For Quick Alerts
ALLOW NOTIFICATIONS  
For Daily Alerts

ಆಗಸ್ಟ್ 9: ಪಾಕ್ ವಿರುದ್ಧ ಭಾರತಕ್ಕೆ ಗೆಲುವು; ವಿಶ್ವಕಪ್ ಪ್ರಮುಖ ಪಂದ್ಯದ ದಿನಾಂಕ ಬದಲಾವಣೆ: ಕ್ರೀಡಾ ಲೋಕದ ಇಂದಿನ ಸುದ್ದಿ

* ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಸಂಪೂರ್ಣ ಮೇಲುಗೈ ಸಾಧಿಸಿದ್ದು ಭರ್ಜರಿ 4-0 ಅಂತರದಿಂದ ಗೆದ್ದು ಬೀಗಿದೆ. ಈ ಮೂಲಕ ಚೆನ್ನೈನ ಮೇಯರ್ ರಾಧಾಕೃಷ್ಣನ್ ಕ್ರೀಡಾಮಗಣದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟೂರ್ನಿಯ ಲೀಗ್ ಹಂತದ ಅಗ್ರ ತಂಡವಾಗಿ ಭಾರತ ಹೊರಹೊಮ್ಮಿದೆ.

* ಬುಧವಾರ, ಆಗಸ್ಟ್ 09ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು (ಐಸಿಸಿ) 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಪ್ರಕಟಿಸಿದೆ. ನವರಾತ್ರಿ ಹಾಗೂ ದೀಪಾವಳಿಯ ಕಾರಣ ಕೆಲ ಪಂದ್ಯಗಳ ದಿನಾಂಕಗಳನ್ನು ಬದಲಾಯಿಸಲಾಗಿದೆ. ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಆಡಿಸಲು ನಿರ್ಧರಿಸಲಾಗಿದೆ. ಇದೀಗ ಅದೇ ಸ್ಥಳದಲ್ಲಿ ಅಕ್ಟೋಬರ್ 14ರಂದು ಪಂದ್ಯ ನಡೆಯಲಿದೆ.

August 9, what happened in sports World: Todays Top sports news and headlines

* ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2021-22ರ ಹಣಕಾಸು ವರ್ಷದಲ್ಲಿ ಬರೋಬ್ಬರಿ 1,159 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ತಿಳಿಸಿದರು. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರಿಸಿದ ಕೇಂದ್ರ ಸಚಿವರು, ಬಿಸಿಸಿಐ ಪಾವತಿಸಿದ ಆದಾಯ ತೆರಿಗೆ ಮತ್ತು ಕಳೆದ ಐದು ವರ್ಷಗಳಲ್ಲಿ ಅದರ ಆದಾಯ ಮತ್ತು ವೆಚ್ಚಗಳ ವಿವರಗಳನ್ನು ಸಲ್ಲಿಸಿದ ರಿಟರ್ನ್‌ಗಳ ಆಧಾರದ ಮೇಲೆ ಮಾಹಿತಿ ನೀಡಿದರು.

* ಶ್ರೀಲಂಕಾದ ಲೆಜೆಂಡ್ ಸ್ಪಿನ್ನರ್ ಹಾಗೂ ಖ್ಯಾತ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ತಮ್ಮ ಕ್ರಿಕೆಟ್ ನಿವೃತ್ತಿ ಬಳಿಕ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಈ ಮೂಲಕ ನಿರುದ್ಯೋಗಗಳಿಗೆ ಉದ್ಯೋಗ ನೀಡಲು ಮುಂದಾಗಿದ್ದಾರೆ. ತಮ್ಮ ಉದ್ಯಮಕ್ಕೆ ಉತ್ತರ ಕರ್ನಾಟಕ ಭಾಗವನ್ನು ಆಯ್ಕೆ ಮಾಡಿಕೊಂಡಿದ್ದು, ನಿರುದ್ಯೋಗ ಸಮಸ್ಯೆ ಬಹಳ ಇದ್ದು, ಸ್ವಲ್ಪ ಮಟ್ಟಿಗೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಉದ್ಯಮ ಸ್ಥಾಪನೆಗೆ ಮುತ್ತಯ್ಯ ಮುರಳೀಧರನ್ ಅವರು ಧಾರವಾಡ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ತವರು ರಾಷ್ಟ್ರ ಶ್ರೀಲಂಕಾದಲ್ಲಿ ಈಗಾಗಲೇ ತಂಪು ಪಾನೀಯ ಉತ್ಪಾದನಾ ಘಟಕವನ್ನು ಹೊಂದಿರುವ ಮುತ್ತಯ್ಯ ಮುರಳೀಧರನ್ ಅವರು, ಧಾರವಾಡ ತಾಲೂಕಿನ ಮುಮ್ಮಿಗಟ್ಟಿಯಲ್ಲೂ ಉತ್ಪಾದನೆ ವಿಸ್ತರಿಸಲು ಯೋಜನೆ ರೂಪಿಸಿದ್ದಾರೆ.

* ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಟೀಮ್ ಇಂಡಿಯಾ ಸರಣಿಯ ಹಿನ್ನಡೆಯನ್ನು 1-2ಕ್ಕೆ ತಗ್ಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದರೂ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಅವರ ಒಂದು ನಡೆ ಈಗ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅಭಿಮಾನಿಗಳು ಸೇರಿದಂತೆ ಕ್ರಿಕೆಟ್ ಪಂಡಿತರು ಕೂಡ ಈ ವಿಚಾರವಾಗಿ ಹಾರ್ದಿಕ್ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಹಾರ್ದಿಕ್ ಪಾಂಡ್ಯ ತಿಲಕ್ ವರ್ಮಾ ಅವರಿಗಿದ್ದ ಈ ಅವಕಾಶವನ್ನು ತಪ್ಪುವಂತೆ ಮಾಡಿದರು. ಇದು ಈಗ ಸಾಕಷ್ಟು ಟೀಕೆಗೆ ಕಾರಣವಾಗಿದೆ. ಈ ಬಗ್ಗೆ ಮಾಜಿ ಕ್ರಿಕೆಟಿಗ ಆಕಾಶ ಚೋಪ್ರ ಕೂಡ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ದ್ವಿಪಕ್ಷೀಯ ಸರಣಿ ಇದಾಗಿರುವ ಕಾರಣ ನೆಟ್‌ರನ್‌ರೇಟ್‌ ಅಗತ್ಯವಿಲ್ಲದಿದ್ದಾಗಲೂ ಹಾರ್ದಿಕ್ ಪಾಂಡ್ಯ ಯುವ ಆಟಗಾರನಿಗೆ ಅರ್ಧ ಶತಕ ಸಿಡಿಸಲು ಅವಕಾಶ ನೀಡದೆ ಸಿಕ್ಸರ್ ಸಿಡಿಸಿರುವುದು ಅರ್ಥವಾಗುತ್ತಿಲ್ಲ ಎಂದಿದ್ದಾರೆ ಆಕಾಶ್ ಚೋಪ್ರ.

* ಪಾಕಿಸ್ತಾನದ ಮಾಜಿ ನಾಯಕ ಪಾಕಿಸ್ತಾನ ಪುರುಷರ ಕ್ರಿಕೆಟ್‌ನ ಆಯ್ಕೆ ಮಂಡಳಿಯ ನೂತನ ಮುಖ್ಯಸ್ಥ ಇನ್‌ಜಮಾಮ್ ಉಲ್ ಹಕ್ ಅಫ್ಘಾನಿಸ್ತಾನ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ಹಾಗೂ ಏಷ್ಯಾಕಪ್ ಟೂರ್ನಿಗೆ ತಂಡವನ್ನು ಪ್ರಕಟಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ 18 ಆಟಗಾರರ ತಂಡವನ್ನು ಹಾಗೂ ಏಷ್ಯಾ ಕಪ್‌ಗೆ ಓರ್ವ ಆಟಗಾರನನ್ನು ಹೊರಗಿಟ್ಟು 17 ಆಟಗಾರರ ತಂಡವನ್ನು ಪ್ರಕಟಿಸಲಾಗಿದೆ. ಸೌದ್ ಶಕೀಲ್ ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ಮಾತ್ರವೇ ಆಯ್ಕೆಯಾಗಿದ್ದು ಏಷ್ಯಾಕಪ್‌ನಿಂದ ಹೊರಗುಳಿದ ಆಟಗಾರನಾಗಿದ್ದಾರೆ.

* ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿಯೇ ನಡೆಯುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯ ಟಿಕೆಟ್‌ಗಳನ್ನು ಆಗಸ್ಟ್ 25ರಿಂದ ಮಾರಾಟ ಮಾಡಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿವೆ. ಇದೇ ವೇಳೆ, ಅತಿದೊಡ್ಡ ಕ್ರಿಕೆಟ್ ವಿಶ್ವಕಪ್‌ನ ನವೀಕರಿಸಿದ ವೇಳಾಪಟ್ಟಿಯನ್ನು ಬುಧವಾರ, ಆಗಸ್ಟ್ 9ರಂದು ಬಿಡುಗಡೆ ಮಾಡಲಾಗಿದೆ.

* ಟಿ20 ಸರಣಿಯ ಮೂರು ಪಂದ್ಯಗಳು ಮುಕ್ತಾಯವಾದ ಬಳಿಕ ಭಾರತ ಕೊನೆಯ ಎರಡು ಪಂದ್ಯಗಳಿಗಾಗಿ ಯುಎಸ್‌ಎಗೆ ಪ್ರಯಾಣ ಬೆಳೆಸಿದೆ. ಅಂತಿಮ ಎರಡು ಪಂದ್ಯಗಳು ಯುಎಸ್‌ಎಯಲ್ಲಿ ಆಯೋಜನೆಯಾಗಲಿದ್ದು ಇಲ್ಲಿ ನಡೆಯುವ ಎರಡು ಪಂದ್ಯಗಳಲ್ಲಿಯೂ ಭಾರತ ಗೆಲುವು ಸಾಧಿಸಿದರೆ ಮಾತ್ರವೇ ಸರಣಿ ಭಾರತದ ವಶವಾಗಲು ಸಾಧ್ಯ. ಶನಿವಾರ ಹಾಗೂ ಭಾನುವಾರ ಈ ಎರಡು ಪಂದ್ಯಗಳು ಆಯೋಜನೆಯಾಗಲಿದೆ.

Story first published: Wednesday, August 9, 2023, 23:57 [IST]
Other articles published on Aug 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+