IND vs AUS: ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ ಮಾತೃ ವಿಯೋಗ; ಕಪ್ಪು ಪಟ್ಟಿ ಧರಿಸಿ ಆಡಲಿರುವ ಆಟಗಾರರು

ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರ ತಾಯಿ ಮರಿಯಾ ಕಮ್ಮಿನ್ಸ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಶುಕ್ರವಾರ, ಮಾರ್ಚ್ 9ರ ರಾತ್ರಿ ನಿಧನರಾಗಿದ್ದಾರೆ.
ಇಂದೋರ್‌ನಲ್ಲಿ ನಡೆದ ಮೂರನೇ ಪಂದ್ಯಕ್ಕೂ ಮುನ್ನವೇ ಪ್ಯಾಟ್ ಕಮ್ಮಿನ್ಸ್ ಅವರು ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ. ಪ್ಯಾಟ್ ಕಮ್ಮಿನ್ಸ್ ಮತ್ತು ಅವರ ಕುಟುಂಬಕ್ಕೆ ಆಸ್ಟ್ರೇಲಿಯಾ ತಂಡದ ಆಟಗಾರರು "ಗೌರವದ ಸಂಕೇತವಾಗಿ ತೋಳುಗಳಿಗೆ ಕಪ್ಪು ಪಟ್ಟಿಗಳನ್ನು' ಧರಿಸಿ ಆಡಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ದೃಢಪಡಿಸಿದೆ.
ಸದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್‌ನ 2ನೇ ದಿನದ ಆರಂಭಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಶುಕ್ರವಾರ ಬೆಳಿಗ್ಗೆ ಟ್ವೀಟ್ ಮೂಲಕ ಪ್ಯಾಟ್ ಕಮ್ಮಿನ್ಸ್ ಅವರ ತಾಯಿಯ ಸಾವಿನ ಸುದ್ದಿಯನ್ನು ಖಚಿತಪಡಿಸಿದೆ.
"ರಾತ್ರೋರಾತ್ರಿ ಮರಿಯಾ ಕಮ್ಮಿನ್ಸ್ ಅವರ ನಿಧನದಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಪರವಾಗಿ, ಪ್ಯಾಟ್ ಕಮ್ಮಿನ್ಸ್ ಕುಟುಂಬ ಮತ್ತು ಅವರ ಸ್ನೇಹಿತರಿಗೆ ನಾವು ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ಆಸ್ಟ್ರೇಲಿಯನ್ ಪುರುಷರ ತಂಡವು ಇಂದು ಗೌರವಾರ್ಥವಾಗಿ ತೋಳುಗಳಿಗೆ ಕಪ್ಪು ಪಟ್ಟಿ ಧರಿಸಲಿದೆ," ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಟ್ವೀಟ್ ಮಾಡಿದೆ.
ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ಮುಕ್ತಾಯದ ನಂತರ ಪ್ಯಾಟ್ ಕಮ್ಮಿನ್ಸ್ ಅವರು ತಮ್ಮ ತಾಯಿಯ ಅನಾರೋಗ್ಯದ ಕಾರಣಕ್ಕಾಗಿ ಆರೈಕೆ ನೋಡಿಕೊಳ್ಳಲು ತವರಿಗೆ ಮರಳಿದ್ದರು.

"ನಾನು ನನ್ನ ಕುಟುಂಬದೊಂದಿಗೆ ಇರುವುವು ಉತ್ತಮ ಎಂದು ನಾನು ಭಾವಿಸುತ್ತೇನೆ. ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ನನ್ನ ಸಹ ಆಟಗಾರರಿಂದ ನಾನು ಪಡೆದ ಅಗಾಧ ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ ಮತ್ತು ಧನ್ಯವಾದಗಳನ್ನು ಅರ್ಪಿಸುತ್ತೇನೆ," ಎಂದು ಪ್ಯಾಟ್ ಕಮ್ಮಿನ್ಸ್ ಆಸ್ಟ್ರೇಲಿಯಾಕ್ಕೆ ತೆರಳುವ ಮುನ್ನ ವಿವರಿಸಿದ್ದರು.
2005ರಲ್ಲಿ ಮೊದಲ ಬಾರಿಗೆ ಸ್ತನ ಕ್ಯಾನ್ಸರ್ ಇರುವುದು ಖಚಿತವಾದ ನಂತರ, ತಮ್ಮ ತಾಯಿ ಇತ್ತೀಚಿನ ದಿನಗಳಲ್ಲಿ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು 29 ವರ್ಷದ ಪ್ಯಾಟ್ ಕಮ್ಮಿನ್ಸ್ ಬಹಿರಂಗಪಡಿಸಿದ್ದರು.
ನವೆಂಬರ್ 26, 2021ರಂದು ಅನುಭವಿ ವಿಕೆಟ್‌ಕೀಪರ್-ಬ್ಯಾಟರ್ ಟಿಮ್ ಪೈನ್ ಅವರ ರಾಜೀನಾಮೆ ನಂತರ ಪ್ಯಾಟ್ ಕಮ್ಮಿನ್ಸ್ ಅವರನ್ನು ಆಸ್ಟ್ರೇಲಿಯಾ ಟೆಸ್ಟ್ ತಂಡದ 47ನೇ ನಾಯಕರಾಗಿ ನೇಮಿಸಿತು. ಪೂರ್ಣ ಸಮಯದ ಆಸ್ಟ್ರೇಲಿಯಾ ಟೆಸ್ಟ್ ನಾಯಕನ ಪಾತ್ರವನ್ನು ವಹಿಸಿಕೊಂಡ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications