ತಮ್ಮ ತವರು ಜಿಲ್ಲೆಯಿಂದ ಸಂಸತ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಈ ಸ್ಟಾರ್ ಕ್ರಿಕೆಟಿಗ!
ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಹಾಗೂ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅವರು ಆಡಳಿತಾರೂಢ ಅವಾಮಿ ಲೀಗ್ ಪಕ್ಷದಿಂದ ತಮ್ಮ ನಾಮನಿರ್ದೇಶನವನ್ನು ದೃಢೀಕರಿಸಿದ ನಂತರ, ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ವರದಿ ತಿಳಿಸಿದೆ.
36 ವರ್ಷದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ತಮ್ಮ ತವರು ಜಿಲ್ಲೆ ಮಗರಾ-1 ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಚುನಾವಣೆಯನ್ನು ಮುಂಬರುವ 2024ರ ಜನವರಿ 7ರಂದು ನಿಗದಿಪಡಿಸಲಾಗಿದೆ.

ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಇತ್ತೀಚೆಗೆ ಮುಕ್ತಾಯಗೊಂಡ 2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಅನುಭವಿಸಿದ ಬೆರಳಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ.
ಗಮನಾರ್ಹವಾಗಿ, ಶಕೀಬ್ ಅಲ್ ಹಸನ್ ರಾಜಕೀಯದ ಕ್ಷೇತ್ರಕ್ಕೆ ಪ್ರವೇಶಿಸಿದ ಮೊದಲ ಬಾಂಗ್ಲಾದೇಶ ಕ್ರಿಕೆಟಿಗನಲ್ಲ. ಏಕೆಂದರೆ ಕ್ರಿಕೆಟಿಗರು ರಾಜಕಾರಣಿಯಾಗಿ ಬದಲಾಗುವ ಪ್ರವೃತ್ತಿ ಬಾಂಗ್ಲಾದೇಶ ಕ್ರಿಕೆಟ್‌ನಲ್ಲಿ ಹೊಸದೇನಲ್ಲ. ಬಿಸಿಬಿ ಅಧ್ಯಕ್ಷ ನಜ್ಮುಲ್ ಹಸನ್ ಅವರು ಕಿಶೋರ್‌ಗಂಜ್ ಕ್ಷೇತ್ರದಿಂದ ನಾಮನಿರ್ದೇಶನಗೊಂಡ ಬಳಿಕ 2009ರಿಂದ ಸಂಸದರಾಗಿದ್ದಾರೆ.
ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ನಿರ್ದೇಶಕ ಶಫಿಯುಲ್ ಆಲಂ ಚೌಧರಿ ಅವರು ಮೌಲ್ವಿಬಜಾರ್ ಕ್ಷೇತ್ರಕ್ಕೆ ನಾಮನಿರ್ದೇಶನಗೊಂಡಿದ್ದಾರೆ. ಇದಲ್ಲದೆ, ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗ ಮುಶ್ರಫೆ ಮೊರ್ತಾಜಾ ಅವರು ಹಿಂದಿನ ಚುನಾವಣೆಗಳಲ್ಲಿ ಸಂಸದರಾಗಿದ್ದರು ಮತ್ತು ಈ ವರ್ಷವೂ ನಾಮನಿರ್ದೇಶನ ಹೊಂದಿದ್ದಾರೆ.
ಇದೇ ವೇಳೆ, ಬಾಂಗ್ಲಾದೇಶ ರಾಷ್ಟ್ರೀಯ ತಂಡವು ಬಹು-ಸ್ವರೂಪದ ಸರಣಿಗಾಗಿ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲು ಸಿದ್ಧವಾಗಿದೆ. ಶಕೀಬ್ ಅಲ್ ಹಸನ್ ಅವರ ರಾಜಕೀಯ ಪ್ರಚಾರದ ಅಂತ್ಯದ ನಂತರ ತಂಡಕ್ಕೆ ಲಭ್ಯವಾಗುತ್ತಾರೆಯೇ ಎಂಬ ಕುತೂಹಲ ಇದೆ.
ಬಾಂಗ್ಲಾದೇಶ ವಿಶ್ವಕಪ್ ಸೋಲಿನ ನಂತರ ಬದಲಾವಣೆ ಎದುರು ನೋಡುತ್ತಿದೆ
ಬಾಂಗ್ಲಾದೇಶ ತಂಡವು ನವೆಂಬರ್ 28ರಿಂದ ಬಹು-ಸ್ವರೂಪದ ಸರಣಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಈ ವೇಳೆ ಉಭಯ ತಂಡಗಳು ಎರಡು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಲಿವೆ.
ತವರಿನಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ ನಂತರ, ಬಾಂಗ್ಲಾದೇಶ ತಂಡವು ವೈಟ್-ಬಾಲ್ ಸರಣಿಗಾಗಿ ನ್ಯೂಜಿಲೆಂಡ್‌ಗೆ ಪ್ರಯಾಣಿಸಲಿದೆ. ಇದು ಡಿಸೆಂಬರ್ 11ರಿಂದ 31ರ ನಡುವೆ ನಡೆಯಲಿದೆ.
ಇತ್ತೀಚೆಗೆ ಮುಕ್ತಾಯಗೊಂಡ 2023ರ ಏಕದಿನ ವಿಶ್ವಕಪ್‌ನಲ್ಲಿ ತಮ್ಮ ಕಳಪೆ ಅಭಿಯಾನದ ನಂತರ, ಬಾಂಗ್ಲಾದೇಶ ತಂಡವು ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಹೇಗೆ ಎದುರಿಸುತ್ತದೆ ಎಂಬುದನ್ನು ನೋಡಲು ಆಸಕ್ತಿ ಕೆರಳಿಸಿದೆ.
ಶಕೀಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ ತಂಡವು ಮತ್ತೊಮ್ಮೆ ನಾಕೌಟ್ ಹಂತಕ್ಕೆ ಪ್ರವೇಶಿಸಲು ವಿಫಲವಾದ ಹಿನ್ನೆಲೆ, ವಿಶ್ವಕಪ್ ಪಂದ್ಯಾವಳಿಯ ಗುಂಪು ಹಂತದಲ್ಲಿ ಹೊರಹಾಕಲ್ಪಟ್ಟಿತು.
ಬಾಂಗ್ಲಾದೇಶ ತಂಡವು ಕೇವಲ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಮಾತ್ರ ಎರಡು ಗೆಲುವು ಪಡೆದರೆ, ಏಳು ಪಂದ್ಯಗಳಲ್ಲಿ ಸೋಲು ಕಂಡಿತು. ಆದರೆ, ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನವನ್ನು ಗಳಿಸುವ ಮೂಲಕ ಬಾಂಗ್ಲಾದೇಶ 2025ರ ಚಾಂಪಿಯನ್ಸ್ ಟ್ರೋಫಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications