೆಸಿದ್ದು ಮೂರು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಕುಲ್‌ದೀಪ್ ಯಾದವ್ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ 50 ವಿಕೆಟ್‌ಗಳ ಮೈಲಿಗಲ್ಲು ದಾಟಿದ್ದಾರೆ. ಇನ್ನು ಕುಲ್‌ದೀಪ್ ಯಾದವ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳನ್ನು ದಾಟಿದ್ದಲ್ಲದೆ ಈ ಸಾಧನೆಯನ್ನು ಅತ್ಯಂತ ವೇಗವಾಗಿ ಮಾಡಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

Story first published: Tuesday, August 8, 2023, 23:55 [IST]
Other articles published on Aug 8, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+