ಮೂರು ದಶಕದ ಹಿಂದಿನ ರಾಷ್ಟ್ರೀಯ ದಾಖಲೆ ಮುರಿದ ಭಾರತದ ಅಥ್ಲೀಟ್ ಅವಿನಾಶ್ ಸೇಬಲ್

ಭಾರತದ ಅಥ್ಲೀಟ್ ಅವಿನಾಶ್ ಸೇಬಲ್ ಬರೊಬ್ಬರಿ ಮೂರು ದಶಕದ ಹಿಂದಿನ ರಾಷ್ಟ್ರೀಯ ದಾಖಲೆಯನ್ನು ಮುರಿದು ಸಾಧನೆ ಮಾಡಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾನ್ ಜುವಾನ್ ಕ್ಯಾಪಿಸ್ಟ್ರಾನೊದಲ್ಲಿ ನಡೆದ ಸೌಂಡ್ ರನ್ನಿಂಗ್ ಟ್ರ್ಯಾಕ್ ವಿಭಾಗದಲ್ಲಿ ಈ ದಾಖಲೆ ಮಾಡಿದ್ದಾರೆ ಅವಿನಾಶ್ ಸೇಬಲ್. 30 ವರ್ಷ ವಯಸ್ಸಿನ ಪುರುಷರ 5 ಸಾವಿರ ಮೀಟರ್ ನಲ್ಲಿ ನೂತನ ರಾಷ್ಟ್ರೀಯ ದಾಖಲೆ ನಿರ್ಮಾಣವಾಗಿದೆ. ಅಮೆರಿಕನ್ ಮೀಟ್‌ನಲ್ಲಿ ಸೇಬಲ್ 13 ನಿಮಿಷ 25.65 ಸೆಕೆಂಡುಗಳಲ್ಲಿ ಗುರಿ ತಲುಪಿ 12 ನೇ ಸ್ಥಾನವನ್ನು ಪಡೆದು ಮಿಂಚಿದ್ದಾರೆ. ಅವಿನಾಶ್ ಸೇಬಲ್ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ 3 ಸಾವಿರ ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ರಾಷ್ಟ್ರೀಯ ದಾಖಲೆಯನ್ನು ಬರೆದಿದ್ದರು.
ಇದಕ್ಕೂ ಮುನ್ನ ಈ ರಾಷ್ಟ್ರೀಯ ದಾಖಲೆ ಬಹದ್ದೂರ್ ಪ್ರಸಾದ್ ಹೆಸರಿನಲ್ಲಿತ್ತು. 1992ರಲ್ಲಿ ಬರ್ಮಿಂಗ್‌ಹ್ಯಾಮ್‌ನ ನಡೆದ ಕ್ರೀಡಾಕೂಟದಲ್ಲಿ ಅವರು 13:29.70 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ದಾಖಲೆ ಬರೆದಿದ್ದರು. ಈ ಸುದೀರ್ಘ ಕಾಳದ ದಾಖಲೆಯನ್ನು ಮಹಾರಾಷ್ಟ್ರದ ಬೀಡ್ ಜಿಲ್ಲೆಯ 27 ವರ್ಷದ ಕ್ರೀಡಾಪಟು ಅವಿನಾಶ್ ಸೇಬಲ್ ಮುರಿದಿದ್ದಾರೆ. ಅವಿನಾಶ್ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕ್ರೀಡಾಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ.
ಅವಿನಾಶ್ ಸೇಬಲ್ ತಮ್ಮದೇ 3000 ಮೀಟರ್ ಸ್ಟೀಪಲ್‌ಚೇಸ್ ರಾಷ್ಟ್ರೀಯ ದಾಖಲೆಯನ್ನು ಹಲವು ಬಾರಿ ಮುರಿದು ಉತ್ತಮ ಪಡಿಸಿಕೊಂಡಿದ್ದಾರೆ. ಮಾರ್ಚ್‌ನಲ್ಲಿ ತಿರುವನಂತಪುರದಲ್ಲಿ ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ 2ರಲ್ಲಿ 8:16.21 ಸೆಕೆಂಡ್‌ಗಳಲ್ಲಿ ಗುರಿ ತಲುಪುವ ಮೂಲಕ ಅವರು ಏಳನೇ ಬಾರಿಗೆ ತಮ್ಮ ದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದರು.
ಅವಿನಾಶ್ ಸೇಬಲ್ ಜುಲೈ 15ರಿಂದ 24ರವರೆಗೆ ಅಮೆರಿಕದ ಯುಜೀನ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ಗೆ ಅವರು ಈಗಾಗಲೇ ಅರ್ಹತೆಯನ್ನು ಸಂಪಾದಿಸಿದ್ದಾರೆ. ಅವಿನಾಶ್ ಸೇಬಲ್ ಅವರ ಈ ಸಾಧನೆಯ ಬಳಿಕ ಭಾರತೀಯ ಅಥ್ಲೆಟಿಕ್ಸ್ ಮುಖ್ಯ ಕೋಚ್ ರಾಧಾಕೃಷ್ಣನ್ ನಾಯರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಅವಿನಾಶ್ ಅವರನ್ನು ಏಷ್ಯನ್ ಗೇಮ್ಸ್‌ನಲ್ಲಿ 3000 ಮೀಟರ್ ಸ್ಟೀಪಲ್‌ಚೇಸ್ ಮತ್ತು 5000 ಮೀ ಎರಡರಲ್ಲೂ ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದ್ದೇವೆ. ಅವರಿಗೆ ಎರಡೂ ಸ್ಪರ್ಧೆಗಳಲ್ಲಿ ಪದಕ ಗೆಲ್ಲುವ ಅವಕಾಶವಿದೆ" ಎಂದಿದ್ದಾರೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications