ತಂದೆಯಾದ ಖುಷಿಯಲ್ಲಿ ಆರ್‌ಸಿಬಿ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್; ಮಗುವಿನ ಹೆಸರು ಕೂಡ ಬಹಿರಂಗ!
ಆಸ್ಟ್ರೇಲಿಯಾ ಮತ್ತು ಆರ್‌ಸಿಬಿ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಪತ್ನಿ ವಿನಿ ರಾಮನ್ ಸೋಮವಾರ, ಸೆಪ್ಟೆಂಬರ್ 11ರಂದು ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ.
ಇನ್‌ಸ್ಟಾಗ್ರಾಮ್‌ನಲ್ಲಿ ಹೃದಯಸ್ಪರ್ಶಿ ಪೋಸ್ಟ್‌ನೊಂದಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ದಂಪತಿ ತಮ್ಮ ಮಗನ ಹೆಸರನ್ನು ಕೂಡ ಬಹಿರಂಗಪಡಿಸಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟಿಗ ಭಾರತದ ಅಳಿಯನೂ ಆಗಿದ್ದಾರೆ. ತಮಿಳುನಾಡು ಮೂಲದ ವಿನಿ ರಾಮನ್ ಅವರನ್ನು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು.

ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಗಂಡು ಮಗುವಿನ ಹೆಸರು ಹಾಗೂ ಹುಟ್ಟಿದ ದಿನಾಂಕವನ್ನು ಹಾಕಲಾಗಿದ್ದು, "11.09.2023, ಲೋಗನ್ ಮಾವೆರಿಕ್ ಮ್ಯಾಕ್ಸ್‌ವೆಲ್," ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಭಾರತೀಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ಮತ್ತು ಯುಜ್ವೇಂದ್ರ ಚಹಾಲ್ ಪತ್ನಿ ಧನಶ್ರೀ ವರ್ಮಾ ಸಾಮಾಜಿಕ ಮಾಧ್ಯಮದಲ್ಲಿ ವಿಶೇಷ ಪೋಸ್ಟ್‌ಗಳೊಂದಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ವಿನಿ ರಾಮನ್ ದಂಪತಿಗೆ ಶುಭ ಹಾರೈಸಿದ್ದಾರೆ.
ಈ ವರ್ಷದ ಮಾರ್ಚ್‌ನಲ್ಲಿ ವಾಂಖೆಡೆಯಲ್ಲಿ ನಡೆದ ಭಾರತದ ವಿರುದ್ಧದ ಏಕದಿನ ಪಂದ್ಯದಲ್ಲಿ ಆಡಿದಾಗಿನಿಂದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೆ ಆಸ್ಟ್ರೇಲಿಯಾ ತಂಡದ ಪರವಾಗಿ ಆಡಿಲ್ಲ. ಜುಲೈ ಆರಂಭದಲ್ಲಿ ವಾರ್ವಿಕ್‌ಷೈರ್‌ಗಾಗಿ ಇಂಗ್ಲಿಷ್ ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಆಡಿದ ನಂತರ ಯಾವುದೇ ಮಟ್ಟದ ಆಟದಲ್ಲಿ ಮೈದಾನಕ್ಕೆ ಇಳಿದಿಲ್ಲ.
ಕಳೆದ ವರ್ಷ ನವೆಂಬರ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಸ್ನೇಹಿತನ 50ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ನಡೆದ ಅಪಘಾತದಲ್ಲಿ ಕಾಲು ಮತ್ತು ಪಾದದ ಮುರಿತಕ್ಕೆ ಒಳಗಾಗಿದ್ದರು. ಅನಂತರ, ಚಿಕಿತ್ಸೆ ಪಡೆದು ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದರು. 2023ರ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಕಣಕ್ಕಿಳಿದಿದ್ದರು.
ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ಪ್ರಕಾರ, ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಪಾದಕ್ಕೆ ಮತ್ತೊಂದು ಸುತ್ತಿನ ಶಸ್ತ್ರಚಿಕಿತ್ಸೆಯನ್ನು ಎದುರು ನೋಡುತ್ತಿದ್ದಾರೆ. ಆದರೆ, ಇದು 2023ರ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ನಂತರ ಅವರನ್ನು ಆಯ್ಕೆಗಳಿಗೆ ಲಭ್ಯವಾಗುವಂತೆ ಮಾಡುತ್ತದೆ.
2015 ಮತ್ತು 2019ರಲ್ಲಿ ಆಸ್ಟ್ರೇಲಿಯಾ ಪರ ಎರಡು ವಿಶ್ವಕಪ್ ಅಭಿಯಾನಗಳ ಅನುಭವಿಯಾಗಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಐದು ಬಾರಿಯ ಚಾಂಪಿಯನ್ ತಂಡಕ್ಕೆ ವೇಗವಾಗಿ ರನ್ ಮಾಡುವ ಮತ್ತು ಬ್ಯಾಟ್, ಬಾಲ್ ಹಾಗೂ ಫೀಲ್ಡಿಂಗ್‌ನಲ್ಲಿ ದೊಡ್ಡ ಕೊಡುಗೆ ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications